• search
  • Live TV
ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ದೆಹಲಿ ಬಿಜೆಪಿ ಕಚೇರಿಗೆ ಬಾಂಬ್ ಇಟ್ಟಿದ್ದಾಗಿ ಕರೆ ಮಾಡಿದ ಮೈಸೂರಿನ ವೃದ್ಧ

By ಮೈಸೂರು ಪ್ರತಿನಿಧಿ
|

ಮೈಸೂರು, ಜೂನ್ 24 : ದೇಶದ ರಾಜಧಾನಿ ದೆಹಲಿಯ ಬಿಜೆಪಿ ಕೇಂದ್ರ ಕಚೇರಿಗೆ ಬಾಂಬ್ ಇಟ್ಟಿರುವುದಾಗಿ ಹುಸಿ ಕರೆ ಮಾಡಿದ್ದ ಹೆದರಿಸಿದ್ದ ಆರೋಪದ ಹಿನ್ನೆಲೆ ಮೈಸೂರಿನ ವೃದ್ಧರೊಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನಗರದ ಸಿದ್ಧಾರ್ಥನಗರ ನಿವಾಸಿ ಸುಗಂಧ ರಾಜ್(85) ಪೊಲೀಸರ ವಶದಲ್ಲಿರುವ ವೃದ್ಧ. ದೆಹಲಿಯಲ್ಲಿರುವ ಕೇಂದ್ರ ಬಿಜೆಪಿ ಕಚೇರಿಗೆ ಕರೆ ಮಾಡಿ ಬಾಂಬ್ ಇಟ್ಟಿರುವುದಾಗಿ ಸಂದೇಶವೊಂದು ಬಂದಿತ್ತು.

ಬಿಜೆಪಿ ಕೇಂದ್ರ ಕಚೇರಿಗೆ ಹುಸಿ ಬಾಂಬ್ ಕರೆ: ಮೈಸೂರಿಗನ ಕೈವಾಡ? ಬಿಜೆಪಿ ಕೇಂದ್ರ ಕಚೇರಿಗೆ ಹುಸಿ ಬಾಂಬ್ ಕರೆ: ಮೈಸೂರಿಗನ ಕೈವಾಡ?

ತಕ್ಷಣ ಕಾರ್ಯಪ್ರವೃತ್ತರಾದ ದೆಹಲಿ ಪೊಲೀಸರಿಗೆ ಮೈಸೂರಿನಿಂದ ಕರೆ ಬಂದಿರುವುದಾಗಿ ತನಿಖೆಯಿಂದ ದೃಢಪಟ್ಟಿತು. ನಂತರ ಕರ್ನಾಟಕದ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಕರೆ ಮಾಡಿದ ವ್ಯಕ್ತಿಯ ಮೊಬೈಲ್‌ ಸಂಖ್ಯೆಯ ಆಧಾರದ ಮೇಲೆ ದೆಹಲಿ ಪೊಲೀಸರು ಆತ ಮೈಸೂರಿನಿಂದ ಕರೆ ಮಾಡಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಪೊಲೀಸರು ಕಾರ್ಯಾಚರಣೆ ನಡೆಸಿ, ಕರೆ ಮಾಡಿದ ವ್ಯಕ್ತಿಯನ್ನು ಪತ್ತೆ ಮಾಡಿ ವಶಕ್ಕೆ ಪಡೆದರು.

ಈತ ಮಾನಸಿಕ ಅಸ್ವಸ್ಥ ಎಂದು ತಿಳಿದು ಬಂದಿದೆ. ಕರೆ ಮಾಡಿದ ವ್ಯಕ್ತಿ ಮಾನಸಿಕ ಅಸ್ವಸ್ಥನಾಗಿದ್ದು, ಕಣ್ಣುಗಳು ಸರಿಯಾಗಿ ಕಾಣುತ್ತಿಲ್ಲ. ಕಿವಿಗಳೂ ಕೇಳುತ್ತಿಲ್ಲ ಎಂದು ಡಿಸಿಪಿ ಮುತ್ತುರಾಜ ತಿಳಿಸಿದ್ದಾರೆ.

English summary
85-year-old man has been arrested for making a hoax bomb call to the BJP Office in New Delhi. A man man has been identified as Sugandaraju, a resident of an apartment at Mysuru Siddarthanagar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X