ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರು: ಲಂಚ ಪಡೆಯುತ್ತಿದ್ದ ವೇಳೆ‌ ಪುರಸಭೆ ಮುಖ್ಯಾಧಿಕಾರಿ ಎಸಿಬಿ ಬಲೆಗೆ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಡಿಸೆಂಬರ್ 23: ಮೈಸೂರು ಜಿಲ್ಲೆಯ ತಿ.ನರಸೀಪುರ ತಾಲ್ಲೂಕಿನ ಬನ್ನೂರು ಪುರಸಭೆ ಮುಖ್ಯಾಧಿಕಾರಿ ಪುಷ್ಪಲತಾ ಎಸಿಬಿ ಬಲೆಗೆ ಬಿದ್ದಿದ್ದು, 25 ಸಾವಿರ ರುಪಾಯಿ ಲಂಚ ಪಡೆಯುವ ವೇಳೆ ಪುರಸಭೆ ಮುಖ್ಯಾಧಿಕಾರಿಯನ್ನು ಬಂಧಿಸಲಾಗಿದೆ.

ಖಚಿತ ಮಾಹಿತಿ ಮೇರೆಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಬನ್ನೂರು ಪುರಸಭೆ ಮುಖ್ಯಾಧಿಕಾರಿ ಪುಷ್ಪಲತಾ ಅವರು ಕಾಮಗಾರಿ ಬಿಲ್ ಮಾಡಲು ಬನ್ನೂರಿನ ಗುತ್ತಿಗೆದಾರೊಬ್ಬರಿಗೆ ಪಟ್ಟಣದ ಕಾಮಗಾರಿ ಸಂಬಂಧ ಬಳಿ 25 ಸಾವಿರ ಹಣಕ್ಕೆ ಬೇಡಿಕೆ ಇಟ್ಟಿದ್ದರು.

Mysuru: ACB Raid On Municipal Chief Officer In Bribe Case At Bannur

ಬೆಳಗಾವಿ: ಲಂಚ ಪಡೆಯುತ್ತಿದ್ದ ಗ್ರಾಮ ಲೆಕ್ಕಾಧಿಕಾರಿ ಎಸಿಬಿ ಬಲೆಗೆಬೆಳಗಾವಿ: ಲಂಚ ಪಡೆಯುತ್ತಿದ್ದ ಗ್ರಾಮ ಲೆಕ್ಕಾಧಿಕಾರಿ ಎಸಿಬಿ ಬಲೆಗೆ

ನಂತರ‌ ಪುರಸಭೆ ಮುಖ್ಯಾಧಿಕಾರಿ ಪುಷ್ಪಲತಾ ವಿರುದ್ಧ ಎಸಿಬಿಗೆ ದೂರು ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಎಸಿಬಿ ಎಸ್ಪಿ ಸುಮಂತ್ ಪನೇಕರ್ ನೇತೃತ್ವದಲ್ಲಿ ಎಸಿಬಿ ದಾಳಿ ನಡೆಸಿದ್ದು, ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ನಂತರ ಪುಷ್ಪಲತಾ ಅವರನ್ನು ಬಂಧಿಸಲಾಯಿತು.

Mysuru: ACB Raid On Municipal Chief Officer In Bribe Case At Bannur

ಮನೆಮನೆ ಮಾತಾದ ಗೋಲ್ಡ್ ವಿನ್ನರ್‌ನಿಂದ ಎಲ್ಡಿಯಾ ಶುದ್ಧ ಕೊಬ್ಬರಿ ಎಣ್ಣೆ ಮನೆಮನೆ ಮಾತಾದ ಗೋಲ್ಡ್ ವಿನ್ನರ್‌ನಿಂದ ಎಲ್ಡಿಯಾ ಶುದ್ಧ ಕೊಬ್ಬರಿ ಎಣ್ಣೆ

ದಾಳಿ ವೇಳೆ DSP ಪರಶುರಾಮಪ್ಪ, ಅಧಿಕಾರಿಗಳಾದ ಕರೀಮ್ ರಾವತರ್, ಕೆ. ನಿರಂಜನ್ ಸಿಬ್ಬಂದಿಗಳಾದ ಕುಮಾರ್ ಆರಾಧ್ಯ, ಗುರುಪ್ರಸಾದ್, ಮಂಜುನಾಥ್, ಯೋಗೀಶ್, ನೇತ್ರಾವತಿ, ಪುಷ್ಪಲತಾ ತಂಡದವರು ಭಾಗವಹಿಸಿದ್ದರು.

English summary
ACB officials conducted raid on Municipal Chief Officer of Bannur. Rs.25 Thousand seized during the raid.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X