ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರಿನಲ್ಲಿ 33 ಆಂಗ್ಲ ಮಾಧ್ಯಮ ಸರ್ಕಾರಿ ಶಾಲೆಗಳು ಆರಂಭ!

|
Google Oneindia Kannada News

ಮೈಸೂರು, ಮೇ.7:ರಾಜ್ಯ ಸರ್ಕಾರ ಜಾರಿಗೆ ತಂದಿರುವ 1 ಸಾವಿರ ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ತೆರೆಯುವ ಯೋಜನೆಯಡಿ ಜಿಲ್ಲೆಯಲ್ಲಿ 33 ಸರ್ಕಾರಿ ಶಾಲೆಗಳು ಆಯ್ಕೆಯಾಗಿವೆ.

ಖಾಸಗಿ ಶಾಲೆಗಳ ಹೊಡೆತಕ್ಕೆ ಸಿಕ್ಕು ನಲುಗುತ್ತಿರುವ ಸರ್ಕಾರಿ ಶಾಲೆಗಳಿಗೆ ಜೀವ ತುಂಬಲು ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ರಾಜ್ಯದ 1 ಸಾವಿರ ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಪಬ್ಲಿಕ್ ಶಾಲೆ ತೆರೆಯುವ ಯೋಜನೆಯನ್ನು ರಾಜ್ಯ ಸರ್ಕಾರ ಕಳೆದ ಬಾರಿಯ ಅವಧಿಯಲ್ಲೇ ಯೋಜನೆ ಹಾಕಿಕೊಂಡಿತ್ತು.

ಹ್ಯಾಪಿ ನ್ಯೂಸ್: ಶಾಲಾ ಮಕ್ಕಳ ಬ್ಯಾಗ್ ಭಾರ ಇಳಿಸಿದ ಸರ್ಕಾರಹ್ಯಾಪಿ ನ್ಯೂಸ್: ಶಾಲಾ ಮಕ್ಕಳ ಬ್ಯಾಗ್ ಭಾರ ಇಳಿಸಿದ ಸರ್ಕಾರ

ಇದಕ್ಕೆ ಸಾಹಿತ್ಯ ಹಾಗೂ ರಾಜಕೀಯ ವಲಯದಲ್ಲಿ ತೀವ್ರ ವಿರೋಧ ವ್ಯಕ್ತವಾಗಿತ್ತು. ಇದನ್ನು ವಿರೋಧಿಸಿ ಸಾಹಿತಿಗಳು ಸರಕಾರಕ್ಕೆ ಮನವಿಯನ್ನು ಸಲ್ಲಿಸಿದ್ದರು. ಈ ಮಧ್ಯಂತರ ಯೋಜನೆಯನ್ನು ಘೋಷಣೆ ಮಾಡಿ ಅದಕ್ಕಾಗಿ ಸಾವಿರಾರು ಕೋಟಿ ರೂ.ಹಣವನ್ನು ಸರ್ಕಾರ ಮೀಸಲಿಟ್ಟಿದೆ.

33 english medium government school will starts in Mysuru district

ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮಗಳ ತರಗತಿ ಆರಂಭಕ್ಕೆ ಕನ್ನಡದ ಬಹುತೇಕ ಸಾಹಿತಿಗಳು ಕನ್ನಡ ಪರ ಸಂಘಟನೆಗಳು ಸಂಘ ಸಂಸ್ಥೆಗಳು ಮಾತ್ರವಲ್ಲ, ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯನವರು ಸಹ ಆಕ್ಷೇಪ ವ್ಯಕ್ತಪಡಿಸಿದ್ದರು.

