ಮೈಸೂರಿನಲ್ಲಿ ಹಣದ ಆಸೆ ತೋರಿಸಿ ಸಾರ್ವಜನಿಕರಿಗೆ ವಂಚನೆ: ನಾಲ್ವರ ಬಂಧನ
ಮೈಸೂರು, ಸೆಪ್ಟೆಂಬರ್ 30: ಹಣದ ಆಸೆ ತೋರಿಸಿ ಸಾರ್ವಜನಿಕರಿಗೆ ವಂಚನೆ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಮೈಸೂರಿನ ದೇವರಾಜ ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನ ಚಂದ್ರಮೋಹನ್(57), ಕೇರಳದ ಟಿ.ವಿ ಇಬ್ರಾಹಿಂ (50), ಬೆಂಗಳೂರಿನವರಾದ ಗಿರಿನಾಥನ್ (49), ಗೋಪಿ(40) ಬಂಧಿತರಾಗಿದ್ದಾರೆ.
ಸೆಪ್ಟೆಂಬರ್ 26 ರಂದು ದೇವರಾಜ ಠಾಣಾ ಪೊಲೀಸರು ಠಾಣಾ ಸರಹದ್ದಿನ ಧನ್ವಂತ್ರಿ ರಸ್ತೆಯ ಗಾಯಿತ್ರಿ ಭವನ್ ಹೋಟೆಲ್ ನ ರೂಮ್ ನಂ.101 ಮತ್ತು 102 ಮೇಲೆ ದಾಳಿ ಮಾಡಿದ್ದಾರೆ.
ರೈಸ್ ಪುಲ್ಲಿಂಗ್ ಗೆ ಸಂಬಂಧಿಸಿದ ನಕಲಿ ಸಾಮಗ್ರಿಗಳನ್ನು ಹಾಗೂ ತಮ್ಮ ಮೊಬೈಲ್ಗಳಲ್ಲಿದ್ದ ರೈಸ್ ಪುಲ್ಲಿಂಗ್ ಗೆ ಸಂಬಂಧಿಸಿದ ವಿಡಿಯೋಗಳನ್ನು ತೋರಿಸಿ ಈ ಸಾಮಾಗ್ರಿಗಳಿಂದ ಕೋಟಿಗಟ್ಟಲೆ ಹಣ ಸಂಪಾದಿಸಬಹುದೆಂದು ಸಾರ್ವಜನಿಕರಿಗೆ ಆಮಿಷವೊಡ್ಡಿ ಮೋಸ ಮಾಡುತ್ತಿದ್ದರು ಎನ್ನುವ ಆರೋಪದ ಮೇಲೆ ಇವರನ್ನು ಬಂಧಿಸಲಾಗಿದೆ.

ಬಂಧಿತರಿಂದ ನಕಲಿ ವಸ್ತುಗಳನ್ನು ವಶಪಡಿಸಿಕೊಂಡಿರುವ ಪೊಲೀಸರು, ಮೇಲ್ಕಂಡ ಆರೋಪಿಗಳಿಂದ ಮೋಸ ಹೋಗಿರುವ ಸಾರ್ವಜನಿಕರು ಯಾರಾದರೂ ಇದ್ದಲ್ಲಿ ದೇವರಾಜ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರ ಮೊಬೈಲ್ ನಂ.9480802231, ದೂರವಾಣಿ ಸಂಖ್ಯೆ 0821-2418306ಕ್ಕೆ ಸಂಪರ್ಕಿಸಲು ಕೋರಿದ್ದಾರೆ.
-
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ












Click it and Unblock the Notifications