ಮೈಸೂರಿನಲ್ಲಿ ಯುವತಿ ಮೇಲೆ ನಾಲ್ವರಿಂದ ಸಾಮೂಹಿಕ ಅತ್ಯಾಚಾರ

ಮೈಸೂರು, ಫೆಬ್ರವರಿ 9 : ಯುವತಿ ಮೇಲೆ ನಾಲ್ವರು ಅತ್ಯಾಚಾರ ಎಸಗಿರುವ ಘಟನೆ ಮೈಸೂರಿನಲ್ಲಿ ನಡೆದಿದ್ದು, ಪ್ರಕರಣ ದಾಖಲಾಗಿದೆ.

ಭಾನುವಾರ ರಾತ್ರಿ ಆಲನಹಳ್ಳಿ ಬಳಿ ರಸ್ತೆ ಬದಿಯಲ್ಲಿ ಉಪಾಹಾರ ಸೇವಿಸಿದ ನಂತರ ಯುವತಿಯು ಕಳೆದ ಮೂರು ತಿಂಗಳ ಹಿಂದಷ್ಟೆ ಪರಿಚಯವಾಗಿದ್ದ ಕಾರು ಚಾಲಕ ಚಿರಾಗ್‌ ಎಂಬಾತನಿಗೆ ಫೋನ್‌ ಮಾಡಿ ಮನೆಗೆ ಕರೆದುಕೊಂಡು ಹೋಗುವಂತೆ ಕೋರಿದ್ದಾರೆ.

ಈ ವೇಳೆ ಬಂದ ಚಿರಾಗ್, ಯುವತಿಯನ್ನು ಕಾರಿನಲ್ಲಿ ಹತ್ತಿಸಿಕೊಂಡು ಕೊಳ್ಳೇಗಾಲದ ಕಡೆಗೆ ಹೋಗುವ ರಸ್ತೆಯಲ್ಲಿ ಅರ್ಧ ಕಿ.ಮೀ ಹೋಗಿದ್ದಾನೆ. ನಂತರ ಇತರ ಮೂವರನ್ನು ಕಾರಿಗೆ ಹತ್ತಿಸಿಕೊಂಡಿದ್ದಾರೆ. ಮುಂದೆ ನಿರ್ಜನ ಪ್ರದೇಶವೊಂದರಲ್ಲಿ ಯುವತಿ ಮೇಲೆ ನಾಲ್ವರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಬಳಿಕ ಯುವತಿಯನ್ನು ಅಲ್ಲೇ ಬಿಟ್ಟು ತೆರಳಿದ್ದಾರೆ. ಆಟೋ ಮೂಲಕ ಯುವತಿ ಮನೆ ಸೇರಿದ್ದಾರೆ.

20 year old girl gand raped in mysuru

ದೂರು ಕೊಡುವುದು ಬೇಡ ಎಂದು ಯುವತಿ ಪೋಷಕರು ಹೇಳಿದ್ದರು. ಆದರೆ, ಗೆಳತಿಯೊಬ್ಬರು ದೂರು ನೀಡುವಂತೆ ಹೇಳಿದ್ದರಿಂದ ತಡವಾಗಿ ದೂರು ನೀಡುತ್ತಿರುವುದಾಗಿ ಯುವತಿ ತಿಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರು ಆರೋಪಿಯ ಹುಡುಕಾಟ ನಡೆಸುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+