ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಡವರ ಬಂಧು ಯೋಜನೆ: ಹೆಚ್ಚಿನ ಎಸ್ಸಿ-ಎಸ್ಟಿ ಗಳಿಗೆ ಸಾಲ ವಿತರಣೆ

|
Google Oneindia Kannada News

ಮೈಸೂರು: ಈ ಬಾರಿ 14 ಸಾವಿರ ಕೋಟಿ ರುಪಾಯಿ ಸಾಲವನ್ನು ರೈತರಿಗೆ ಕೊಡಬೇಕು. ಅಲ್ಲದೇ ಹೊಸ ಸದಸ್ಯರಿಗೆ ಸಾಲ ವಿತರಣೆಯನ್ನು ಕಡ್ಡಾಯವಾಗಿ ನೀಡಲೇಬೇಕು. ಅದರ ಜೊತೆಗೆ ಎಸ್ಸಿ-ಎಸ್ಟಿ ಸಮುದಾಯದವರಿಗೆ ಹೆಚ್ಚಿನ ಪ್ರಮಾಣದಲ್ಲಿ ಸಾಲ ವಿತರಣೆಯಾಗಬೇಕು ಎಂದು ಸಹಕಾರ ಸಚಿವ ಎಸ್.ಟಿ ಸೋಮಶೇಖರ್ ಅಧಿಕಾರಿಗಳಿಗೆ ಸೂಚಿಸಿದರು.

Recommended Video

ಮುತ್ತಪ್ಪ ರೈ ನಿಧನಕ್ಕೆ ಡಾನ್ ಜಯರಾಜ್ ಪುತ್ರ ವ್ಯಂಗ್ಯ..! | Ajith Jayraj | Muthappa Rai

ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅಧ್ಯಕ್ಷತೆಯಲ್ಲಿ ಮೈಸೂರು ಪ್ರಾಂತದ ಸಹಕಾರ ಇಲಾಖೆಯ ಅಧಿಕಾರಿಗಳ ಸಭೆ ನಡೆಸಲಾಯಿತು.

ಮೈಸೂರಿನಲ್ಲಿ ಮೇ 19ರಿಂದ ತೆರಿಗೆ ಪಾವತಿಸಬಹುದು: ಗುರುದತ್ ಹೆಗಡೆಮೈಸೂರಿನಲ್ಲಿ ಮೇ 19ರಿಂದ ತೆರಿಗೆ ಪಾವತಿಸಬಹುದು: ಗುರುದತ್ ಹೆಗಡೆ

ಎಸ್ಸಿ-ಎಸ್ಟಿ ಸಮುದಾಯದವರಿಗೆ ಅಲ್ಪ ಪ್ರಮಾಣದ ಕೃಷಿ ಸಾಲ ವಿತರಣೆಯಾಗಿದ್ದು, ಮುಂದೆ ಹೀಗಾಗಬಾರದು. ಹೆಚ್ಚಿನ ಫಲಾನುಭವಿಗಳಿಗೆ ಸಾಲ ವಿತರಣೆ ಮಾಡಬೇಕು ಎಂದು ಸಚಿವರು ತಿಳಿಸಿದರು. ಸಹಕಾರ ಸಂಘಗಳ ಹಣ ದುರುಪಯೋಗಕ್ಕೆ ಸಂಬಂಧಪಟ್ಟಂತೆ ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳು ಬಾಕಿ ಇದ್ದು, ಈ ಕುರಿತು ಕೂಡಲೇ ಕ್ರಮ ಕೈಗೊಳ್ಳಲು ಕ್ರಮವಹಿಸಿ ಎಂದು ಸಚಿವರು ಹೇಳಿದರು.

