ಮೈಸೂರು: ನಗರಪಾಲಿಕೆ ಸಹಾಯಕ ಆಯುಕ್ತರ ಮನೆ ಮೇಲೆ ಎಸಿಬಿ ದಾಳಿ
ಮೈಸೂರು, ಆಗಸ್ಟ್ 26: ಮೈಸೂರು ನಗರಪಾಲಿಕೆ ಅಧಿಕಾರಿಯೊಬ್ಬರ ಮನೆ ಮೇಲೆ ಇಂದು ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.
ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿದ್ದಾರೆಂಬ ಆರೋಪದ ಮೇಲೆ ನಗರಪಾಲಿಕೆ ಅಭಿವೃದ್ಧಿ ಅಧಿಕಾರಿ, ವಲಯ ಕಚೇರಿ 6ರ ಪ್ರಭಾರ ಸಹಾಯಕ ಆಯುಕ್ತ ನಾಗರಾಜು ಅವರ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಮೈಸೂರಿನ ಕುವೆಂಪು ನಗರ ನಿವಾಸ, ಪಾಲಿಕೆ ಕಚೇರಿ ಹಾಗೂ ರಾಮನಗರದ ಸಂಬಂಧಿಕರ ಮನೆಯಲ್ಲೂ ಪರಿಶೀಲನೆ ನಡೆಸಲಾಗುತ್ತಿದೆ. ರಾಮನಗರ ಡಿವೈಎಸ್ಪಿ ನೇತೃತ್ವದಲ್ಲಿ ಬೆಂಗಳೂರು ತಂಡದಿಂದ ದಾಳಿ ನಡೆಸಲಾಗಿದ್ದು, ದಾಖಲೆಗಳನ್ನು ಪರಿಶೀಲಿಸಿ, ಮಾಹಿತಿ ಕಲೆ ಹಾಕುತ್ತಿದ್ದಾರೆ.












Click it and Unblock the Notifications