ಮೈಸೂರು : ವಾಯುಪಡೆ ಸಿಬ್ಬಂದಿ ಆತ್ಮಹತ್ಯೆ

ಮೈಸೂರು, ಡಿ. 8 : ಮೈಸೂರಿನಲ್ಲಿ ವಾಯುಪಡೆಯ ವೈದ್ಯಕೀಯ ಸಿಬ್ಬಂದಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಷದ ಇಂಜೆಕ್ಷನ್ ಚುಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ತನ್ನ ದೇಹದ ಅಂಗಾಗಳನ್ನು ದಾನ ಮಾಡಿ ಎಂದು ಡೆತ್‌ನೋಟ್ ಬರೆದಿಟ್ಟಿದ್ದಾರೆ.

ಆತ್ಮಹತ್ಯೆ ಮಾಡಿಕೊಂಡವರನ್ನು ಪವನ್ (28) ಎಂದು ಗುರುತಿಸಲಾಗಿದೆ. ಯರಗನಹಳ್ಳಿಯಲ್ಲಿರುವ ಭಾರತೀಯ ವಾಯುಪಡೆಯ ಕಮಾಂಡೋ ಆಸ್ಪತ್ರೆಯಲ್ಲಿ ಪವನ್ ಕಳೆದ ನಾಲ್ಕು ವರ್ಷಗಳಿಂದ ವೈದ್ಯಕೀಯ ಸಹಾಯಕರಾಗಿ ಕೆಲಸ ಮಾಡುತ್ತಿದ್ದರು.

Mysuru

ಸೋಮವಾರ ಮುಂಜಾನೆ ಪವನ್ ನಿವಾಸದಲ್ಲಿ ಮೃತದೇಹ ಪತ್ತೆಯಾಗಿದ್ದು, ಭಾನುವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ನಜಾರಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ. [ಮೈಸೂರು ರೈಲು ನಿಲ್ದಾಣದಲ್ಲಿ ದಂಡ ಪ್ರಯೋಗ]

ಅಂಗಾಗಳನ್ನು ದಾನ ಮಾಡಿ : ಪವನ್ ಮನೆಯ ಗೋಡೆ ಮೇಲೆ ಡೆತ್‌ನೋಟ್ ಬರೆದಿಟ್ಟಿದ್ದು 'ನನ್ನ ಸಾವಿಗೆ ನಾನೇ ಕಾರಣ ಎಂದು ಬರೆದಿಟ್ಟಿದ್ದಾರೆ' ಎಂದು ಪೊಲೀಸರು ತಿಳಿಸಿದ್ದಾರೆ. ಡೆತ್‌ನೋಟ್‌ನಲ್ಲಿ ಸಾವಿನ ನಂತರ ಎಲ್ಲಾ ಅಂಗಾಗಳನ್ನು ದಾನ ಮಾಡುವಂತೆ ಪವನ್ ಬರೆದಿಟ್ಟಿದ್ದಾರೆ. ಮರಣೋತ್ತರ ಪರೀಕ್ಷೆ ನಂತರ ಅಂಗಾಗ ದಾನಕ್ಕೆ ಅಗತ್ಯ ವ್ಯವಸ್ಥೆ ಮಾಡಲಾಗುತ್ತದೆ ಎಂದು ಪೊಲೀಸರು ಹೇಳಿದ್ದಾರೆ.

ವೈಯಕ್ತಿಕ ಕಾರಣಗಳಿಂದಾಗಿ ಪವನ್ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದು ತನಿಖೆ ಮುಂದುವರೆದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+