ಕೊರೊನಾ ವೈರಸ್ ಬೆನ್ನಲ್ಲೇ ಮೈಸೂರಲ್ಲಿ ಹಕ್ಕಿ ಜ್ವರದ ಭೀತಿ
ಮೈಸೂರು, ಮಾರ್ಚ್ 09: ಕೊರೊನಾ ವೈರಸ್ ಭೀತಿಯ ನಡುವೆಯೇ ಮೈಸೂರಿನಲ್ಲಿ ಹಕ್ಕಿ ಜ್ವರದ ಭೀತಿ ಎದುರಾಗಿದ್ದು, ಕಳೆದೊಂದು ವಾರದಿಂದ ಹನ್ನೆರಡು ಕೊಕ್ಕರೆಗಳು ಸಾವನ್ನಪ್ಪಿವೆ.
ಕೊಕ್ಕರೆಗಳ ಸಾವು ಆತಂಕಕ್ಕೆ ಕಾರಣವಾಗಿದ್ದು, ನೆರೆಯ ರಾಜ್ಯ ಕೇರಳದಲ್ಲಿ ಹಕ್ಕಿಜ್ವರ ಕಾಣಿಸಿಕೊಂಡಿರುವುದರಿಂದ ಮೈಸೂರಿಗರಲ್ಲಿಯೂ ಈ ಕೊಕ್ಕರೆಗಳ ಸಾವು ತಲ್ಲಣ ಉಂಟುಮಾಡಿದೆ.
ಮೈಸೂರು ಪಾಲಿಕೆಯ ವಾರ್ಡ್ ನಂಬರ್ 55 ರ ವ್ಯಾಪ್ತಿಯಲ್ಲೇ 12 ಕೊಕ್ಕರೆಗಳು ಸಾವನ್ನಪ್ಪಿವೆ. ಸ್ಥಳೀಯ ನಗರಪಾಲಿಕೆ ಸದಸ್ಯ ಮಾ.ವಿ ರಾಮಪ್ರಸಾದ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಹಾನಗರ ಪಾಲಿಕೆಯ ಪಶು ವೈದ್ಯಕೀಯ ಇಲಾಖೆಯ ಸಹಾಯಕ ನಿರ್ದೇಶಕ ಡಾ. ನಾಗರಾಜ್ ಅವರಿಗೆ ಮಾಹಿತಿ ನೀಡಿರುವ ರಾಮಪ್ರಸಾದ್. ಬಳಿಕ ಸ್ಥಳಕ್ಕೆ ಆಗಮಿಸಿದ ಡಾ. ನಾಗರಾಜ್ ರಿಂದ ಮೃತ ಕೊಕ್ಕರೆಗಳ ದೇಹದ ತುಣುಕುಗಳು ಬೆಂಗಳೂರಿನ ಪಶು ಆರೋಗ್ಯ ಮತ್ತು ಜೈವಿಕ ಸಂಸ್ಥೆಯ ಪ್ರಯೋಗಾಲಯಕ್ಕೆ ರವಾನೆ ಮಾಡಲಾಗಿದೆ.

ಪಾಲಿಕೆ ಸದಸ್ಯ ಮಾ.ವಿ. ರಾಮಪ್ರಸಾದ್, ಕೊಕ್ಕರೆಗಳ ಸಾವಿಗೆ ಹಕ್ಕಿ ಜ್ವರವೇ ಕಾರಣವಿರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.












Click it and Unblock the Notifications