• search
  • Live TV
ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಸಿಎಂ ಸಿದ್ದರಾಮಯ್ಯ ಗಂಡು ಹುಲಿ ಎಂದ ನಟಿ ಜಯಮಾಲ

By Yashaswini
|

ಮೈಸೂರು, ಮೇ 2 : ಮುಖ್ಯಮಮತ್ರಿ ಸಿದ್ದರಾಮಯ್ಯ ಓರ್ವ ಗಂಡು ಹುಲಿ, ಅವರು ಗೆಲ್ಲಲು ಅವರ ಅಭಿವೃದ್ಧಿ ಕಾರ್ಯಗಳೇ ಶ್ರೀ ರಕ್ಷೆಯಾಗಲಿದೆ ಎಂದು ನಟಿ ಜಯಮಾಲಾ ತಿಳಿಸಿದರು.

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿಎಂ ಸಿದ್ದು ಪರ ಬ್ಯಾಟ್ ಬೀಸಿದ ನಟಿ ಜಯಮಾಲಾ, ಬಿಜೆಪಿ ಸರ್ಕಾರ ಕಾಂಗ್ರೆಸ್ ಸರ್ಕಾರದ ಸಾಧನೆಗಳು ಶೂನ್ಯ. ರಾಜ್ಯ ಸರ್ಕಾರ ಏನು ಸಾಧನೆ ಮಾಡಿದೆ ಅನ್ನೋದನ್ನ ಕರ್ನಾಟಕದ ಜನರೇ ಹೇಳುತ್ತಿದ್ದಾರೆ.

ಸುದೀಪ್ ಪ್ರಚಾರಕ್ಕೆ ಬರುತ್ತೇನೆ ಎಂದಿದ್ದು ನಿಜ: ಸಿದ್ದರಾಮಯ್ಯ

ರಾಜ್ಯದ ಜನತೆಗೆ ಅನ್ನಭಾಗ್ಯ ಸೇರಿದಂತೆ ಹತ್ತು ಹಲವು ಕಾರ್ಯಕ್ರಮಗಳನ್ನ ಕಾಂಗ್ರೆಸ್ ಸರ್ಕಾರ ನೀಡಿದೆ. ಯಾವುದೇ ಕಳಂಕ ಇಲ್ಲದ ಅಡಳಿತವನ್ನ ಕಾಂಗ್ರೆಸ್ ಸರ್ಕಾರ ನೀಡಿದೆ. ಆದ್ದರಿಂದ ಜನ ಈ ಭಾರಿ ಕಾಂಗ್ರೆಸ್ ಸರ್ಕಾರವನ್ನ ಗೆಲ್ಲಿಸುತ್ತಾರೆ ಎಂಬ ಸಂಪೂರ್ಣ ವಿಶ್ವಾಸ ನನಗಿದೆ ಎಂದರು.

ಸಿದ್ದರಾಮಯ್ಯ ಅವರಿಗೆ ಗೆಲ್ಲಲು ಕಷ್ಟ ಇದೆ ಎಂದು ಹೇಳುತ್ತಿದ್ದಾರೆ. ಆದರೆ ನನಗೆ ಹಾಗೆ ಎನಿಸುತ್ತಿಲ್ಲ. ತಮ್ಮ ಮಗನನ್ನು ಕಳೆದುಕೊಂಡರೂ ನೋವು ತೋರಿಸಿಕೊಳ್ಳದೇ ಅಭಿವೃದ್ಧಿ ಕಾರ್ಯದಲ್ಲಿ ತೊಡಗಿಕೊಂಡಿದ್ದರು. ಇಂದಿರಾ ಕ್ಯಾಂಟೀನ್ ಮಾಡಿ ಬಡವರ ಹಸಿವು ನೀಗಿಸಿದರು. ಎಲ್ಲಾ ರಂಗದಲ್ಲಿಯೂ ಅಭಿವೃದ್ಧಿ ಕಾರ್ಯ ಮಾಡಿದ್ದಾರೆ ಎಂದು ಜಯಮಾಲ ಹೇಳಿದರು.

ಚಾಮುಂಡೇಶ್ವರಿಯಲ್ಲಿ ಸಿದ್ದು ಸೋಲಿಗೆ ಕೈಜೋಡಿಸಿವೆಯಾ ಬಿಜೆಪಿ-ಜೆಡಿಎಸ್?!

