• search
  • Live TV
ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮೈಸೂರು: ಬಾಲಕಿಯ ಮೇಲಿನ ಅತ್ಯಾಚಾರ ಆರೋಪಿಗೆ 20 ವರ್ಷ ಜೈಲು ಶಿಕ್ಷೆ

By ಮೈಸೂರು ಪ್ರತಿನಿಧಿ
|

ಮೈಸೂರು, ಸೆಪ್ಟೆಂಬರ್ 25: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದ ಆರೋಪಿಗೆ 20 ವರ್ಷ ಜೈಲು ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿ ಮೈಸೂರು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಧೀಶರು ಗುರುವಾರ ತೀರ್ಪು ನೀಡಿದ್ದಾರೆ.

ಶಿಕ್ಷೆಗೊಳಗಾದ ವ್ಯಕ್ತಿಯನ್ನು ಎಚ್‌.ಡಿ ಕೋಟೆಯ ಚಂದ್ರು ಎಂದು ಗುರುತಿಸಲಾಗಿದೆ. ಕಳೆದ 2018 ರ ಜೂ.14 ರಂದು ರಾತ್ರಿ 8.30ರ ವೇಳೆಯಲ್ಲಿ ತನ್ನ ಪರಿಚಯಸ್ಥರ ಮನೆಯಲ್ಲಿ ಟಿವಿ ವೀಕ್ಷಿಸುತ್ತಿದ್ದ ಬಾಲಕಿಯನ್ನು ಮನೆಗೆ ಬಿಡುವುದಾಗಿ ಹೇಳಿ ನಂಬಿಸಿ, ಆಕೆಯ ಮನೆ ಹಿಂಭಾಗಕ್ಕೆ ಕರೆದೊಯ್ದು ಬಲಾತ್ಕಾರವಾಗಿ ಬಾಯಿ ಮುಚ್ಚಿ ಅತ್ಯಾಚಾರ ನಡೆಸಿದ್ದ. ಈ ಸಂಬಂಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

ಮೈಸೂರಲ್ಲಿ ಇನ್ನು ಮುಂದೆ ಮಾಸ್ಕ್ ಧರಿಸದಿದ್ದರೆ ಕಠಿಣ ಕ್ರಮ

ಅಂದಿನ ಡಿವೈಎಸ್ಪಿ ಭಾಸ್ಕರ ರೈ ಅವರ ಮಾರ್ಗದರ್ಶನದಲ್ಲಿ ತನಿಖೆ ನಡೆಸಿದ್ದ ವೃತ್ತ ನಿರೀಕ್ಷಕ ಹರೀಶ್‌ಕುಮಾರ್, ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಸುದೀರ್ಘ ವಿಚಾರಣೆ ನಡೆಸಿದ ಎಸ್‌ಸಿ, ಎಸ್‌ಟಿ-1 ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಬಿ.ಎಸ್.ಜುಂಶ್ರೀ ಅವರು ಸಾಕ್ಷ್ಯಾಧಾರದ ಮೇಲೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿ ಚಂದ್ರುಗೆ 20 ವರ್ಷ ಜೈಲು ಶಿಕ್ಷೆ ಮತ್ತು 50 ಸಾವಿರ ರೂ. ದಂಡ, ತಪ್ಪಿದ್ದಲ್ಲಿ ಮತ್ತೆ 6 ತಿಂಗಳು ಸೆರೆವಾಸ ವಿಧಿಸಿ ತೀರ್ಪಿತ್ತಿದ್ದಾರೆ.

ನೊಂದ ಬಾಲಕಿಗೆ ಪರಿಹಾರವಾಗಿ 7 ಲಕ್ಷ ರೂ. ಪರಿಹಾರ ನೀಡಲಾಗಿದೆ ಎಂದು ಸರ್ಕಾರಿ ಅಭಿಯೋಜಕಿ ಬಿ.ಎಸ್.ಮಂಜುಳ ತಿಳಿಸಿದರು. ಸರ್ಕಾರದ ಪರ ಅಭಿಯೋಜಕರಾದ ಶಿವರುದ್ರಸ್ವಾಮಿ ಹಾಗೂ ಬಿ.ಎಸ್.ಮಂಜುಳ ವಾದ ಮಂಡಿಸಿದ್ದರು.

English summary
The Rape accused was sentenced to 20 years in prison and Rs. 50 Thousand The Mysore District and Sessions Court judge on Thursday sentenced the accused.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X