ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರಿನಲ್ಲಿ ಮತ್ತೆ 99 ಕೊರೊನಾ ವೈರಸ್ ಕೇಸ್ ಪತ್ತೆ, 6 ಸಾವು

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಜುಲೈ 16: ಮೈಸೂರು ಜಿಲ್ಲೆಯಲ್ಲಿ ಬುಧವಾರ 99 ಕೊರೊನಾ ವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1190 ಕ್ಕೇರಿದ್ದು, ಮೃತರ ಸಂಖ್ಯೆ 47 ಕ್ಕೆ ಏರಿಕೆಯಾಗಿದೆ.

Recommended Video

Jio 5G, Jio tv+, Jio AR glasses and much more | Oneindia Kannada

ಜಿಲ್ಲೆಯಲ್ಲಿ ಒಟ್ಟು 640 ಸಕ್ರಿಯ ಪ್ರಕರಣಗಳಿದ್ದು, ಇದುವರೆಗೆ 503 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಬುಧವಾರ 14 ವರ್ಷದ ಬಾಲಕ, ವೃದ್ಧ ವೈದ್ಯ , 73 ವರ್ಷದ ವೃದ್ಧ, 38 ವರ್ಷದ ಮಹಿಳೆ, 49 ವರ್ಷದ ಪುರುಷ, 53 ವರ್ಷದ ಪುರುಷ ಮೃತಪಟ್ಟಿದ್ದು, ಒಟ್ಟು 6 ಮಂದಿ ಸಾವನ್ನಪ್ಪಿದ್ದಾರೆ.

ಮೈಸೂರಿನಲ್ಲಿ ಹೆಚ್ಚುತ್ತಿದೆ ಹೋಂ ಐಸೊಲೇಷನ್ ಪಡೆಯುವವರ ಸಂಖ್ಯೆಮೈಸೂರಿನಲ್ಲಿ ಹೆಚ್ಚುತ್ತಿದೆ ಹೋಂ ಐಸೊಲೇಷನ್ ಪಡೆಯುವವರ ಸಂಖ್ಯೆ

ನಿನ್ನೆ 5 ಮಂದಿ ಕೊರೊನಾ ವೈರಸ್ ನಿಂದ ಗುಣಮುಖರಾಗಿದ್ದಾರೆ. ಕೋವಿಡ್ ಜಿಲ್ಲಾಸ್ಪತ್ರೆಯಲ್ಲಿ 254, ಕೋವಿಡ್ ಇತರ ಆಸ್ಪತ್ರೆಗಳಲ್ಲಿ 65, ಕೋವಿಡ್ ಕೇರ್ ಕೇಂದ್ರಗಳಲ್ಲಿ 49 ಹಾಗೂ 219 ಮಂದಿಗೆ ಮನೆಯಲ್ಲೇ ಐಸೋಲೇಷನ್ ಮಾಡಲಾಗಿದೆ.

99 New Coronavirus Cases Detected Again In Mysuru

53 ಮಂದಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 12 ಮಂದಿ ಐಸಿಯುನಲ್ಲಿದ್ದಾರೆ. ಶೀತ, ಜ್ವರ ಮಾದರಿಯ ರೋಗದಿಂದ ಬಳಲುತ್ತಿದ್ದ 29 ಮಂದಿ, ಇತರ ರಾಜ್ಯ ಜಿಲ್ಲೆಗಳಿಂದ ಬಂದ 36 ಮಂದಿಯಲ್ಲಿ ಹಾಗೂ ಪ್ರಾಥಮಿಕ ಸಂಪರ್ಕದ 26 ಮಂದಿಯಲ್ಲಿ ಕೋವಿಡ್-19 ದೃಢಪಟ್ಟಿದೆ.

ಮೈಸೂರಿನಿಂದ ಈ ಜಿಲ್ಲೆಗಳಿಗೆ KSRTC ಬಸ್ ಸಂಚಾರ ರದ್ದುಮೈಸೂರಿನಿಂದ ಈ ಜಿಲ್ಲೆಗಳಿಗೆ KSRTC ಬಸ್ ಸಂಚಾರ ರದ್ದು

ಮೈಸೂರು ಜಿಲ್ಲೆಯಲ್ಲಿ 2100 ಮಂದಿಯನ್ನು 14 ದಿನಗಳ ಕಾಲ ಹೋಂ ಕ್ವಾರೆಂಟೈನ್ ಮಾಡಲಾಗಿದೆ. ಇದುವರೆಗೆ ಒಟ್ಟು 29,420 ಮಂದಿಯ ಗಂಟಲು ದ್ರವ ಸಂಗ್ರಹಿಸಿ ಪರೀಕ್ಷೆಗೊಳಪಡಿಸಲಾಗಿದೆ.

ಚಿಕ್ಕಮಗಳೂರು: ಕೊರೊನಾ ವಾರಿಯರ್ ಮೇಲೆ ಹಲ್ಲೆ
ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಸರ್ಕಾರಿ ಆಸ್ಪತ್ರೆಯ ವೈದ್ಯರ ಮೇಲೆ ಹಲ್ಲೆ ಯುವಕನೋರ್ವ ಹಲ್ಲೆ ಮಾಡಿದ್ದಾನೆ.

ವೈದ್ಯರು ರೋಗಿಗೆ ಚೀಟಿ ಮಾಡಿಸಿಕೊಂಡು ಬಾ ಎಂದಿದ್ದಕ್ಕೆ ರೋಗಿಯ ಸೋಗಿನಲ್ಲಿ ಬಂದ ವ್ಯಕ್ತಿ, ಮೂಡಿಗೆರೆ ತಾಲೂಕು ಆಸ್ಪತ್ರೆಯ ವ್ಯೆದ್ಯ ಡಾ.ಸಂತೋಷ್ ಮೇಲೆ ಅಹಮದ್ ಎಂಬಾತನಿಂದ ಹಲ್ಲೆ ಮಾಡಿದ್ದಾನೆ. ವೈದ್ಯರಿಂದ ಮೂಡಿಗೆರೆ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

English summary
In Mysore district, 99 coronavirus cases were detected on Wednesday and the total number of infected persons in the district was 1190.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X