ನಿರಪರಾಧಿಗಳ ಬಂಧನವಾಗಿದೆ; ಅಬ್ದುಲ್ ಮಜೀದ್ ಆರೋಪ
ಮೈಸೂರು, ನವೆಂಬರ್ 23: "ಶಾಸಕ ತನ್ವೀರ್ ಸೇಠ್ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ಒತ್ತಡ ಹಾಕಲಾಗುತ್ತಿದೆ. ಹೀಗಾಗಿ ಪೊಲೀಸರು ಅಧಿಕೃತ ಮಾಹಿತಿಗಳನ್ನು ಕೊಡುತ್ತಿಲ್ಲ" ಎಂದು ಎಸ್ ಡಿಪಿಐ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಮಜೀದ್ ಆರೋಪಿಸಿದ್ದಾರೆ.
"ಪ್ರಕರಣಕ್ಕೆ ಸಂಬಂಧಿಸಿದಂತೆ ನಿರಪರಾಧಿಗಳನ್ನು ಬಂಧಿಸಲಾಗಿದೆ. ಇದರಲ್ಲಿ ಇಬ್ಬರು ಎಸ್ ಡಿ ಪಿಐ ಕಾರ್ಯಕರ್ತರಿದ್ದಾರೆ. ಅವರನ್ನ ನೋಡಲು ಸಹ ಜೈಲು ಅಧಿಕಾರಿಗಳು ಬಿಡುತ್ತಿಲ್ಲ. ರಾಜ್ಯದಲ್ಲಿ ಮೂರನೇ ರಾಜಕೀಯ ಪಕ್ಷವಾಗಿ ಎಸ್ ಡಿಪಿಐ ಬೆಳೆಯುತ್ತಿದೆ. ಇದಕ್ಕಾಗಿಯೇ ಮಾಜಿ ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಸಿಎಂ ಯಡಿಯೂರಪ್ಪ ನಮ್ಮ ಪಕ್ಷದ ವಿರುದ್ಧ ಹೇಳಿಕೆ ನೀಡುತ್ತಿದ್ದಾರೆ" ಎಂದು ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಬಂಧಿಸಿರುವವರು ಕೇವಲ ಆರೋಪಿಗಳಷ್ಟೇ. ಅವರನ್ನು ಅಪರಾಧಿಗಳೆಂದು ಸಾಬೀತುಪಡಿಸಿ. 2009ರಲ್ಲಿ ನಡೆದ ಘಟನೆ ಮರಕಳಿಸಬೇಕೇ?" ಎಂದು ಎಚ್ಚರಿಸಿದ ಅವರು, ಸರ್ಕಾರ ಈ ಬಗ್ಗೆ ಕ್ರಮ ಕೈಗೊಳ್ಳದಿದ್ದರೆ ಜೈಲ್ ಭರೋ ಚಳುವಳಿ ಕೈಗೊಳ್ಳಬೇಕಾಗುತ್ತದೆ" ಎಂದು ಎಚ್ಚರಿಸಿದರು.












Click it and Unblock the Notifications