ಶೇ 80ರಷ್ಟು ಹಾಸಿಗೆ ಕೋವಿಡ್‌ಗೆ ಮೀಸಲಿಡಬೇಕು; ಡಾ. ಕೆ. ಸುಧಾಕರ್

ಮೈಸೂರು, ಏಪ್ರಿಲ್ 22; "ಬೆಂಗಳೂರಿನಲ್ಲಿ 30 ಹಾಸಿಗೆ ಇರುವ ಖಾಸಗಿ ಆಸ್ಪತ್ರೆಗಳನ್ನು ನಾನ್ ಕೋವಿಡ್‌ಗೆ ಮೀಸಲಿಡಬೇಕು. 30 ಕ್ಕಿಂತ ಹೆಚ್ಚಿರುವ ಆಸ್ಪತ್ರೆಗಳಲ್ಲಿ ಮೂರು ನಾಲ್ಕು ದಿನಗಳಲ್ಲಿ ಶೇ.80 ರಷ್ಟು ಹಾಸಿಗೆಗಳನ್ನು ಕೋವಿಡ್‌ಗೆ ಮೀಸಲಿಡಬೇಕು" ಎಂದು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದರು.

ಮೈಸೂರಿನಲ್ಲಿ ಗುರುವಾರ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, "ಬೆಂಗಳೂರಿನಲ್ಲಿ ಕೋವಿಡ್ ಪ್ರಕರಣ ಹೆಚ್ಚಿದೆ. ನಗರದಲ್ಲಿ 13 ವೈದ್ಯಕೀಯ ಕಾಲೇಜುಗಳಿವೆ. ಈ ಕಾಲೇಜುಗಳಲ್ಲಿ ಡಯಾಲಿಸಿಸ್, ತಾಯಿ ಶಿಶು ಹಾಸಿಗೆ, ತುರ್ತು ಚಿಕಿತ್ಸೆ ಹಾಸಿಗೆ ಹೊರತುಪಡಿಸಿ, ಉಳಿದೆಲ್ಲವನ್ನೂ ಕೋವಿಡ್‌ಗೆ ಮೀಸಲಿಡಲು ಸೂಚಿಸಲಾಗಿದೆ" ಎಂದು ಹೇಳಿದರು.

"ಇದರಿಂದಾಗಿ ಏಳೂವರೆ ಸಾವಿರ ಹಾಸಿಗೆ ಮೆಡಿಕಲ್ ಕಾಲೇಜುಗಳಿಂದ ಲಭ್ಯವಾಗಲಿದೆ. ಈ ಎಲ್ಲ ತೀರ್ಮಾನಗಳನ್ನು ಮುಖ್ಯಮಂತ್ರಿಗಳಿಗೆ ತಿಳಿಸಿ ಅಂತಿಮಗೊಳಿಸಲಾಗುವುದು. ರಾಜ್ಯದ ಎಲ್ಲ ತಾಲೂಕು ಆಸ್ಪತ್ರೆಗಳಲ್ಲಿ 50 ಹಾಸಿಗೆಗಳಿಗೆ ಆಕ್ಸಿಜನ್ ಅಳವಡಿಸಲಾಗಿದೆ. 30 ಸಾವಿರ ಆಕ್ಸಿಜನ್ ಸಹಿತ ಹಾಸಿಗೆ ಲಭ್ಯವಿದೆ" ಎಂದರು.

80 Per Cent Of Beds And ICU Facility Should Dedicate To Govt Says Minister

"ವೈದ್ಯಕೀಯ ಕಾಲೇಜುಗಳಲ್ಲಿ ಪಿಜಿ, ಅಂತಿಮ ಪದವಿ ಪರೀಕ್ಷೆಯನ್ನು ಎರಡು ತಿಂಗಳು ಮುಂದೂಡಲು ಸೂಚಿಸಲಾಗಿದೆ. ವೈದ್ಯ ವಿದ್ಯಾರ್ಥಿಗಳನ್ನು ಆಯಾ ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣ ಕಾರ್ಯಕ್ಕೆ ನಿಯೋಜಿಸಲು ಸೂಚಿಸಲಾಗಿದೆ" ಎಂದು ಮಾಹಿತಿ ನೀಡಿದರು.

"ಹೆಚ್ಚುವರಿಯಾಗಿ ಒಂದು ಲಕ್ಷ ರೆಮ್ ಡಿಸ್ವಿರ್ ಗೆ ಕೇಂದ್ರ ಸರ್ಕಾರಕ್ಕೆ ಬೇಡಿಕೆ ಇಡಲಾಗಿದೆ. ಇದಕ್ಕೂ ಮುನ್ನವೇ 70 ಸಾವಿರ ವೈಲ್ ಖರೀದಿಸಲು ಟೆಂಡರ್ ಪ್ರಕ್ರಿಯೆ ನಡೆಸಲಾಗಿದೆ. ಈ ಪೈಕಿ 20 ಸಾವಿರ ಸರಬರಾಜು ಆಗಿದೆ. ಮುಖ್ಯಮಂತ್ರಿಗಳು ಲಸಿಕೆ ಖರೀದಿಗೆ ನಿರ್ಣಯ ಕೈಗೊಳ್ಳಲಿದ್ದಾರೆ" ಎಂದು ವಿವರಿಸಿದರು.

"ವಿಜಯಪುರದಲ್ಲಿ ಮಾಜಿ ಸಚಿವ ಎಂ.ಬಿ.ಪಾಟೀಲ್ ತಮ್ಮ ಸಂಸ್ಥೆಯಲ್ಲಿ ಸ್ವಯಂಪ್ರೇರಿತರಾಗಿ ಹಾಸಿಗೆಗೆ 3 ಸಾವಿರ ರೂ. ದರ ನಿಗದಿಪಡಿಸಿ, ಮೂಲಸೌಕರ್ಯ ಹೆಚ್ಚಿಸಿದ್ದಾರೆ. ಈ ಸಂಸ್ಥೆ ಜಿಲ್ಲೆಯ ಸಂಜೀವಿನಿಯಾಗಿದೆ. ಎಲ್ಲ ಮೆಡಿಕಲ್ ಕಾಲೇಜುಗಳು ಇದೇ ರೀತಿ ಕೋವಿಡ್ ಹೋರಾಟದಲ್ಲಿ ಮುಂಚೂಣಿಯಲ್ಲಿರಬೇಕು" ಎಂದು ಮನವಿ ಮಾಡಿದರು.

ಸಚಿವರ ಪರಿಶೀಲನೆ; ಮೈಸೂರಿನಲ್ಲಿ ಪರಿಶೀಲನೆ ನಡೆಸಿದ ಸಚಿವರು, 'ಮೈಸೂರಿನ ಜಿಲ್ಲಾಸ್ಪತ್ರೆಯನ್ನು ಸಂಪೂರ್ಣ ಕೋವಿಡ್ ಗೆ ಮೀಸಲಿಡಲಾಗಿದೆ. ವೈದ್ಯಕೀಯ ಕಾಲೇಜಿನಲ್ಲಿ ಶೇ.50 ಹಾಗೂ 37 ಖಾಸಗಿ ಆಸ್ಪತ್ರೆಗಳಲ್ಲಿ ಶೇ.50 ರಷ್ಟು ಹಾಸಿಗೆ ಮೀಸಲಿಡಲಾಗಿದೆ" ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+