ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಜೆಕೆ ಟೈಯರ್ ಕಾರ್ಖಾನೆಯ 50 ಸಿಬ್ಬಂದಿಗೆ ಕೊರೊನಾ ಸೋಂಕು ದೃಢ

|
Google Oneindia Kannada News

ಮೈಸೂರು, ಜುಲೈ 18: ಜೆಕೆ ಟೈಯರ್ ಕಾರ್ಖಾನೆಯ 50 ಸಿಬ್ಬಂದಿಗೆ ಕೊರೊನಾ ಸೋಂಕು ತಗಲಿರುವುದು ದೃಢಪಟ್ಟಿದೆ. ಸಾಮೂಹಿಕವಾಗಿ ಕೋವಿಡ್ ಪರೀಕ್ಷೆ ಸಂದರ್ಭದಲ್ಲಿ ಪತ್ತೆಯಾಗಿದ್ದು, 6500 ಸಿಬ್ಬಂದಿಯ ಇರುವ ಕಾರ್ಖಾನೆಯಲ್ಲಿ ಇದೀಗ ಆತಂಕ ಸೃಷ್ಟಿಸಿದೆ.

Recommended Video

BBMP commissioner Anil Kumar transferred | Oneindia Kannada

ಮಾರ್ಚ್‍ನಲ್ಲಿ ನಂಜನಗೂಡಿನ ಜುಬಿಲೆಂಟ್ ಔಷಧ ಕಾರ್ಖಾನೆಯಲ್ಲಿ ವ್ಯಾಪಕವಾಗಿ ಕೊರೊನಾ ಹರಡುವ ಮೂಲಕ ದೊಡ್ಡ ವಿವಾದ ಉಂಟಾಗಿತ್ತು. ಈ ಘಟನೆ ಮಾಸುವ ಮೊದಲೇ ನಗರದ ಜೆಕೆ ಕಾರ್ಖಾನೆಯಲ್ಲೂ ಸೋಂಕು ಹರಡಿರುವುದು ಬೆಳಕಿಗೆ ಬಂದಿದೆ.

ಕೊರೊನಾ ಹಿನ್ನೆಲೆಯಲ್ಲಿ ನಿರಂತರವಾಗಿ ಸ್ಯಾನಿಟೈಸ್ ಮಾಡಿ, ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ನಗರದ ಎರಡು ಖಾಸಗಿ ಆಸ್ಪತ್ರೆಯಲ್ಲಿ ಎಲ್ಲ ಸಿಬ್ಬಂದಿಗೂ ಕೊರೊನಾ ಪರೀಕ್ಷೆ, ಆರೋಗ್ಯ ತಪಾಸಣೆ ಮಾಡಿಸಲಾಗಿದೆ. ಈ ಪೈಕಿ 41 ಜನರಿಗೆ ಸೋಂಕು ಇರುವುದು ಖಚಿತಗೊಂಡಿದೆ.

60 ವರ್ಷಗಳಲ್ಲಿ ಮಾನವೀಯ ವಿಚಾರದ ಅತಿ ದೊಡ್ಡ ಭ್ರಷ್ಟಾಚಾರ ಇದು: ಡಿಕೆಶಿ60 ವರ್ಷಗಳಲ್ಲಿ ಮಾನವೀಯ ವಿಚಾರದ ಅತಿ ದೊಡ್ಡ ಭ್ರಷ್ಟಾಚಾರ ಇದು: ಡಿಕೆಶಿ

50 COVID 19 cases confirmed in JK Tyre Company

ಸೋಂಕಿತರನ್ನು ಈಗಾಗಲೇ ಕೋವಿಡ್ ಆಸ್ಪತ್ರೆಗೆ ಸ್ಥಳಾಂತರ ಮಾಡಿ ಚಿಕಿತ್ಸೆ ನೀಡಲಾಗಿದೆ. ಕೋವಿಡ್ ರೋಗ ಬಾಧಿತರಿಗೆ ಪ್ರಾಥಮಿಕ ಮತ್ತು 2ನೇ ಹಂತದಲ್ಲಿ ಸಂಪರ್ಕಕ್ಕೆ ಬಂದವರನ್ನು ಗುರುತಿಸಿ, ಗಂಟಲ ದ್ರವ್ಯದ ಮಾದರಿ ಸಂಗ್ರಹಿಸಲಾಗುತ್ತಿದೆ.

ನಗರದ ಹೆಬ್ಬಾಳ, ಮೇಟಗಳ್ಳಿಯಲ್ಲಿ ಜೆಕೆ ಟೈಯರ್ ಕಾರ್ಖಾನೆಯ ಮೂರು ಘಟಕಗಳಿವೆ. ಸೋಂಕು ಪತ್ತೆಯಾದ ಹಿನ್ನೆಲೆ ಇವುಗಳನ್ನು ಮೂರು ದಿನಗಳ ಮಟ್ಟಿಗೆ ಸೀಲ್‍ಡೌನ್ ಮಾಡಿ ಉತ್ಪಾದನೆಯನ್ನು ಸ್ಥಗಿತಗೊಳಿಸಲಾಗಿದೆ. ಸೋಂಕಿತರ ಸಂಪರ್ಕಕ್ಕೆ ಬಂದ ಸಿಬ್ಬಂದಿಯನ್ನು ಹೋಮ್ ಕ್ವಾರಂಟೈನ್ ಮಾಡು ಸಿದ್ಧತೆ ಮಾಡಿಕೊಂಡಿದ್ದು, ಅದಕ್ಕಾಗಿ ಕಂಪನಿ ವತಿಯಿಂದ ಕೆಲ ಹೋಟೆಲ್‍ಗಳನ್ನು ವ್ಯವಸ್ಥೆ ಮಾಡಲಾಗಿದೆ.

ಹೆಬ್ಬಾಳ, ಮೇಟಗಳ್ಳಿಯ ಘಟಕಗಳನ್ನು ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಲು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಅವರು ಸೂಚನೆ ನೀಡಿದ್ದಾರೆ. ನಂಜನಗೂಡು ಜುಬಿಲೆಂಟ್ ಕಾರ್ಖಾನೆಯಂತೆ ಇಲ್ಲಿಯ ಸಿಬ್ಬಂದಿಗೂ ಕೊರೊನಾ ಹರಡದಂತೆ ಅಗತ್ಯ ಕ್ರಮ ವಹಿಸಲು ಕಾರ್ಖಾನೆ ಆಡಳಿತ ಮಂಡಳಿಗೆ ನಿರ್ದೇಶನ ನೀಡಲಾಗಿದೆ. ಕೇಂದ್ರ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುವಂತೆ ಸೂಚನೆ ನೀಡಲಾಗಿದೆ ಎಂದು ಕೈಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ಡಿ.ಕೆ.ಲಿಂಗರಾಜು ತಿಳಿಸಿದರು.

English summary
50 staff members of JK Tyre Company tested Coronavirus positive in Mysore.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X