ಅನುಮತಿ ಪಡೆಯದೆ ಪುರಾತನ ಮೂರ್ತಿ ಇಟ್ಟುಕೊಂಡ ಆರೋಪ: ಕಲಾವಿದೆ ಬಂಧನ
ಮೈಸೂರು, ಜುಲೈ 2: ಖ್ಯಾತ ಮರಳು ಕಲಾಕೃತಿ ಕಲಾವಿದೆ ಗೌರಿ ಅವರನ್ನು ತಿ.ನರಸೀಪುರ ಪೊಲೀಸರು ಇಂದು ಬಂಧಿಸಿದ್ದಾರೆ. ಪ್ರಾಚ್ಯವಸ್ತು ಇಲಾಖೆಗೆ ಮಾಹಿತಿ ನೀಡದೆ ವಿಷ್ಣುವಿನ ಮೂರ್ತಿಯನ್ನು ತಮ್ಮ ವಶದಲ್ಲಿ ಇರಿಸಿಕೊಂಡಿದ್ದರೆಂಬ ಆರೋಪದ ಮೇರೆಗೆ ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.
ಮೈಸೂರಿನ ಚಾಮುಂಡಿಬೆಟ್ಟ ರಸ್ತೆಯಲ್ಲಿ ಸ್ಯಾಂಡ್ ಮ್ಯೂಸಿಯಂ ನ್ನು ಗೌರಿ ನಿರ್ಮಾಣ ಮಾಡಿದ್ದಾರೆ. ತಿ.ನರಸೀಪುರ ತಾಲೂಕಿನ ಬಿಳಿಗೆರೆ ಗ್ರಾಮದಲ್ಲಿ ರಸ್ತೆ ಬದಿಯಲ್ಲಿ ಪುರಾತನ ಕಲ್ಲಿನ ವಿಷ್ಣುವಿನ ಮೂರ್ತಿ ಸಿಕ್ಕಿತ್ತು.
ವಿಷ್ಣು ಮೂರ್ತಿಯ ಪಕ್ಕದಲ್ಲೇ ಜೆಸಿಬಿಯಿಂದ ಕಾಮಗಾರಿಯೂ ನಡೆದಿತ್ತು. ನಂತರ ಈ ಮೂರ್ತಿಯನ್ನು ತಮ್ಮ ಬಳಿ ಇರಿಸಿಕೊಂಡಿದ್ದ ಗೌರಿ ಪ್ರಾಚ್ಯವಸ್ತು ಇಲಾಖೆಗೆ ಯಾವುದೇ ಮಾಹಿತಿ ನೀಡಿರಲಿಲ್ಲ ಎನ್ನಲಾಗಿದೆ.

ಈ ಕುರಿತು ಬಿಳಿಗೆರೆ ಗ್ರಾಮಸ್ಥರು ಪೊಲೀಸರಿಗೆ ದೂರು ನೀಡಿದ್ದರು. ದೂರು ದಾಖಲಿಸಿಕೊಂಡ ಪೊಲೀಸರು ಗೌರಿ ವಿರುದ್ಧ ಎಫ್ಐಆರ್ ದಾಖಲು ಮಾಡಿದ್ದಾರೆ.
ಕೆಆರ್ಎಸ್ ರಸ್ತೆಯಲ್ಲಿರುವ ಗೌರಿ ನಿವಾಸ ಜಲಭಾಗ್ ಗೆ ಪೊಲೀಸರು ಭೇಟಿ ನೀಡಿದ್ದು, ವಿಷ್ಣು ಮೂರ್ತಿಯನ್ನು ವಶಕ್ಕೆ ಪಡೆದ ನಂತರ ಪೊಲೀಸರು ಗೌರಿ ಅವರನ್ನು ಬಂಧಿಸಿದ್ದಾರೆಂದು ತಿಳಿದು ಬಂದಿದೆ. ವಿಷ್ಣು ಮೂರ್ತಿ ಸಂರಕ್ಷಣೆ ಮಾಡಲು ಯತ್ನಿಸಿದ್ದಕ್ಕೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆಂದು ಗೌರಿ ತಾಯಿ ಆರೋಪಿಸಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications