ಖಿನ್ನತೆಯಿಂದ ಆತ್ಮಹತ್ಯೆ ಮಾಡಿಕೊಂಡ ಮೈಸೂರು ಯುವತಿ
ಮೈಸೂರು, ಅಕ್ಟೋಬರ್ 9: ಮಾನಸಿಕವಾಗಿ ನೊಂದ ಕಾಲೇಜು ವಿದ್ಯಾರ್ಥಿನಿಯೋರ್ವಳು ನಿನ್ನೆ(ಅಕ್ಟೋಬರ್ 8) ರಾತ್ರಿ ನೇಣಿಗೆ ಶರಣಾದ ಘಟನೆ ಮೈಸೂರಿನಲ್ಲಿ ನಡೆದಿದೆ.
19 ವರ್ಷದ ಮೋನಿಕಾ ಆತ್ಮಹತ್ಯೆಗೆ ಶರಣಾದ ಯುವತಿ. ಸಿದ್ದಾರ್ಥನಗರದಲ್ಲಿ ವಾಸಿಸುತ್ತಿದ್ದು, ಮೈಸೂರಿನ ಖಾಸಗಿ ಕಾಲೇಜೊಂದರಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದಳು. ಕಳೆದ ಕೆಲ ದಿನಗಳಿಂದ ಖಿನ್ನತೆಗೆ ಒಳಗಾಗಿದ್ದರಿಂದ ಭಾನುವಾರ ರಾತ್ರಿ ತನ್ನ ಕೋಣೆಯಲ್ಲಿ ಫ್ಯಾನಿಗೆ ನೇಣು ಹಾಕಿಕೊಂಡು ಆತ್ಯಹತ್ಯೆ ಮಾಡಿಕೊಂಡಿದ್ದಾಳೆ. ಮನೆಯವರು ಕೋಣೆಗೆ ತೆರಳಿ ನೋಡಿದಾಗ ವಿಷಯ ತಿಳಿದು ಬಂದಿದೆ.

ನಜರ್ ಬಾದ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ. ಕೆ.ಆರ್.ಆಸ್ಪತ್ರೆಯ ಶವಾಗಾರದಲ್ಲಿ ಪರೀಕ್ಷೆ ನಡೆದಿದೆ.











Click it and Unblock the Notifications