ಮೈಸೂರು: ಲಂಚ ಪಡೆಯುತ್ತಿದ್ದ ವೇಳೆ ಪುರಸಭೆ ಮುಖ್ಯಾಧಿಕಾರಿ ಎಸಿಬಿ ಬಲೆಗೆ
ಮೈಸೂರು, ಡಿಸೆಂಬರ್ 23: ಮೈಸೂರು ಜಿಲ್ಲೆಯ ತಿ.ನರಸೀಪುರ ತಾಲ್ಲೂಕಿನ ಬನ್ನೂರು ಪುರಸಭೆ ಮುಖ್ಯಾಧಿಕಾರಿ ಪುಷ್ಪಲತಾ ಎಸಿಬಿ ಬಲೆಗೆ ಬಿದ್ದಿದ್ದು, 25 ಸಾವಿರ ರುಪಾಯಿ ಲಂಚ ಪಡೆಯುವ ವೇಳೆ ಪುರಸಭೆ ಮುಖ್ಯಾಧಿಕಾರಿಯನ್ನು ಬಂಧಿಸಲಾಗಿದೆ.
ಖಚಿತ ಮಾಹಿತಿ ಮೇರೆಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಬನ್ನೂರು ಪುರಸಭೆ ಮುಖ್ಯಾಧಿಕಾರಿ ಪುಷ್ಪಲತಾ ಅವರು ಕಾಮಗಾರಿ ಬಿಲ್ ಮಾಡಲು ಬನ್ನೂರಿನ ಗುತ್ತಿಗೆದಾರೊಬ್ಬರಿಗೆ ಪಟ್ಟಣದ ಕಾಮಗಾರಿ ಸಂಬಂಧ ಬಳಿ 25 ಸಾವಿರ ಹಣಕ್ಕೆ ಬೇಡಿಕೆ ಇಟ್ಟಿದ್ದರು.

ನಂತರ ಪುರಸಭೆ ಮುಖ್ಯಾಧಿಕಾರಿ ಪುಷ್ಪಲತಾ ವಿರುದ್ಧ ಎಸಿಬಿಗೆ ದೂರು ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಎಸಿಬಿ ಎಸ್ಪಿ ಸುಮಂತ್ ಪನೇಕರ್ ನೇತೃತ್ವದಲ್ಲಿ ಎಸಿಬಿ ದಾಳಿ ನಡೆಸಿದ್ದು, ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ನಂತರ ಪುಷ್ಪಲತಾ ಅವರನ್ನು ಬಂಧಿಸಲಾಯಿತು.

ದಾಳಿ ವೇಳೆ DSP ಪರಶುರಾಮಪ್ಪ, ಅಧಿಕಾರಿಗಳಾದ ಕರೀಮ್ ರಾವತರ್, ಕೆ. ನಿರಂಜನ್ ಸಿಬ್ಬಂದಿಗಳಾದ ಕುಮಾರ್ ಆರಾಧ್ಯ, ಗುರುಪ್ರಸಾದ್, ಮಂಜುನಾಥ್, ಯೋಗೀಶ್, ನೇತ್ರಾವತಿ, ಪುಷ್ಪಲತಾ ತಂಡದವರು ಭಾಗವಹಿಸಿದ್ದರು.












Click it and Unblock the Notifications