 ಸಹಕಾರ ಸಂಘಗಳ ಹಣ ದುರುಪಯೋಗ ಸಹಿಸಲ್ಲ

ಸಹಕಾರ ಸಂಘಗಳ ಹಣ ದುರುಪಯೋಗ ಸಹಿಸಲ್ಲ

ಸಹಕಾರ ಸಂಘಗಳ ಹಣ ದುರುಪಯೋಗ ಪ್ರಕರಣವನ್ನು ಸಹಿಸುವುದಿಲ್ಲ. ಅಂಥವರ ಮೇಲೆ ಸಿವಿಲ್ ಹಾಗೂ ಕ್ರಿಮಿನಲ್ ಪ್ರಕರಣ ಹಾಕಿ ಕ್ರಮ ಕೈಗೊಳ್ಳಬೇಕು. ಬಾಕಿ ಇರುವ ಪ್ರಕರಣಗಳ ಮೇಲೆ ಶೀಘ್ರವಾಗಿ ಕ್ರಮ ತೆಗೆದುಕೊಳ್ಳಿ. ಆದಷ್ಟು ಜನರ ಪರವಾಗಿ ಕಾರ್ಯನಿರ್ವಹಿಸಿ. ಸಮಸ್ಯೆಗಳಿದ್ದರೆ ನನ್ನ ಗಮನಕ್ಕೆ ತಂದರೆ ಬಗಹರಿಸುವೆ. ಕೆಲಸ ಮಾಡಲು ಆಗುವುದಿಲ್ಲ ಎಂದಾದರೆ ತಿಳಿಸಿ, ನಿಮ್ಮನ್ನು ಬೇರೆಡೆಗೆ ವರ್ಗಾವಣೆ ಮಾಡಲಾಗುವುದು ಎಂದು ಸಚಿವರು ಎಚ್ಚರಿಕೆ ಕೊಟ್ಟರು.

 ಸುಸ್ತಿ ಸಾಲ ಬೇಗ ವಸೂಲಾಗಲಿ

ಸುಸ್ತಿ ಸಾಲ ಬೇಗ ವಸೂಲಾಗಲಿ

ಹೌಸಿಂಗ್ ಸೊಸೈಟಿಯಲ್ಲಿ ಸಮಸ್ಯೆ ಇದ್ದರೆ ಗಮನ ಕೊಡುತ್ತೇನೆ. ನಾನೂ ಈ ಮೊದಲು ಸುಮಾರು 20 ವರ್ಷ ಅಧ್ಯಕ್ಷನಾಗಿದ್ದೆ. ಹಾಗಾಗಿ ಎಲ್ಲ ಕೆಲಸಗಳ ಬಗ್ಗೆ ನಿಗಾವಹಿಸುತ್ತೇನೆ. ಜೊತೆಗೆ ಮುಡಾ ಸೇರಿದಂತೆ ಹಲವು ಕಡೆ ಇರುವ ಸಮಸ್ಯೆಗಳನ್ನು ಒಂದೊಂದಾಗಿ ಗಮನಹರಿಸಿ ಬಗೆಹರಿಸುತ್ತೇನೆ ಎಂದು ಸಚಿವ ಸೋಮಶೇಖರ್ ತಿಳಿಸಿದರು.

ಕಾಸ್ಕಾರ್ಡ್ ಬ್ಯಾಂಕ್ ಗಳಲ್ಲಿ ಸಾಲ ವಿತರಣೆ ಹಾಗೂ ವಸೂಲಾತಿಗಳ ಪ್ರಮಾಣ ಬಹಳ ಕಡಿಮೆ ಇದ್ದು, ಪ್ರಗತಿ ಸಾಧಿಸಬೇಕು. ಸುಸ್ತಿ ಸಾಲಗಳ ಪ್ರಮಾಣ ಹೆಚ್ಚಾಗಿದ್ದು, ಅವುಗಳ ವಸೂಲಾತಿಗಾಗಿ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಸಚಿವರು ಸೂಚಿಸಿದರು.

