ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

"ಸರ್ಕಾರಿ ಆಸ್ಪತ್ರೆಗಳಲ್ಲಿ ಜನವರಿಯಿಂದ ಎಲ್ಲಾ ಪರೀಕ್ಷೆಗಳು ಉಚಿತ"

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ನವೆಂಬರ್ 11: ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ತನಕ ರೋಗಿಗಳಿಗೆ ಎಲ್ಲಾ ಪರೀಕ್ಷೆಗಳನ್ನು ಉಚಿತವಾಗಿ ಮಾಡಲಾಗುತ್ತದೆ. ಈ ನೂತನ ವ್ಯವಸ್ಥೆಯನ್ನು ಜ.1ರಂದು ಘೋಷಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಮೈಸೂರು ಮೆಡಿಕಲ್ ಕಾಲೇಜು ಮತ್ತು ಸಂಶೋಧನಾಲಯದ ಡೀನ್ ಕಚೇರಿಯಲ್ಲಿ ಬುಧವಾರ ಕಾಲೇಜು ಮತ್ತು ಅಂಗ ಆಸ್ಪತ್ರೆಗಳ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡುವಾಗ ಈ ಮಹತ್ವದ ವಿಚಾರವನ್ನು ತಿಳಿಸಿದ ಸಚಿವರು, "ಸರ್ಕಾರಿ ಆಸ್ಪತ್ರೆಗಳಲ್ಲಿ ರಕ್ತ ಪರೀಕ್ಷೆ ಸೇರಿದಂತೆ ಯಾವುದೇ ಪರೀಕ್ಷೆಗಳನ್ನು ಮಾಡದೆ ಖಾಸಗಿ ಲ್ಯಾಬ್ ‌ಗೆ ಕಳುಹಿಸಲಾಗುತ್ತದೆ. ಕೆಲವು ಲ್ಯಾಬ್ ‌ಗಳಿಗೆ ಸರ್ಕಾರಿ ವೈದ್ಯರೇ ಪಾಲುದಾರರಾಗಿದ್ದಾರೆ. ಹಾಗಾಗಿ, ಇದನ್ನು ತಪ್ಪಿಸಲು ಜ.1ರಿಂದ ರಕ್ತಪರೀಕ್ಷೆ, ಎಂಆರ್ ‌ಐ, ಸಿಟಿ ಸ್ಕ್ಯಾನ್ ಸೇರಿ ಯಾವುದೇ ತರಹದ ಪರೀಕ್ಷೆಗಳಿಗೂ ಶುಲ್ಕ ಪಡೆಯುವಂತಿಲ್ಲ" ಎಂದರು.

108 ಆರೋಗ್ಯ ಸೇವೆಗೆ ಮೇಜರ್ ಸರ್ಜರಿಗೆ ಮುಂದಾದ ಸುಧಾಕರ್108 ಆರೋಗ್ಯ ಸೇವೆಗೆ ಮೇಜರ್ ಸರ್ಜರಿಗೆ ಮುಂದಾದ ಸುಧಾಕರ್

ಸರ್ಕಾರಿ ಆಸ್ಪತ್ರೆಗಳ ನೂರು ಮೀಟರ್ ದೂರದ ಒಳಗೆ ಯಾವುದೇ ಖಾಸಗಿ ಮೆಡಿಕಲ್ ಶಾಪ್ ಇರಬಾರದು. ಸರ್ಕಾರ ನೀಡುವ ಔಷಧ, ವೈದ್ಯಕೀಯ ಉಪಕರಣಗಳನ್ನು ಬಳಸಿಕೊಂಡು ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಸೇವೆ ಕೊಡಲು ಹಾಗೂ ಮಾನಿಟರಿಂಗ್ ಮಾಡಲು ಸಮಿತಿ ರಚಿಸಲಾಗುವುದು ಎಂದು ಹೇಳಿದರು.

 All Health Tests Free From January In Government Hospitals Said Minister K Sudhakar

ಮೈಸೂರಿನಲ್ಲಿ ನಿರ್ಮಿಸಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ತಕ್ಷಣವೇ ವೈದ್ಯಕೀಯ ಅಧೀಕ್ಷಕರನ್ನು ನೇಮಿಸಲಾಗುವುದು. ಕಟ್ಟಡಕ್ಕೆ ಬೇಕಾದ ಉಪಕರಣಗಳ ಖರೀದಿಗೆ ಟೆಂಡರ್ ಕರೆದಿರುವ ಹಿನ್ನೆಲೆಯಲ್ಲಿ ಆದಷ್ಟು ಬೇಗನೆ ಸೇವೆ ಆರಂಭಿಸುವಂತೆ ಕ್ರಮ ಕೈಗೊಳ್ಳಲಾಗುವುದು. ಬೆಂಗಳೂರು ಮೆಡಿಕಲ್ ಕಾಲೇಜು ಮಾದರಿಯಲ್ಲೇ ಸ್ಕಿಲ್ ಲ್ಯಾಬ್ ಅನ್ನು ಎಂಎಂಸಿಯಲ್ಲಿ ಆರೋಗ್ಯ ವಿವಿ ಮೂಲಕ ಸ್ಥಾಪಿಸಲಾಗುವುದು. ಇಲ್ಲಿನ ನಾಲ್ಕು ಆಸ್ಪತ್ರೆಗಳ ಮೇಲುಸ್ತುವಾರಿಗೆ ವಿಶೇಷ ಸಮಿತಿಗಳನ್ನು ರಚಿಸಲಾಗುವುದು ಎಂದ ಸಚಿವರು, ಟ್ರಾಮಾ ಕೇರ್ ಸೆಂಟರ್ ಕಾಮಗಾರಿ ವಿಳಂಬಕ್ಕೆ ಕಾರಣಗಳನ್ನು ಕೇಳಿ ತ್ವರಿತವಾಗಿ ಪೂರ್ಣಗೊಳಿಸಲು ಸೂಚನೆ ನೀಡಿದರು.

English summary
All health tests are done free of charge by the government from the state's primary health center to the super specialty hospital. The new system will be announced on January 1, said Medical Education minister Dr K Sudhakar in mysuru
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X