ಸ್ಯಾಂಡಲ್ ವುಡ್ ನ ಜವಾಬ್ದಾರಿ ಕೇವಲ ಒಬ್ಬರದ್ದಲ್ಲ, ಎಲ್ಲರದ್ದು: ಅನಿರುದ್ಧ
ಮೈಸೂರು, ಸೆಪ್ಟೆಂಬರ್ 16: ಸ್ಯಾಂಡಲ್ ವುಡ್ ನಟ, ನಟಿಯರ ಮೇಲೆ ಡ್ರಗ್ಸ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ನಟ ಅನಿರುದ್ಧ ಅವರು, ಡ್ರಗ್ಸ್ ಎನ್ನುವ ಪಿಡುಗು ಜಗತ್ತಿನ ಎಲ್ಲೆಡೆಯೂ, ಎಲ್ಲ ರಂಗಗಳಲ್ಲೂ ಇದೆ ಎಂದು ಹೇಳಿದರು.
ಡ್ರಗ್ಸ್ ದಂಧೆಗೆ ಸ್ಯಾಂಡಲ್ ವುಡ್ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ ವಿಚಾರದ ಕುರಿತು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ನಟ ಅನಿರುದ್ಧ, ಡ್ರಗ್ಸ್ ದಂಧೆ ಕೇವಲ ಸ್ಯಾಂಡಲ್ ವುಡ್ ನಲ್ಲಿ ಮಾತ್ರ ಇಲ್ಲ ಎಂದರು.
ಕನ್ನಡ ಚಿತ್ರರಂಗದಲ್ಲಿ ಈ ರೀತಿ ಬೆಳವಣಿಗೆ ನಡೆಯುತ್ತಿರುವುದು ಬಹಳ ನೋವಿನ ಸಂಗತಿಯಾಗಿದೆ. ನಾವು ಹಿರಿಯರನ್ನು ಆದರ್ಶವಾಗಿಟ್ಟುಕೊಂಡು ಬೆಳೆಯಬೇಕು. ನಮ್ಮನ್ನು ನೋಡಿ ಸಮಾಜ ಮತ್ತು ಮಕ್ಕಳು ಕಲಿಯುತ್ತಾರೆ ಎಂದು ಅನಿರುದ್ಧ ತಿಳಿಸಿದರು.

ಮುಂದಿನ ಪೀಳಿಗೆಗೆ ನಾವು ಒಳ್ಳೆಯದನ್ನು ಬಿಟ್ಟು ಹೋಗಬೇಕು. ಹಿರಿಯರು ಹಾಕಿದ ಬುನಾದಿಯನ್ನು ನಾವು ಕೆಡಿಸಬಾರದು. ಹಾಗಾಗಿ ಆ ಹಾದಿಯಲ್ಲಿ ನಾವು ಸಾಗಬೇಕು ಎಂದು ಕಿವಿಮಾತು ಹೇಳಿದರು.
ಸ್ಯಾಂಡಲ್ ವುಡ್ ನ ಜವಾಬ್ದಾರಿ ಕೇವಲ ಒಬ್ಬರು ಇಬ್ಬರದ್ದಲ್ಲ, ಇದು ಎಲ್ಲರದ್ದು. ಎಲ್ಲರೂ ಕೂಡ ಇದೀಗ ಸ್ಯಾಂಡಲ್ ವುಡ್ ಜವಾಬ್ದಾರಿ ತೆಗೆದುಕೊಳ್ಳಬೇಕು ಎಂದು ನಟ ಟನಿರುದ್ಧ ಕಿವಿಮಾತು ಹೇಳಿದರು.
-
ಪ್ರೇಮ್ ಬರೆದ ಹಾಡು ಅಕ್ಷರ ರೂಪದ ಬೆತ್ತಲೆ ಸಿನೆಮಾ ತೋರಿಸಿದಂತಿದೆ: ಅರುಣ್ ಜೋಳದಕೂಡ್ಲಿಗಿ ಬರಹ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ












Click it and Unblock the Notifications