ಪತಿ ತೀರಿಕೊಂಡ ದುಃಖದಲ್ಲಿ 29 ವರ್ಷದ ಮಹಿಳೆ ಆತ್ಮಹತ್ಯೆ
ಮೈಸೂರು, ಫೆಬ್ರವರಿ 20 : ಪತಿಯ ಸಾವಿನಿಂದಾಗಿ ಪತ್ನಿ ಮನನೊಂದು ಆತ್ಮಹತ್ಯೆಗೆ ಶರಣಾದ ಹೃದಯವಿದ್ರಾವಕ ಘಟನೆ ಮೈಸೂರಿನ ಪಿರಿಯಾಪಟ್ಟಣ ತಾಲೂಕಿನ ಮಲ್ಲಿನಾಥಪುರ ಗ್ರಾಮದಲ್ಲಿ ನಡೆದಿದೆ.
ಪುರುಷೋತ್ತಮ್ ಕಳೆದ ಶುಕ್ರವಾರ ಪಂಪ್ ಸೆಟ್ ವಿದ್ಯುತ್ ಪ್ರವಹಿಸಿ ಮೃತಪಟ್ಟಿದ್ದರು. ಗಂಡನ ಸಾವಿನಿಂದ ಮನ ನೊಂದು ಶ್ವೇತಾ (29) ಸೋಮವಾರ ವಿಷ ಸೇವಿಸಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಈ ಸಂಬಂಧ ಪಿರಿಯಾಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಂದೆ-ತಾಯಿಯನ್ನು ಕಳೆದುಕೊಂಡ ಉತ್ತಮ್, ಹರ್ಷಿತ್ ಆನಾಥರಾಗಿದ್ದಾರೆ. ಆ ಮಕ್ಕಳ ರೋದನ ಹೃದಯ ಹಿಂಡುವಂತಿದೆ.

ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೆ ಯುವತಿ ಬಲಿ
ಚಾಲಕನ ನಿಯಂತ್ರಣ ತಪ್ಪಿದ ಕಾರು ಉರುಳಿ, ಅದರಲ್ಲಿದ್ದ ಯುವತಿ ಸಾವನ್ನಪ್ಪಿದ ಘಟನೆ ಮಂಗಳವಾರ ನಡೆದಿದೆ. ಮೃತ ಯುವತಿ ಬಿ.ಎಂ ಶ್ರೀ ನಗರದ ನಿವಾಸಿ ವಿಜೇತಾ(21)ಎಂದು ಹೇಳಲಾಗಿದ್ದು, ಇವರು ತನ್ನ ಮೂವರು ಸ್ನೇಹಿತರೊಂದಿಗೆ ತಲಕಾಡಿಗೆ ತೆರಳಿದ್ದರು.

ಅಲ್ಲಿಂದ ಮರಳಿ ಬರುವಾಗ ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿ ಆಗಿದೆ. ಅದರಲ್ಲಿದ್ದ ಮೂವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ವಿಜೇತಾ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ. ತಲಕಾಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












Click it and Unblock the Notifications