Get Updates
Get notified of breaking news, exclusive insights, and must-see stories!

ಕೃಷಿ ಸಚಿವ ಬಿ.ಸಿ ಪಾಟಿಲ್ ರೈತರ ಕ್ಷಮೆಯಾಚಿಸಬೇಕು: ಸಾ.ರಾ ಮಹೇಶ್ ಆಗ್ರಹ

ಮೈಸೂರು, ಜನವರಿ 20: ರೈತರ ಆತ್ಮಹತ್ಯೆ ಬಗ್ಗೆ ಲಘುವಾಗಿ ಮಾತನಾಡಿರುವ ಕೃಷಿ ಸಚಿವ ಬಿ.ಸಿ ಪಾಟೀಲ್ ಹೇಳಿಕೆಯನ್ನು ಖಂಡಿಸಿರುವ ಶಾಸಕ ಸಾ.ರಾ.ಮಹೇಶ್, ಕೃಷಿ ಸಚಿವರು ಕೂಡಲೇ ರೈತರ ಕ್ಷಮೆ ಯಾಚಿಸಬೇಕೆಂದು ಆಗ್ರಹಿಸಿದ್ದಾರೆ.

ಈ ಬಗ್ಗೆ ಸರಣಿ ‌ಟ್ವೀಟ್ ಮಾಡಿರುವ ಅವರು, ಕೃಷಿ ಇಲಾಖೆಯಲ್ಲಿ ವರ್ಗಾವಣೆ ಹೆಸರಿನಲ್ಲಿ ಸಚಿವರು, ಅಧಿಕಾರಿಗಳಿಂದ ಭ್ರಷ್ಟಾಚಾರ ನಡೆಯುತ್ತಿರುವ ಬಗ್ಗೆ ಇಲಾಖೆ ಸಿಬ್ಬಂದಿಯೇ ಮುಖ್ಯಮಂತ್ರಿಗಳಿಗೆ ಅವರಿಗೆ ಪತ್ರ ಬರೆದಿದ್ದಾರೆ. ಸಮಸ್ಯೆ ಸರಿಪಡಿಸದಿದ್ದರೆ ಸಾಮೂಹಿಕವಾಗಿ ದಯಾಮರಣಕ್ಕೆ ಅರ್ಜಿ ಸಲ್ಲಿಸುವುದಾಗಿ ಎಚ್ಚರಿಸಿದ್ದಾರೆ. ಈ ಭ್ರಷ್ಟಾಚಾರ ಆರೋಪ ಬಂದಿದ್ದು ಹೇಗೆ? ಇದು ಎಂಥ ದೌರ್ಬಲ್ಯ? ಎಂದು ಟೀಕಿಸಿದ್ದಾರೆ.

ಆತ್ಮಹತ್ಯೆ ಮಾಡಿಕೊಳ್ಳುವ ರೈತರು ದುರ್ಬಲ ಮನಸ್ಸಿನವರು ಎನ್ನುವ ಕೃಷಿ ಸಚಿವ ಬಿ.ಸಿ ಪಾಟೀಲರು, ತಮ್ಮ ಹಣದ ದೌರ್ಬಲ್ಯದ ಬಗ್ಗೆ ಏಕೆ ಮಾತಾಡುವುದಿಲ್ಲ? ರೈತನ ಸಂಕಷ್ಟದ ಪರಿಸ್ಥಿತಿಯನ್ನು ಗೇಲಿ ಮಾಡುವ ಬಿ.ಸಿ. ಪಾಟೀಲ್ ವರ್ತನೆಯೇ ದುರ್ಬಲ ಮನಸ್ಸಿನ ಪ್ರತೀಕ. ಅವರ ವರ್ತನೆ ಅಕ್ಷಮ್ಯ ಅಪರಾಧ. ಕೈಲಾದರೆ ರೈತರಿಗೆ ಒಳ್ಳೆದು ಮಾಡಿ, ಹೀಗೆಲ್ಲ ಮಾತನಾಡಬೇಡಿ ಎಂದಿದ್ದಾರೆ.

Mysuru: Agriculture Minister BC Patil Should Apologizes Of Farmers: Sa Ra Mahesh

ಬಿ.ಸಿ. ಪಾಟೀಲ್ ಮೊದಲು ರೈತರ ಕ್ಷಮೆ ಕೇಳಬೇಕು. ಕೃಷಿ ಇಲಾಖೆಯ ಸಿಬ್ಬಂದಿಯೇ ಮಾಡಿರುವ ಲಂಚದ ಆರೋಪದ ಕುರಿತು ಸ್ಪಷ್ಟನೆ ನೀಡಬೇಕು. ಸರ್ಕಾರ ಈ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸಬೇಕು. ಭ್ರಷ್ಟಾಚಾರ ಸಾಬೀತಾದರೆ ಬಿ.ಸಿ. ಪಾಟೀಲ್ ಅವರನ್ನು ಮುಲಾಜಿಲ್ಲದೇ ಮಂತ್ರಿಮಂಡಲದಿಂದ ಹೊರದಬ್ಬಬೇಕು ಎಂದು ಆಗ್ರಹಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+