ಮೈಸೂರೀಗ ಕೊರೊನಾಮುಕ್ತ; ಕಾರಣಕರ್ತರಿಗೆ ಉಸ್ತುವಾರಿ ಸಚಿವರ ಅಭಿನಂದನಾರ್ಪಣೆಮೈಸೂರೀಗ ಕೊರೊನಾಮುಕ್ತ; ಕಾರಣಕರ್ತರಿಗೆ ಉಸ್ತುವಾರಿ ಸಚಿವರ ಅಭಿನಂದನಾರ್ಪಣೆ

ಸಾಲ ವಿತರಣೆ ಗುರಿ ಹೆಚ್ಚಿಸಿ

ಸಾಲ ವಿತರಣೆ ಗುರಿ ಹೆಚ್ಚಿಸಿ

ಅಲ್ಪಾವಧಿ ಸಾಲ ಸೇರಿದಂತೆ ಬಹುತೇಕ ಸಾಲ ವಿತರಣೆ ಇನ್ನೂ ಮೊದಲ ಹಂತದಲ್ಲೇ ಇದೆ. ಆದರೆ, ಸಭೆ ನಡೆಸಿದ ಮೇಲಷ್ಟೇ ಸಾಲ ವಿತರಣೆ ಎಂಬ ಕಟ್ಟುಪಾಡಿಗೆ ಬೀಳದೇ ಶೀಘ್ರ ಸಾಲ ವಿತರಣೆಗೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಯಿತು. ಜೊತೆಗೆ ಪ್ರತಿವರ್ಷ ಸಾಲ ವಿತರಣೆ ಪ್ರಮಾಣದ ಗುರಿಯನ್ನು ಹಾಕಿಕೊಳ್ಳುವಾಗ ಹೆಚ್ಚಿನ ವಿತರಣೆ ಮಾಡುವ ಬಗ್ಗೆ ಗುರಿ ನಿಗದಿಪಡಿಸಿಕೊಂಡರೆ ಸಾಲ ವಿತರಣೆ ಪ್ರಮಾಣದಲ್ಲೂ ಹೆಚ್ಚಳವಾಗಲಿದೆ ಎಂದು ಅಧಿಕಾರಿಗಳಿಗೆ ಹೇಳಿದರು.

ಹೊಸ ಸದಸ್ಯರಿಗೆ ಸಾಲ ವಿತರಣೆಯಾಗಬೇಕು

ಹೊಸ ಸದಸ್ಯರಿಗೆ ಸಾಲ ವಿತರಣೆಯಾಗಬೇಕು

ಈ ಬಾರಿ ಮಳೆ ಉತ್ತಮವಾಗಲಿದೆ ಎಂಬ ವರದಿ ಬಂದಿದೆ. ಹೀಗಾಗಿ ಸರಿಯಾದ ಸಮಯಕ್ಕೆ ರೈತರಿಗೆ ಸಾಲ ವಿತರಣೆ ಮಾಡದಿದ್ದರೆ ಉಪಯೋಗವಾಗದು. ಹೀಗಾಗಿ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ತಿಳಿಸಲಾಯಿತು. ಹಳಬರಿಗಷ್ಟೇ ಕೆಲವು ಕಡೆ ಸಾಲ ನೀಡಲಾಗುತ್ತಿದ್ದು, ಹೊಸ ಸದಸ್ಯರಿಗೆ ಸಾಲ ವಿತರಣೆಯಾಗಬೇಕು. ಈ ಬಗ್ಗೆ ಗಮನಹರಿಸಿ ಎಂದರು.

ಸಚಿವರ ಆಪ್ತ ಕಾರ್ಯದರ್ಶಿ ಕೆ.ಎಸ್. ನವೀನ್, ಮೈಸೂರು ಪ್ರಾಂತದ ಸಹಕಾರ ಸಂಘಗಳ ಜಂಟಿ ನಿಬಂಧಕರಾದ ಆರ್.ಪ್ರಕಾಶ್ ರಾವ್ ಸೇರಿದಂತೆ ಅಧಿಕಾರಿಗಳು ಹಾಜರಿದ್ದರು.

English summary
Minister ST Somashekhar pointed out to the officials that large scale loans should be distributed to the SC, ST community.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X