ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರು; ಕೆಲಕಾಲ ಆತಂಕ ಸೃಷ್ಟಿಸಿದ ಸೂಟ್‌ ಕೇಸ್‌

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಜನವರಿ 26: ಗಣರಾಜ್ಯೋತ್ಸವಕ್ಕೆ ಕೆಲವೇ ಗಂಟೆಗಳು ಬಾಕಿ ಇದ್ದಾಗ ಮೈಸೂರು ನಗರದಲ್ಲಿ ಆತಂಕ ಉಂಟಾಗಿತ್ತು. ನಗರದಲ್ಲಿ ಪತ್ತೆಯಾದ ವಾರಸುದಾರರು ಇಲ್ಲದ ಸೂಟ್‌ ಕೇಸ್‌ ನಗರದ ಜನರಲ್ಲಿ ಆತಂಕವನ್ನು ಉಂಟು ಮಾಡಿತ್ತು.

ಸೋಮವಾರ ರಾತ್ರಿ ಮೈಸೂರು ನಗರದ ನಾರಾಯಣ ಶಾಸ್ತ್ರಿ ರಸ್ತೆಯ ಸಿದ್ದಪ್ಪ ವೃತ್ತದ ಬಳಿ ಸೂಟ್ ಕೇಸ್ ಪತ್ತೆಯಾಗಿತ್ತು. ಬ್ಯಾಂಕ್‌ನ ಎಟಿಎಂ ಮುಂದೆ ಅನುಮಾನಾಸ್ಪದವಾಗಿ ಇಡಲಾಗಿದ್ದ ಸೂಟ್ ಕೇಸ್ ನೋಡಿ ಜನರು ಆತಂಕಗೊಂಡರು.

ಮೈಸೂರು ರಸ್ತೆಗಿಳಿದ 'ಅಂಬಾರಿ' ಡಬ್ಬಲ್ ಡೆಕ್ಕರ್ ಬಸ್ ಮೈಸೂರು ರಸ್ತೆಗಿಳಿದ 'ಅಂಬಾರಿ' ಡಬ್ಬಲ್ ಡೆಕ್ಕರ್ ಬಸ್

ಮೊದಲು ಸೂಟ್‌ ಕೇಸ್ ನೋಡಿದ ಜನರು ಆತಂಕದಿಂದಲೇ ಪೋಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದರು. ಮಧ್ಯರಾತ್ರಿ ಬಾಂಬ್ ಪತ್ತೆ ದಳ ಹಾಗೂ ಶ್ವಾನ ದಳ ಬಂದು ಸೂಟ್‌ ಕೇಸ್ ಪರಿಶೀಲನೆ ನಡೆಸಿತು.

ತಾಳಗುಪ್ಪ-ಮೈಸೂರು ಇಂಟರ್ ಸಿಟಿ ರೈಲು ಆರಂಭ; ವೇಳಾಪಟ್ಟಿ ತಾಳಗುಪ್ಪ-ಮೈಸೂರು ಇಂಟರ್ ಸಿಟಿ ರೈಲು ಆರಂಭ; ವೇಳಾಪಟ್ಟಿ

Abandoned Suitcase Creates Panic One Day Before Republic Day

ಸೂಟ್‌ ಕೇಸ್‌ನಲ್ಲಿ ವಿದ್ಯುತ್ ಬಲ್ಬ್​ ಹೊರತು ಪಡಿಸಿ ಬೇರೆ ಯಾವುದೇ ವಸ್ತು ಸಹ ಪತ್ತೆಯಾಗಿಲ್ಲ ಎಂದು ಪೊಲೀಸರು ಆತಂಕವನ್ನು ದೂರ ಮಾಡಿದರು. ಗಣರಾಜ್ಯೋತ್ಸವದ ಹಿನ್ನಲೆಯಲ್ಲಿ ಯಾರೋ ಕಿಡಿಗೇಡಿ ಇಂತಹ ಕೃತ್ಯ ಮಾಡಿರಬಹುದು ಎಂದು ಶಂಕಿಸಲಾಗಿದೆ.

ಗಣರಾಜ್ಯೋತ್ಸವ; ಮೈಸೂರಲ್ಲಿ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಗಣರಾಜ್ಯೋತ್ಸವ; ಮೈಸೂರಲ್ಲಿ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ

ಈ ರೀತಿ ಸೂಟ್ ಕೇಸ್ ಇಟ್ಟಿರುವ ವ್ಯಕ್ತಿ ಯಾರು ಎಂದು ತಿಳಿಯಲು ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಈ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಡಿಸಿಪಿ ಪ್ರಕಾಶ್ ಗೌಡ ಹೇಳಿದ್ದಾರೆ.

English summary
A suitcase found abandoned near Siddappa circle Mysuru created panic. Dog squad found electric bulb in suitcase.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X