• search
  • Live TV
ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮೈಸೂರು: ಸಂಚಾರಿ ಪೊಲೀಸ್ ತಪಾಸಣೆ ವೇಳೆ ಅಪಘಾತ: ಸ್ಥಳದಲ್ಲೇ ಬೈಕ್ ಸವಾರ ಸಾವು

By ಮೈಸೂರು ಪ್ರತಿನಿಧಿ
|

ಮೈಸೂರು, ಮಾರ್ಚ್ 22: ಸಂಚಾರಿ ಪೊಲೀಸ್ ತಪಾಸಣೆ ವೇಳೆ ಅಪಘಾತವಾಗಿ ಸ್ಥಳದಲ್ಲೇ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಮೈಸೂರಿನ ವಿವಿ ಪುರಂ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹಿನಕಲ್ ರಿಂಗ್ ರಸ್ತೆಯಲ್ಲಿ ಸಂಚಾರಿ ಪೊಲೀಸರು ತಪಾಸಣೆ ನಡೆಸುತ್ತಿದ್ದಾಗ ತಪ್ಪಿಸಿಕೊಳ್ಳಲು ಯತ್ನಿಸಿದ ಬೈಕ್ ಸವಾರ ಸಾವನ್ನಪ್ಪಿದ್ದಾನೆ.

ವಿವಿ ಪುರಂ ಸಂಚಾರಿ ಠಾಣೆ ಪೊಲೀಸರು ಬೈಕ್ ಸವಾರನನ್ನು ತಪಾಸಣೆ ನಡೆಸಲು ಮುಂದಾಗಿದ್ದಾರೆ, ಈ ವೇಳೆ ತಪ್ಪಿಸಿಕೊಳ್ಳಲು ಬೈಕ್ ಸವಾರ ಯತ್ನಿಸಿದ್ದಾನೆ. ಆಗ ಆಯತಪ್ಪಿ ಕೆಳಬಿದ್ದ ಸವಾರನ ಮೇಲೆ ಹಿಂಬದಿಯಿಂದ ಬಂದ ವ್ಯಾನ್ ಬಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ.

ಮೈಸೂರಿನಲ್ಲಿ ಮಿನಿಲಾಕ್ ಡೌನ್; ರೋಹಿಣಿ ಸಿಂಧೂರಿ ಎಚ್ಚರಿಕೆ

ಅಪಘಾತ ನಡೆದ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು, ಸಂಚಾರಿ ಪೊಲೀಸರ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೈಕ್ ಸವಾರ ಹೆಲ್ಮೆಟ್ ಧರಿಸಿದ್ದರೂ ಪೋಲಿಸರು ಅಡ್ಡಗಟ್ಟಲು ಮುಂದಾಗಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಪೊಲೀಸ್ ಪೇದೆ ಲಾಠಿ ಬೀಸಿದ ಪರಿಣಾಮ, ಬೈಕ್‌ನ ಹ್ಯಾಂಡಲ್‌ಗೆ ಲಾಠಿ ಸಿಲುಕಿ ಕೆಳಗೆ ಬಿದ್ದು ಸವಾರ ಸಾವನ್ನಪ್ಪಿದ್ದಾನೆಂದು ಸ್ಥಳೀಯರು ಆರೋಪಿಸಿದರು. ಈ ಪ್ರಕರಣ ಈಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಪೊಲೀಸ್ ಗಸ್ತು ವಾಹನವನ್ನು ಸಾರ್ವಜನಿಕರು ಜಖಂಗೊಳಿಸಿ ಆಕ್ರೋಶ ವ್ಯಕ್ತಪಡಿಸಿದರು, ಆಗ ಲಘು ಲಾಠಿ ಪ್ರಹಾರ ಮಾಡಲಾಯಿತು. ಸ್ಥಳಕ್ಕೆ ಡಿಸಿಪಿ ಗೀತಾ ಪ್ರಸನ್ನ ಭೇಟಿ ನೀಡಿ, ಪರಿಶೀಲನೆ ನಡೆಸಿ, ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ.

English summary
A death of a bike rider on the spot during a Traffic police inspection took place in the VV Puram area of ​​Mysuru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X