ಅಕ್ರಮ ಆಸ್ತಿ ಸಂಪಾದನೆ ಹಿನ್ನೆಲೆ ಮೈಸೂರು, ಹಾಸನದಲ್ಲಿ ಎಸಿಬಿ ದಾಳಿ
ಮೈಸೂರು, ಜೂನ್ 21: ಇಂದು ಬೆಳ್ಳಂಬೆಳಿಗ್ಗೆ ಎಸಿಬಿ ಅಧಿಕಾರಿಗಳು ಹಾಸನ ಮತ್ತು ಮೈಸೂರಿನ ಜಿಲ್ಲಾ ಪಂಚಾಯತ್ ಜ್ಯೂನಿಯರ್ ಇಂಜಿನಿಯರ್ ಮನೆ ಮೇಲೆ ದಾಳಿ ನಡೆಸಿ ಶಾಕ್ ನೀಡಿದ್ದಾರೆ.
ನಗರದ ಗಾಯತ್ರಿಪುರಂ ಬಡಾವಣೆಯಲ್ಲಿರುವ ಜಿಲ್ಲಾ ಪಂಚಾಯಿತಿ ಜೂನಿಯರ್ ಇಂಜಿನಿಯರ್ ಹರ್ಷದ್ ಭಾಷಾ ನಿವಾಸದ ಮೇಲೆ ದಾಳಿ ನಡೆಸಿ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಹಲವು ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.

ಅಕ್ರಮ ಆಸ್ತಿ ಸಂಪಾದನೆ ಹಿನ್ನೆಲೆ ಈ ದಾಳಿ ನಡೆದಿದೆ. ಹಾಸನದಲ್ಲಿಯೂ ಸಹಾಯಕ ಎಂಜಿನಿಯರ್ ಚನ್ನೇಗೌಡ ನಿವಾಸದ ಮೇಲೆ ದಾಳಿಯಾಗಿದೆ. ಎಸಿಬಿ ಡಿವೈಎಸ್ಪಿ ಪೂರ್ಣಚಂದ್ರ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.











Click it and Unblock the Notifications