 ಬೆಂಗಳೂರಿನ 138 ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿ ಶೀಘ್ರ ಆರಂಭ ಬೆಂಗಳೂರಿನ 138 ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿ ಶೀಘ್ರ ಆರಂಭ

ಇಂಗ್ಲಿಷ್ ಮಾಧ್ಯಮ ತರಗತಿ ಆರಂಭಿಸುವುದು ಬೇಡ ಇಂಗ್ಲಿಷ್ ಒಂದು ಭಾಷೆಯನ್ನಾಗಿ ಕಲಿಸಿ,ಇಲ್ಲವಾದಲ್ಲಿ ಈ ಯೋಜನೆ ಕನ್ನಡ ಭಾಷೆಯ ಮೇಲೆ ಪ್ರತಿನಿತ್ಯ ಪರಿಣಾಮ ಬೀರಲಿದೆ ಎಂದು ವಿರೋಧಿಸಿದ್ದರು. ಆದರೆ ಸರ್ಕಾರ ಪ್ರಾಥಮಿಕ ಶಾಲೆಯಿಂದಲೇ ಇಂಗ್ಲಿಷ್ ಮಾಧ್ಯಮ ಶಿಕ್ಷಣ ನೀಡುವುದು ಮಕ್ಕಳ ಶೈಕ್ಷಣಿಕವಾಗಿ ಪ್ರಗತಿ ಹೊಂದಲು ಸಾಧ್ಯವೆಂಬ ನಿರ್ಣಯದಿಂದ ರಾಜ್ಯದ ಒಂದು ಸಾವಿರ ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಪಪ್ಪಿ ಶಾಲೆಗಳನ್ನು ತೆರೆದಿದೆ.

 ಉರುಳುತ್ತಿದ್ದ ಸರ್ಕಾರಿ ಶಾಲೆಯನ್ನು ಉಳಿಸಿದ ಅಪಾರ್ಟ್‌ಮೆಂಟ್ ನಿವಾಸಿಗಳು ಉರುಳುತ್ತಿದ್ದ ಸರ್ಕಾರಿ ಶಾಲೆಯನ್ನು ಉಳಿಸಿದ ಅಪಾರ್ಟ್‌ಮೆಂಟ್ ನಿವಾಸಿಗಳು

ಈ ಯೋಜನೆ ಪ್ರಕಾರ ಜಿಲ್ಲೆಯ ಒಂದು ಕ್ಷೇತ್ರಕ್ಕೆ ಮೂರು ಶಾಲೆಗಳಿವೆ. ಒಟ್ಟಾರೆ 33 ಇಂಗ್ಲಿಷ್ ಮಾಧ್ಯಮ ಶಾಲೆಗಳನ್ನು ತೆರೆಯಲು ಸಾರ್ವಜನಿಕ ಶಿಕ್ಷಣ ಇಲಾಖೆ ಮುಂದಾಗಿದೆ. ಒಂದರಿಂದ ಹತ್ತನೇ ತರಗತಿಯವರೆಗೆ ಒಂದೇ ಸ್ಥಳದಲ್ಲಿ ಅಥವಾ ಕೆಲವೇ ಅಂತರದಲ್ಲಿ ಇರುವ ವಿದ್ಯಾರ್ಥಿಗಳ ಸಾಮರ್ಥ್ಯ, ಮೂಲಸೌಕರ್ಯ , ಶಾಲಾ ದಾಖಲಾತಿ ಮತ್ತು ಕೆಲವು ಮಾನದಂಡಗಳ ಮೇಲೆ ಶಾಲೆಗಳನ್ನು ಆಯ್ಕೆ ಮಾಡಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಜಿಲ್ಲಾ ಯೋಜನಾ ಉಪ ಸಮನ್ವಯ ಅಧಿಕಾರಿ ಬಸವರಾಜು ತಿಳಿಸಿದ್ದಾರೆ.

ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಶಿಕ್ಷಕರನ್ನು ನೇಮಕ ಮಾಡುವ ಪ್ರಕ್ರಿಯೆಯೂ ಮುಂದುವರಿಯುತ್ತಿರುವ ಕಾರಣ ಶಾಲೆ ಪ್ರಾರಂಭವಾಗಲಿದೆ. ಅದೇ ಶಾಲೆಗಳ ಇಂಗ್ಲಿಷ್ ಬೋಧಕರು ವಿದ್ಯಾರ್ಥಿಗಳಿಗೆ ಬೋಧಿಸಲಿದ್ದಾರೆ ಎಂದರು.

English summary
In Mysuru district new 33 english medium school will starts in upcoming academic year. CM Kumarswamy has been started this plan at state over 1 thousand schools.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X