ತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ನಟ ಕಿಚ್ಚ ಸುದೀಪ್
ಮೈಸೂರು, ಜನೆವರಿ 4: ಕನ್ನಡದ ಖ್ಯಾತ ನಟ ಕಿಚ್ಚ ಸುದೀಪ್ ಅವರು ಇಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ನಾಡದೇವಿ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದರು.
ರಂಗಿತರಂಗ ಖ್ಯಾತಿ ಚಿತ್ರದ ನಿರ್ದೇಶಕ ಅನೂಪ್ ಭಂಡಾರಿ ಜೊತೆ ಆಗಮಿಸಿದ ನಟ ಕಿಚ್ಚ ಸುದೀಪ್, ತಾಯಿ ಚಾಮುಂಡಿಶ್ವೇರಿ ತಾಯಿಯ ದರ್ಶನ ಪಡೆದರು. ಸದ್ಯ ಅನೂಪ್ ಭಂಡಾರಿ ನಿರ್ದೇಶನದ ಫ್ಯಾಂಟಮ್ ಚಿತ್ರದ ಚಿತ್ರೀಕರಣದಲ್ಲಿ ಸುದೀಪ್ ಬ್ಯುಸಿಯಾಗಿದ್ದಾರೆ.
ಐತಿಹಾಸಿಕ ಮೈಸೂರಿನ ಲಲಿತ್ ಮಹಲ್ ಹೋಟೆಲ್ಗೆ 100ರ ಸಂಭ್ರಮ
ನೆಚ್ಚಿನ ನಟ ಬರುತ್ತಿದ್ದಂತೆಯೇ ಅಭಿಮನಿಗಳು ಸುದೀಪ್ ಜೊತೆ ಫೋಟೋ ಕ್ಲಿಕ್ಕಿಸಿಕೊಳ್ಳಲು ಮುಗಿಬಿದ್ದರು. ಅಭಿಮಾನಿಗಳ ತಳ್ಳಾಟವನ್ನು ಗಮನಿಸಿದ ನಟ ಸುದೀಪ್, ಓರ್ವ ಅಭಿಮಾನಿಗೆ ತಾಳ್ಮೆಯಿಂದ ವರ್ತಿಸುವಂತೆ ಕಿವಿಮಾತು ಹೇಳಿದರು.
ಚಾಮುಂಡಿ ಸನ್ನಿಧಿಯಲ್ಲಿ ನಿಶ್ಯಬ್ಧ ಕಾಪಾಡುವಂತೆ ಬಾಯಿ ಮೇಲೆ ಬೆರಳು ಇಟ್ಟು ಸುದೀಪ್ ತಮ್ಮ ಅಭಿಮಾನಿಗಳಿಗೆ ಸನ್ನೆ ಮಾಡಿದರು. ಇದೇ ಸಂದರ್ಭದಲ್ಲಿ ಮಾಸ್ಕ್ ಧರಿಸದೇ ಫೋಟೋ ತೆಗೆಸಿಕೊಳ್ಳಲು ಬಂದ ಅಭಿಮಾನಿಗೆ ಮತ್ತೊಬ್ಬ ಅಭಿಮಾನಿ ಕ್ಲಾಸ್ ತೆಗೆದುಕೊಂಡ ಪ್ರಸಂಗ ನಡೆಯಿತು.
ಮೈಸೂರಿನಲ್ಲಿ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದು ಹಿಂದಿರುಗಿ ಬರುವಾಗ ಕಿಚ್ಚ ಸುದೀಪ ಅವರು, ಅಪಘಾತದಲ್ಲಿ ಕಾಲನ್ನು ಕಳೆದುಕೊಂಡಿದ್ದ ಮಂಡ್ಯ ಜಿಲ್ಲೆ ಪಾಂಡವಪುರ ತಾಲ್ಲೂಕಿನ ಹಿರೇಮರಳಿ ನಿವಾಸಿ ರಾಘವ್ ಎಂಬುವವರ ಚಿಕಿತ್ಸೆಗೆ ನೆರವಾಗುವ ಮೂಲಕ ಮಾನವೀಯತೆ ಮೆರೆದಿದ್ದಾರೆ.