ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರಿನಲ್ಲಿ ತಲೆಮರೆಸಿಕೊಂಡಿರುವ ಕೊರೊನಾ ಸೋಂಕಿತರ ಸಂಖ್ಯೆ ಎಷ್ಟು ಗೊತ್ತೆ?

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಆಗಸ್ಟ್‌ 03: ಇಡೀ ದೇಶವೇ ಕೊರೊನಾ ಸೋಂಕಿನ ವಿರುದ್ಧ ಹೋರಾಡುತ್ತಿರುವ ಈ ಸಂದರ್ಭದಲ್ಲಿ ಪರೀಕ್ಷೆಯಲ್ಲಿ ಪಾಸಿಟಿವ್ ದೃಢಪಟ್ಟವರು ನಾಪತ್ತೆ ಆಗಿರುವುದು ಸರ್ಕಾರಕ್ಕೆ ದೊಡ್ಡ ತಲೆನೋವಾಗಿದೆ.

Recommended Video

SpaceX and NASA completes space mission successfully | Oneindia Kannada

ಸರ್ಕಾರ ಏನೇ ಪರೀಕ್ಷೆ ನಡೆಸಿ ಎಷ್ಟೇ ಕಟ್ಟುನಿಟ್ಟಿನ ಕ್ರಮ ಕೈಗೊಂಡರೂ ಸೋಂಕಿತರಿಂದಾಗಿ ಆರೋಗ್ಯವಂತರೂ ಸೋಂಕಿಗೆ ತುತ್ತಾಗಬೇಕಿದೆ. ದಿನೇ ದಿನೇ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಲಿದ್ದು, ರಾಜಧಾನಿ ಬೆಂಗಳೂರು ಒಂದರಲ್ಲೇ ಸಾವಿರಾರು ಜನ ಸೋಂಕಿತರು ನಕಲಿ ವಿಳಾಸ ನೀಡಿ ಸರ್ಕಾರಕ್ಕೆ ವಂಚಿಸಿದ್ದಾರೆ.

ಕೊರೊನಾ ಪರೀಕ್ಷೆಗೆ ಸುಳ್ಳು ಮಾಹಿತಿ ನೀಡಿದರೆ FIR; ಮೈಸೂರು ಡಿಸಿಕೊರೊನಾ ಪರೀಕ್ಷೆಗೆ ಸುಳ್ಳು ಮಾಹಿತಿ ನೀಡಿದರೆ FIR; ಮೈಸೂರು ಡಿಸಿ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಸೋಂಕಿತರು ತಪ್ಪು ಮಾಹಿತಿ ಮತ್ತು ಸುಳ್ಳು ಮೊಬೈಲ್‌ ಸಂಖ್ಯೆ ನೀಡಿ ತಲೆಮರೆಸಿಕೊಂಡಿರುವುದು ಬೆಳಕಿಗೆ ಬಂದಿದೆ. ಜಿಲ್ಲೆಯಲ್ಲಿ ಕೊರೊನಾ ತಡೆಯಲು ಜಿಲ್ಲಾಡಳಿತ ಹಲವು ಕ್ರಮಗಳನ್ನು ಕೈಗೊಂಡಿದೆ. ಈ ನಡುವೆ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಬಂದಿರುವ ವ್ಯಕ್ತಿಗಳು ತಮ್ಮ ಮೊಬೈಲ್‍ ನಂಬರನ್ನು ತಪ್ಪಾಗಿ ನೀಡಿರುವುದು ಕಂಡು ಬಂದಿದೆ.

 230 Corona Infected People Escaped By Giving Wrong Information In Mysuru

ಜಿಲ್ಲೆಯಲ್ಲಿ ಈವರೆಗೂ ಕೋವಿಡ್ 19 ಪರೀಕ್ಷೆಗೊಳಪಟ್ಟ 230 ಜನರು ತಪ್ಪು ನಂಬರ್ ನೀಡಿದ್ದು, ಈ ಎಲ್ಲಾ 230 ಜನಕ್ಕೂ ಕೊರೊನಾ ಪಾಸಿಟಿವ್ ಬಂದಿದೆ. ಈ ಬಗ್ಗೆ ಮಾಹಿತಿ ನೀಡುವ ಉದ್ದೇಶದಿಂದ ಸಂಬಂಧಪಟ್ಟ ವ್ಯಕ್ತಿಗೆ ಕರೆ ಮಾಡಿದಾಗ ರಾಂಗ್ ನಂಬರ್ ನೀಡಿರುವುದು ಪತ್ತೆಯಾಗಿದೆ. ಇದೀಗ ರಾಂಗ್ ನಂಬರ್ ಕೊಟ್ಟವರ ಪತ್ತೆಯೇ ಜಿಲ್ಲಾಡಳಿತಕ್ಕೆ ತಲೆ ನೋವಾಗಿದೆ.

ಕೆಲವರು ತಪ್ಪು ನಂಬರ್ ಕೊಟ್ಟಿದ್ದಾರೆ, ಕೆಲವರು ಮೊಬೈಲ್ ಸ್ವಿಚ್ ಆಫ್ ಮಾಡಿದ್ದಾರೆ ಎಂದು ಮೈಸೂರು ಜಿಲ್ಲಾ ಆರೋಗ್ಯಾಧಿಕಾರಿ ಡಾ. ವೆಂಕಟೇಶ್ ತಿಳಿಸಿದ್ದಾರೆ. ಇದೀಗ ಸೋಂಕಿತರ ಪತ್ತೆ ದೊಡ್ಡ ಸವಾಲಾಗಿದೆ ಎಂದು ಹೇಳಿದ್ದಾರೆ.

English summary
230 coronavirus infected people in mysuru escaped by giving wrong information during coronavirus test became headache for district administration
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X