ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರು: ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಕಿಚ್ಚ ಸುದೀಪ್

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಸೆಪ್ಟೆಂಬರ್ 3: ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಗುರುವಾರ ಭೇಟಿ ನೀಡಿದ ನಟ ಕಿಚ್ಚ ಸುದೀಪ್, ನಾಡದೇವತೆ ಚಾಮುಂಡೇಶ್ವರಿ ಅಮ್ಮನವರಿಗೆ ವಿಶೇಷ ಪೂಜೆ ಸಲ್ಲಿಸಿದರು.

ಬುಧವಾರವಷ್ಟೇ 47ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಂಡಿದ್ದ ನಟ ಸುದೀಪ್, ಗುರುವಾರ ಬೆಳಿಗ್ಗೆಯೇ ಚಾಮುಂಡಿ ಬೆಟ್ಟಕ್ಕೆ ತೆರಳಿ ಚಾಮುಂಡೇಶ್ವರಿ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಮಾಜಿ ಮೇಯರ್ ರವಿಕುಮಾರ್, ನಟ ಸುದೀಪ್ ಅವರಿಗೆ ಸಾಥ್ ನೀಡಿದರು.

ಸಿದ್ದಗಂಗಾ ಮಠಕ್ಕೆ ಸುದೀಪ್ ಭೇಟಿ; ಕಿಚ್ಚನ ಜೊತೆ ಇಂದ್ರಜಿತ್ಸಿದ್ದಗಂಗಾ ಮಠಕ್ಕೆ ಸುದೀಪ್ ಭೇಟಿ; ಕಿಚ್ಚನ ಜೊತೆ ಇಂದ್ರಜಿತ್

ಚಾಮುಂಡಿ ಬೆಟ್ಟಕ್ಕೆ ಸುದೀಪ್ ಭೇಟಿ ನೀಡುತ್ತಿರುವ ವಿಷಯ ತಿಳಿದು ನೂರಾರು ಅಭಿಮಾನಿಗಳು ದೇವಸ್ಥಾನದ ಮುಂದೆ ಜಮಾಯಿಸಿದ್ದರು. ತಮ್ಮ ನೆಚ್ಚಿನ ನಟನನ್ನು ಕಂಡು, ಸೆಲ್ಫೀ ತೆಗೆದುಕೊಂಡು ಸಂಭ್ರಮಿಸಿದರು.

Mysuru: Actor Kichcha Sudeep Visited To Chamundi Hill

ತಮ್ಮ ಹುಟ್ಟುಹಬ್ಬದ ಹಿಂದಿನ ದಿನದಂದು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ್ದ ಸುದೀಪ್, ಸಿದ್ದಗಂಗಾ ಶ್ರೀಗಳ ಗದ್ದುಗೆಗೆ ಪೂಜೆ ಸಲ್ಲಿಸಿದ್ದರು. ಇವರೊಂದಿಗೆ ನಿರ್ದೇಶಕ ಇಂದ್ರಜಿತ್ ಲಂಕೇಶ್ ಸಹ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ್ದರು.

English summary
Actor Kichcha Sudeep, who visited Mysuru's Chamundi Hill on Thursday, paid special Pooja to Chamundeshwari Devi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X