ಮೈಸೂರು ಮೆಡಿಕಲ್ ಕಾಲೇಜಿನಲ್ಲಿ ಒಂದು ಲಕ್ಷ ಕೊರೊನಾ ಪರೀಕ್ಷೆ
ಮೈಸೂರು, ಅಕ್ಟೋಬರ್ 22: ಮೈಸೂರು ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆಯಲ್ಲಿ ಇದುವರೆಗೂ 1 ಲಕ್ಷ ಮಾದರಿಗಳ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಕೊರೊನಾ ಆರಂಭದಿಂದ ಅ.20ರವರೆಗೂ ಒಂದು ಲಕ್ಷ ಮಾದರಿಗಳ ಪರೀಕ್ಷೆ ನಡೆಸಿರುವುದಾಗಿ ಸಂಸ್ಥೆಯ ನಿರ್ದೇಶಕ ಹಾಗೂ ಡೀನ್ ಡಾ. ಸಿ.ಪಿ. ನಂಜರಾಜ ಮಾಹಿತಿ ನೀಡಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಸಂಸ್ತೆಯ ಮೈಕ್ರೊಬಯಾಲಜಿ ಲ್ಯಾಬ್ ನಲ್ಲಿ ಅ.20ರವರೆಗೆ ಜಿಲ್ಲೆಯ 89,589 ಮಾದರಿಗಳನ್ನು ಪರೀಕ್ಷೆ ಮಾಡಲಾಗಿದೆ. ಹೊರಜಿಲ್ಲೆಯಿಂದ ಬಂದ 11,024 ಮಾದರಿಗಳನ್ನು ಪರೀಕ್ಷೆ ಮಾಡಲಾಗಿದೆ. ಒಟ್ಟು 1,00,613 ಪರೀಕ್ಷೆಗಳನ್ನು ಈ ಸಂಸ್ಥೆಯಲ್ಲೇ ಕೈಗೊಳ್ಳಲಾಗಿದೆ ಎಂದು ಮೈಕ್ರೋ ಬಯಾಲಜಿ ನೋಡೆಲ್ ಅಧಿಕಾರಿ ಡಾ.ಬಿ.ಅಮೃತಾ ಕುಮಾರಿ ಅವರು ತಿಳಿಸಿದ್ದಾರೆ.

ಎಂಎಂಸಿಆರ್ ಐನಲ್ಲಿ ಪರೀಕ್ಷೆ ನಡೆಸಲಾದ ಮಾದರಿಗಳಲ್ಲಿ ಮೈಸೂರು ಜಿಲ್ಲೆಯ 8926 ಹಾಗೂ ಇತರ ಜಿಲ್ಲೆಯ 369 ಸೇರಿ ಒಟ್ಟು 9295 ಪಾಸಿಟಿವ್ ಪ್ರಕರಣದ ಫಲಿತಾಂಶ ಈ ಲ್ಯಾಬ್ನಿಂದ ಬಂದಿದೆ. ಮಂಡ್ಯ, ಚಾಮರಾಜನಗರ, ಮಡಿಕೇರಿ ಮುಂತಾದ ಜಿಲ್ಲೆಗಳಿಂದ ಬಂದಿರುವ ಮಾದರಿಗಳನ್ನು ಕೂಡ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಈವರೆಗೆ 2,54,587 ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಅದರಲ್ಲಿ 1,00,613 ಮಾದರಿಗಳ ಪರೀಕ್ಷೆಯು ಈ ಸಂಸ್ಥೆಯಲ್ಲಿ ನಡೆದಿದೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications