• search
  • Live TV
ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮೈಸೂರು ಡಿಸಿ ರೋಹಿಣಿ ಸಿಂಧೂರಿ ವಿರುದ್ಧ ನ್ಯಾಯಾಂಗ ನಿಂದನೆ ಆರೋಪ

By ಮೈಸೂರು ಪ್ರತಿನಿಧಿ
|

ಮೈಸೂರು, ಫೆಬ್ರವರಿ 19: ನ್ಯಾಯಾಲಯ ತೀರ್ಪನ್ನು ಪಾಲಿಸದ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ನ್ಯಾಯಾಂಗ ನಿಂದನೆ ಆರೋಪ ಕೇಳಿಬಂದಿದೆ.

ಕರ್ನಾಟಕ ಹೈಕೋರ್ಟ್ ಈ ಹಿಂದೆಯೇ ವ್ಯಕ್ತಿಯೊಬ್ಬರಿಗೆ ಖಾತೆ ಮಾಡಿಕೊಡಲು ತೀರ್ಪು ನೀಡಿ ಆದೇಶಿಸಿತ್ತು. ಭೂಮಿಯ ಖಾತೆ ಮಾಡಿಕೊಟ್ಟಿಲ್ಲ ಎಂದು ಆರೋಪಿಸಿ ಮೈಸೂರಿನ ನಿವಾಸಿ ಎಚ್.ಬಿ.ಅಶೋಕ್ ಸೇರಿ 5 ಮಂದಿ ನ್ಯಾಯಾಂಗ ನಿಂದನೆ ಅರ್ಜಿಯನ್ನು ದಾಖಲಿಸಿದ್ದರು.

ಡಿಸಿ ರೋಹಿಣಿ ಸಿಂಧೂರಿ ಭರವಸೆ ಹಿನ್ನೆಲೆ: ಗ್ರೀನ್ ಬಡ್ಸ್ ಠೇವಣಿದಾರರ ಧರಣಿ ಅಂತ್ಯ

ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿದ ಸಂದರ್ಭದಲ್ಲಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಿ, ಜಮೀನು ಖಾತೆ ಮಾಡಿಕೊಡಲು ಹಲವು ಸಮಸ್ಯೆಗಳಿವೆ. ಭೂಮಿಗೆ ನಕಲಿ ದಾಖಲೆಗಳನ್ನು ಸೃಷ್ಟಿಸಲಾಗಿದೆ, ವಿವಾದಿತ ಭೂಮಿಗೆ ಹಲವರು ಹಕ್ಕು ಸಾಧನೆ ಮಾಡಲು ಮುಂದಾಗಿದ್ದಾರೆ. ಹೀಗಾಗಿ ಈ ಸಂಬಂಧ ದಾಖಲೆಗಳನ್ನು ಸಲ್ಲಿಸಲು ಹಾಗೂ ನ್ಯಾಯಾಲಯದ ಆದೇಶ ಪಾಲಿಸಲು 3 ತಿಂಗಳ ಕಾಲಾವಕಾಶ ನೀಡಬೇಕು ಎಂದು ಮನವಿ ಮಾಡಿದರು.

ಅಸಮಾಧಾನ ವ್ಯಕ್ತಪಡಿಸಿದ ಪೀಠ

ಅಸಮಾಧಾನ ವ್ಯಕ್ತಪಡಿಸಿದ ಪೀಠ

ಆದರೆ ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಪೀಠ ಇದನ್ನು ವಿಚಾರಣೆಯ ಹಂತದಲ್ಲೇ ನ್ಯಾಯಾಲಯದ ಗಮನಕ್ಕೆ ತರಬೇಕಿತ್ತು. ಆದೇಶವಾದ ನಂತರವೂ ತೀರ್ಪನ್ನು ಪಾಲಿಸದಿರವುದು ನ್ಯಾಯಾಂಗ ನಿಂದನೆ ಆಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿತು. ಅಲ್ಲದೇ, ಸರ್ಕಾರಿ ವಕೀಲರನ್ನು ಉದ್ದೇಶಿಸಿ, ಅಧಿಕಾರಿಗಳಿಗೆ ನ್ಯಾಯಾಲಯದ ಪ್ರಕ್ರಿಯೆಯಲ್ಲಿ ಹೇಗೆ ನಡೆದುಕೊಳ್ಳಬೇಕು ಎಂಬುದನ್ನು ಹೇಳಿಕೊಡಿ ಎಂದು ಪೀಠ ಬೇಸರ ವ್ಯಕ್ತಪಡಿಸಿತು.

ಮುಂದಿನ ವಿಚಾರಣೆ ವೇಳೆ ಖುದ್ದು ಹಾಜರಿರಬೇಕು

ಮುಂದಿನ ವಿಚಾರಣೆ ವೇಳೆ ಖುದ್ದು ಹಾಜರಿರಬೇಕು

ಪ್ರಕರಣದಲ್ಲಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ತಹಶೀಲ್ದಾರ್ ಕೆ.ಆರ್. ರಕ್ಷಿತ್ ನ್ಯಾಯಾಲಯದ ಆದೇಶವನ್ನು ತಿಳಿದಿದ್ದೂ, ಉಲ್ಲಂಘನೆ ಮಾಡಿದ್ದಾರೆ. ಹೀಗಾಗಿ ಈ ಇಬ್ಬರೂ ಆರೋಪಿ ಅಧಿಕಾರಿಗಳ ವಿರುದ್ಧ ಮಾರ್ಚ್ 8ರಂದು ಆರೋಪ ನಿಗದಿಪಡಿಸಲಾಗುವುದು. ಆದ್ದರಿಂದ ಇಬ್ಬರೂ ಅಧಿಕಾರಿಗಳು ಮುಂದಿನ ವಿಚಾರಣೆ ವೇಳೆ ಖುದ್ದು ಹಾಜರಿರಬೇಕು ಎಂದು ಪೀಠ ಆದೇಶಿಸಿತು. ಇದೇ ವೇಳೆ ಇತರೆ ಮೂರು ನ್ಯಾಯಾಂಗ ನಿಂದನೆ ಅರ್ಜಿಗಳಿಗೆ ಸಂಬಂಧಿಸಿದಂತೆ ನೋಟಿಸ್ ಜಾರಿ ಮಾಡಿತು.

ಕಳೆದ 2020ರ ಜೂನ್ 19ರಂದು ಆದೇಶಿಸಿತ್ತು

ಕಳೆದ 2020ರ ಜೂನ್ 19ರಂದು ಆದೇಶಿಸಿತ್ತು

ಅರ್ಜಿದಾರ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಕುರುಬರಹಳ್ಳಿಯಲ್ಲಿ ಅರ್ಜಿದಾರ ಅಶೋಕ್ ಸೇರಿದಂತೆ ಕೆಲ ವ್ಯಕ್ತಿಗಳು ಬಿ ಖರಾಬ್ ಜಮೀನು ಖಾತೆಗೆ ಜಿಲ್ಲಾಡಳಿತಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ, ಜಿಲ್ಲಾಧಿಕಾರಿ ಅರ್ಜಿಗಳನ್ನು ತಿರಸ್ಕರಿಸಿದ್ದರಿಂದ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ನ್ಯಾ.ಸುನಿಲ್ ದತ್ ಯಾದವ್ ಅವರಿದ್ದ ಪೀಠ ಅರ್ಜಿದಾರರಿಗೆ ಖಾತೆ ಮಾಡಿಕೊಡುವಂತೆ ಕಳೆದ 2020ರ ಜೂನ್ 19ರಂದು ಆದೇಶಿಸಿತ್ತು.

ಆದೇಶ ಪ್ರಶ್ನಿಸಿ ಮೇಲ್ಮನವಿಯನ್ನೂ ಸಲ್ಲಿಸಿರಲಿಲ್ಲ

ಆದೇಶ ಪ್ರಶ್ನಿಸಿ ಮೇಲ್ಮನವಿಯನ್ನೂ ಸಲ್ಲಿಸಿರಲಿಲ್ಲ

ಆದರೆ ಕಂದಾಯ ಅಧಿಕಾರಿಗಳು ಖಾತೆ ಮಾಡಿಕೊಟ್ಟಿರಲಿಲ್ಲ. ಬದಲಿಗೆ ಸರ್ಕಾರಕ್ಕೆ ಅನುಮತಿ ಕೋರಿ ಪತ್ರ ಬರೆದಿದ್ದರು. ಆದರೆ ಸರ್ಕಾರದಿಂದ ಇದಕ್ಕೆ ಉತ್ತರ ಬಂದಿರಲಿಲ್ಲ. ಜತೆಗೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಮೇಲ್ಮನವಿಯನ್ನೂ ಸಲ್ಲಿಸಿರಲಿಲ್ಲ. ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ ಬಳಿಕ ಜಿಲ್ಲಾಧಿಕಾರಿಗಳು ಈಗ ಕಾರಣಗಳನ್ನು ನೀಡುತ್ತಿರುವುದು ಹೈಕೋರ್ಟ್ ಅಸಮಾಧಾನಕ್ಕೆ ಕಾರಣವಾಗಿದೆ.

English summary
Mysuru District Collector Rohini Sindhuri has been charged with judicial abuse after they failed to comply with a court ruling.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X