ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಡಾ. ನಾಗೇಂದ್ರ ಆತ್ಮಹತ್ಯೆ ಕುರಿತು ವರದಿ ಸಲ್ಲಿಸಿದ ಡಿಎಚ್‌ಓ

|
Google Oneindia Kannada News

ಮೈಸೂರು, ಆ. 21: ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ಆರೋಗ್ಯಾಧಿಕಾರಿ ಡಾ.‌ ನಾಗೇಂದ್ರ ಅವರ ಆತ್ಮಹತ್ಯೆ ಪ್ರಕರಣ ಕುರಿತು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಅವರ ಆಪ್ತ ಕಾರ್ಯದರ್ಶಿಯವರಿಗೆ ಜಿಲ್ಲಾ ಆರೋಗ್ಯಾಧಿಕಾರಿ ಡಾ. ವೆಂಕಟೇಶ್ ಅವರು ವರದಿ ಸಲ್ಲಿಸಿದ್ದಾರೆ ಎಂಬ ಮಾಹಿತಿ ಬಂದಿದೆ.

Recommended Video

ಕೊರೊನ ವಾರಿಯರ್ ನನ್ನು ಬಲಿ ಪಡೆದುಕೊಂಡ ಸರ್ಕಾರ..?! | Oneindia Kannada

ಕೊರೊನಾ ಸಂಕಷ್ಟದ ಕಾಲದಲ್ಲಿ ಒಂದು ದಿನವೂ ರಜೆ ತೆಗೆದುಕೊಳ್ಳದೇ ಸೇವೆ ಸಲ್ಲಿಸಿರುವ ಡಾ. ನಾಗೇಂದ್ರ ಅವರ ಆತ್ಮಹತ್ಯೆಗೆ ಮೇಲಧಿಕಾರಿಯ ಒತ್ತಡವೇ ಕಾರಣ ಎಂದು ವರದಿಯಲ್ಲಿ ಉಲ್ಲೇಖಿಸಿದ್ದಾರೆಂದು ತಿಳಿದು ಬಂದಿದೆ. ಗೌರಿ ಗಣೇಶ ಹಬ್ಬದ ಸಂದರ್ಭದಲ್ಲಿ ಜನರು ಪರೀಕ್ಷೆಗೆ ಒಳಗಾಗುವುದಿಲ್ಲ ಎಂದರೂ ಒಪ್ಪದ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಮಿಶ್ರಾ ಅವರು ಒಪ್ಪಿರಲಿಲ್ಲ. ಬದಲಿಗೆ ಪ್ರಕೃತಿ ವಿಕೋಪ ಕಾಯಿದೆಯಡಿ ಪ್ರಕರಣ ದಾಖಲಿಸುವುದಾಗಿಡಾ. ನಾಗೇಂದ್ರ ಅವರಿಗೆ ಬೆದರಿಕೆ ಹಾಕಿದ್ದರು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ ಎನ್ನಲಾಗಿದೆ.

A report submitted to ST Somashekhar from DHO Venkatesh regarding THO Nagendra suicide

ಡಾ. ನಾಗೇಂದ್ರ ಆತ್ಮಹತ್ಯೆಗೆ ಕಾರಣವೇನು? ಇಲ್ಲಿದೆ ಸಂಪೂರ್ಣ ವಿವರ!ಡಾ. ನಾಗೇಂದ್ರ ಆತ್ಮಹತ್ಯೆಗೆ ಕಾರಣವೇನು? ಇಲ್ಲಿದೆ ಸಂಪೂರ್ಣ ವಿವರ!

ಆ ಬೆದರಿಕೆಯಿಂದಲೇ ತೀವ್ರ ಹತಾಶರಾಗಿ ನಾಗೇಂದ್ರ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಸಚಿವರಿಗೆ ಬರೆದಿರೋ ಪತ್ರದಲ್ಲಿ ಡಿಎಚ್ಓ ತಿಳಿಸಿದ್ದಾರೆ. ಎಸ್.ಟಿ. ಸೋಮಶೇಖರ್ ಅವರು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರಿಂದ ವರದಿ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.

English summary
A report is submitted to District minister S T Somashekhar from DHO Dr. Venkatesh regarding Nanjagudu THO Dr. Nagendra's suicide Case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X