ಸಿದ್ದರಾಮಯ್ಯ ಬೂಟು ನೆಕ್ತಾರೆ ಎಂದಿದ್ದ ಅನಂತಕುಮಾರ್ ವಿರುದ್ಧ ದೂರು

Recommended Video

      ಸಿದ್ದರಾಮಯ್ಯ ಬೂಟು ನೆಕ್ತಾರೆ ಎಂದಿದ್ದ ಅನಂತಕುಮಾರ್ ವಿರುದ್ಧ ದೂರು | Oneindia Kannada

      ಮೈಸೂರು, ಡಿಸೆಂಬರ್ 7 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ನಾಲಿಗೆ ಹರಿಬಿಟ್ಟಿದ್ದ ಕೇಂದ್ರ ಕೌಶಲ ಮತ್ತು ಉದ್ಯಮಶೀಲತೆ ರಾಜ್ಯ ಸಚಿವ ಅನಂತಕುಮಾರ ಹೆಗಡೆ ವಿರುದ್ಧ ದೂರು ದಾಖಲಗಿದೆ.

      ಅನಂತಕುಮಾರ್ ಹೆಗಡೆ ಅವಹೇಳನಕಾರಿಯಾಗಿ ಮಾತನಾಡಿ ಸಿದ್ದರಾಮಯ್ಯನವರನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿ ಮೈಸೂರು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಬಿ.ಜೆ.ವಿಜಯಕುಮಾರ್ ಜೆಎಂಎಫ್ ಸಿ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದಾರೆ.

      A complaint filed against Ananthkumar Hegde for controversial statement on Siddaramaiah

      ದೂರನ್ನು ಸ್ವೀಕರಿಸಿದ ನ್ಯಾಯಾಲಯ ದೇವರಾಜ ಪೊಲೀಸ್ ಠಾಣೆಗೆ ವರ್ಗಾಯಿಸಿದೆ. 'ಪ್ರಕರಣ ನಡೆದಿರುವುದು ಬೆಳಗಾವಿಯ ಕಿತ್ತೂರಿನಲ್ಲಿ ನಡೆದಿದ್ದರಿಂದ ದೂರನ್ನು ಅಲ್ಲಿನ ಪೊಲೀಸ್ ಠಾಣೆಗೆ ವರ್ಗಾಯಿಸಲಾಗುತ್ತದೆ ಎಂದು ನಗರ ಪೊಲೀಸ್ ಕಮೀಷನರ್ ಡಾ.ಎ.ಎಸ್.ಸುಬ್ರಹ್ಮಣ್ಯೇಶ್ವರರಾವ್ ತಿಳಿಸಿದರು.

      ಇತ್ತೀಚೆಗೆ ಬೆಳಗಾವಿ ಜಿಲ್ಲೆ ಕಿತ್ತೂರಿನಲ್ಲಿ ನಡೆದ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ "ಸಿದ್ದರಾಮಯ್ಯ ವೋಟಿನ ಆಸೆಗೆ ಏನಬೇಕಾದ್ರು ಮಾಡುತ್ತಾರೆ. ವೋಟಿಗಾಗಿ ಯಾರು ಬೇಕೋ ಅವರ ಬೂಟ್‌ ಸಹ ನೆಕ್ಕುವ ಸ್ಥಿತಿಗೆ ತಲುಪಿದ್ದಾರೆ" ಎಂದು ಏಕವಚನದಲ್ಲಿಯೇ ಸಿದ್ದರಾಮಯ್ಯ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದರು.

      ಈ ಹೇಳಿಕೆ ಕಾಂಗ್ರೆಸ್ ನಾಯಕ ಕೆಂಗಣ್ಣಿಗೆ ಗುರಿಯಾಗಿ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೂ ಗ್ರಾಸವಾಗಿತ್ತು,

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+