ಪ್ರವಾಸೋದ್ಯಮ ಕೇಂದ್ರಿತ ದಸರಾ ಆಚರಣೆ: ಸಿಎಂ ಕುಮಾರಸ್ವಾಮಿ

ಬೆಂಗಳೂರು, ಜುಲೈ 11: ಈ ಬಾರಿ ಮೈಸೂರು ದಸರಾವನ್ನು ಪ್ರವಾಸೋದ್ಯಮ ಕೇಂದ್ರಿತವಾಗಿ ಆಚರಿಸುವಂತೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಸಲಹೆ ನೀಡಿದರು. ಇಂದು (ಜುಲೈ 11) ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮೈಸೂರು ದಸರಾ ಸಿದ್ಧತೆ ಕುರಿತು ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಸಿಎಂ ಮಾತನಾಡಿದರು.

ಮೈಸೂರು ಹಾಗೂ ಸುತ್ತಮುತ್ತಲಿನ ಜಿಲ್ಲೆಗಳ ಪ್ರವಾಸಿ ತಾಣಗಳಲ್ಲಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು ಪೂರಕವಾಗಿ ಮೈಸೂರು ದಸರಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಮುಖ್ಯಮಂತ್ರಿಗಳು ಸಲಹೆ ನೀಡಿದರು.

ಪ್ರತಿವರ್ಷದ ಕಾರ್ಯಕ್ರಮಗಳಿಗಿಂತ ವಿಭಿನ್ನ ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ಕುಮಾರಸ್ವಾಮಿ ಈ ಸಂದರ್ಭದಲ್ಲಿ ಸೂಚಿಸಿದರು. ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಜಲಾಶಯಗಳು ಭರ್ತಿಯಾಗುತ್ತಿವೆ.

2018 Mysuru Dasara more on toursim centric, CM HD Kumaraswamy

ಈ ಹಿನ್ನೆಲೆಯಲ್ಲಿ ಜುಲೈ 20ರಂದು ತಲಕಾವೇರಿಗೆ ಪೂಜೆ ಸಲ್ಲಿಸಿ, ಮೈಸೂರು ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ, ಕೃಷ್ಣರಾಜಸಾಗರ ಮತ್ತು ಕಬಿನಿ ಜಲಾಶಯಗಳಿಗೆ ಬಾಗಿನ ಅರ್ಪಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಸಭೆಯಲ್ಲಿ ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ, ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎನ್. ಮಹೇಶ್, ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಿ.ಎಸ್. ಪುಟ್ಟರಂಗಶೆಟ್ಟಿ, ಕನ್ನಡ ಮತ್ತು ಸಂಸ್ಕøತಿ ಸಚಿವ ಡಾ. ಜಯಮಾಲ ಭಾಗವಹಿಸಿದ್ದರು,

ಜೊತೆಗೆ, ಆ ಭಾಗದ ಶಾಸಕರು, ಇತರ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+