ಸಿದ್ದರಾಮಯ್ಯ ಬಾದಾಮಿಯಲ್ಲಿ ಸ್ಪರ್ಧೆ ಮಾಡಿದ್ದರಲ್ಲಿ ತಪ್ಪೇನು ಇಲ್ಲ. ಸಿದ್ದರಾಮಯ್ಯ ಅವರಿಗೆ ಎದೆಗಾರಿಗೆ ಇದೆ. ತೊಡೆ ತಟ್ಟಿ ಗಣಿಗಾರಿಕೆ ಬಗ್ಗೆ ಹೋರಾಟ ಮಾಡಿದ ಸಿಂಹ ಸಿದ್ದರಾಮಯ್ಯ. ಹೆದರಿಕೊಂಡು ಸಿದ್ದರಾಮಯ್ಯ ಬಾದಾಮಿಗೆ ಹೋಗಿದ್ದಲ್ಲ. ಎರಡೂ ಕಡೆ ಸಿದ್ದರಾಮಯ್ಯ ಗೆಲ್ಲುತ್ತಾರೆ ಎನ್ನುವ ವಿಶ್ವಾಸ ನಮ್ಮಲ್ಲಿದೆ ಎಂದು ಜಯಮಾಲ ಹೇಳಿದರು.

ನಟ ಮುಖ್ಯಮಂತ್ರಿ ಚಂದ್ರು ಸಾಥ್ : ಕಳೆದ ಐದು ವರ್ಷಗಳಲ್ಲಿ ಪ್ರಣಾಳಿಕೆಯಲ್ಲಿ ಹೇಳಿದ ಎಲ್ಲ ಅಂಶಗಳನ್ನು ಕಾಂಗ್ರೆಸ್ ಜಾರಿಗೆ ತಂದಿದೆ. ಈ ಮೂಲಕ ಎಲ್ಲಾ ಭರವಸೆಗಳನ್ನು ಈಡೇರಿಸಿದೆ. ಕಾಂಗ್ರೆಸ್ ಸಮಾಜವಾದದ ಪಕ್ಷವಾಗಿದೆ. ಶೋಷಿತ ವರ್ಗಕ್ಕೆ ಸಿದ್ದರಾಮಯ್ಯ ಸಾಕಷ್ಟು ಅನುಕೂಲ ಮಾಡಿಕೊಟ್ಟಿದ್ದಾರೆ. ಆದ್ದರಿಂದ ಈ ಬಾರಿ ಪ್ರಚಾರದ ವೇಳೆ ಕೋಮುವಾದಿಗಳನ್ನು ದೂರ ಇಡುವಂತೆ ಜನರಲ್ಲಿ ಮನವಿ ಮಾಡಲಿದ್ದೇವೆ ಎಂದು ಮೈಸೂರಿನಲ್ಲಿ ನಟ ಚಂದ್ರು ಹೇಳಿದ್ದಾರೆ.

ಇನ್ನು ಇದೇ ವೇಳೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು ಕೇಂದ್ರ ದಲ್ಲಿ ಆಡಳಿತದಲ್ಲಿರುವ ಬಿಜೆಪಿ ನೇತೃತ್ವದ ಸರ್ಕಾರ ಆಡಳಿತದಲ್ಲಿ ವಿಫಲವಾಗಿದೆ. ಕಪ್ಪುಹಣ ತಂದು ಜನರಿಗೆ ಒಳ್ಳೆಯದು ಮಾಡುತ್ತೇವೆ ಅಂದಿದ್ದ ಬಿಜೆಪಿ ಅದನ್ನು ಮಾಡಲಿಲ್ಲ. ತರಾತುರಿಯಲ್ಲಿ ಜಿಎಸ್ಟಿ ಜಾರಿಗೆ ತರಲಾಯಿತು. ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಬೇಕು ಅನ್ನುವುದೇ ನಮ್ಮ ಉದ್ದೇಶವಾಗಿದೆ ಎಂದಿದ್ದಾರೆ.

English summary
Member of legislative council and actress Jayamala has described that chief minister Siddaramaiah is like a male tiger and people should support him for development of the state.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X