ಮೈಸೂರಿನಲ್ಲಿ ಮಹಿಳೆ ನಾಪತ್ತೆ: ಇವರು ಕಂಡರೆ ಒಮ್ಮೆ ತಿಳಿಸಿ

ಬೆಂಗಳೂರು, ಏ. 20: ಚಿತ್ರದಲ್ಲಿರುವ ಈಕೆ ಹೆಸರು ಮೊಹಮದ್ದಿ. ಮೂರು ವರ್ಷದ ಹಿಂದೆ ಮದುವೆಯಾಗಿದ್ದಳು. ಮಕ್ಕಳಾಗಲಿಲ್ಲ ಎಂಬ ಖಿನ್ನತೆಗೆ ಒಳಗಾಗಿದ್ದಳು. ನಿಮ್ಹಾನ್ಸ್ ನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ, ಏ. 11 ರಂದು ಮೈಸೂರಿನಿಂದ ಕಾಣೆಯಾಗಿದ್ದಾರೆ.

ಮೊಹಮದ್ದಿ ಕಾಣೆಯಾಗಿರುವ ಬಗ್ಗೆ ಮೈಸೂರಿನ ಮಂಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕನ್ನಡ ಮತ್ತು ಉರ್ದು ಭಾಷೆ ಮಾತನಾಡುತ್ತಾರೆ. ಕೆಂಪು ಬಣ್ಣದ ಚೂಡಿದಾರ ಧರಿಸಿರುತ್ತಾರೆ. ಇವರ ಬಗ್ಗೆ ಸುಳಿವು ಸಿಕ್ಕರೆ ಮಾಹಿತಿ ನೀಡುವಂತೆ ಕುಟುಂಬಸ್ಥರು ಮನವಿ ಮಾಡಿದ್ದಾರೆ.

25-year-old woman suffering from mental depression was Missed in Mysore

ಮಹಮದ್ದಿ ಅವರಿಗೆ ಮೂರು ವರ್ಷದ ಹಿಂದೆ ಮದುವೆಯಾಗಿತ್ತು. ಮೈಸೂರು ತಾಲೂಕಿನ ದೊಡ್ಡ ಕಾಟೂರು ನಿವಾಸಿ ಜಾಫರ್ ಜತೆ ಮದುವೆಯಾಗಿತ್ತು. ಮಕ್ಕಳಾಗಲಿಲ್ಲ ಎಂಬ ಕಾರಣಕ್ಕೆ ದಂಪತಿ ನಡುವೆ ಜಗಳ ನಡೆಯುತ್ತಿತ್ತು. ಒಂದು ವರ್ಷದ ಹಿಂದೆ ಮಹಮದ್ದಿ ಮೈಸೂರಿನಲ್ಲಿರುವ ತನ್ನ ಅಣ್ಣನ ಮನೆಯಲ್ಲಿಯೇ ವಾಸವಾಗಿದ್ದರು. ಮಕ್ಕಳಾಗಲಿಲ್ಲ ಎಂಬ ಖಿನ್ನತೆಯಿಂದ ಬಳಲುತ್ತಿದ್ದ ಮಹಮದ್ದಿಗೆ ನಿಮ್ಹಾನ್ಸ್ ನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಏ. 11 ರಂದು ಮನೆಯಿಂದ ಹೊರಗೆ ಹೋಗಿ ಬರುವುದಾಗಿ ಹೇಳಿ ಕಾಣೆಯಾಗಿದ್ದು, ಈವರೆಗೂ ಪತ್ತೆಯಾಗಿರುವುದಿಲ್ಲ.

ಮೈಸೂರು ರೈಲ್ವೇ ನಿಲ್ದಾಣದಲ್ಲಿ ರೈಲು ಹತ್ತಿ ಬೆಂಗಳೂರಿಗೆ ಬಂದಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈಕೆ ಬೆಂಗಳೂರಿಗೆ ಬಂದಿರುವ ಸಾಧ್ಯತೆಯಿದ್ದು, ಎಲ್ಲಾದರೂ ಕಂಡು ಬಂದಲ್ಲಿ ಮಾಹಿತಿ ನೀಡುವಂತೆ ಪೊಲೀಸರು ಮನವಿ ಮಾಡಿದ್ದಾರೆ.

25-year-old woman suffering from mental depression was Missed in Mysore

ಈಕೆ ಪತ್ತೆಯಾದರೆ ಸಂಪರ್ಕಿಸಬೇಕಾದ ಮೊಬೈಲ್ ನಂಬರ್: 9845862184 ಅಥವಾ 0821-2418113

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+