ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರು; ಪಾಲಿಕೆ ಮೇಯರ್ ಪಟ್ಟಕ್ಕೆ ಶುರು ಆಯ್ತು ಲೆಕ್ಕಾಚಾರ!

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಫೆಬ್ರವರಿ 15; ಮೈಸೂರು ಮಹಾನಗರ ಪಾಲಿಕೆ ಹಾಲಿ ಮೇಯರ್ ಸುನಂದ ಪಾಲನೇತ್ರ ಅಧಿಕಾರಾವಧಿ ಫೆಬ್ರವರಿ 23ರಂದು ಮುಕ್ತಾಯಗೊಳ್ಳಲಿದೆ. ಹೊಸ ಮೇಯರ್ ಆಯ್ಕೆಗೆ ಸರಕಾರ ನಿಗದಿಪಡಿಸುವ ಮೀಸಲಿನ ಮೇಲೆ ಮೂರು ಪಕ್ಷಗಳು ಕಣ್ಣಿಟ್ಟಿವೆ.

ಇನ್ನೂ 8 ದಿನದಲ್ಲಿ ಮೇಯರ್ ಅವಧಿ ಮುಗಿಯುವುದರಿಂದ ಮುಂದಿನ ಮೇಯರ್ ಯಾರಾಗಲಿದ್ದಾರೆ? ಎಂಬ ಕುತೂಹಲ ಮೂಡಿದೆ. ಮೂರನೇ ಅವಧಿಯ ಮೇಯರ್ ಚುನಾವಣೆ ಕಾಂಗ್ರೆಸ್, ಜೆಡಿಎಸ್ ಮತ್ತು ಬಿಜೆಪಿ ನಡುವಿನ ಮೈತ್ರಿ ಕಾರಣಕ್ಕೆ ರಾಷ್ಟ್ರ ಮಟ್ಟದ ಗಮನ ಸೆಳೆದಿತ್ತು.

ಪಕ್ಷೇತರ ಅಭ್ಯರ್ಥಿಗೆ ಉಪ-ಮೇಯರ್ ಸ್ಥಾನ ಕೊಟ್ಟ ಬಿಜೆಪಿ!ಪಕ್ಷೇತರ ಅಭ್ಯರ್ಥಿಗೆ ಉಪ-ಮೇಯರ್ ಸ್ಥಾನ ಕೊಟ್ಟ ಬಿಜೆಪಿ!

ಈಗ ನಾಲ್ಕನೇ ಅವಧಿಯ ಮೇಯರ್ ಚುನಾವಣೆ ಸಾಕಷ್ಟು ಕುತೂಹಲ ಕೆರಳಿಸಿದೆ. ವರ್ಷದಲ್ಲಿಯೇ ಮೂವರು ಮೇಯರ್ ಕಂಡ ಮೈಸೂರು ಮಹಾನಗರ ಪಾಲಿಕೆಯು, ಸದ್ಯ ಹೊಸ ಮೇಯರ್ ಆಯ್ಕೆಯ ನಿರೀಕ್ಷೆಯಲ್ಲಿದೆ.

ದಾವಣಗೆರೆ ಮೇಯರ್ ಕಾರಿಗೆ ಸಿನಿಮಾ ಸ್ಟೈಲ್‌ನಲ್ಲಿ ಬೈಕ್ ಡಿಕ್ಕಿ: ಹೆಲ್ಮೆಟ್ ಉಳಿಸಿತು ಪ್ರಾಣ! ದಾವಣಗೆರೆ ಮೇಯರ್ ಕಾರಿಗೆ ಸಿನಿಮಾ ಸ್ಟೈಲ್‌ನಲ್ಲಿ ಬೈಕ್ ಡಿಕ್ಕಿ: ಹೆಲ್ಮೆಟ್ ಉಳಿಸಿತು ಪ್ರಾಣ!

All Prtys Eye On Mysore City Corporation Mayor Reservation

ಕಾಂಗ್ರೆಸ್-ಜೆಡಿಎಸ್ ಪಕ್ಷಗಳ ನಡುವೆ ಆದ ಒಡಂಬಡಿಕೆ ಪ್ರಕಾರ ಮೊದಲನೇ ಅವಧಿಯಲ್ಲಿ ಕಾಂಗ್ರೆಸ್ ಪುಷ್ಪಲತಾ ಜಗನ್ನಾಥ್, ಎರಡನೇ ಅವಧಿಯಲ್ಲಿ ಜೆಡಿಎಸ್‌ನ ತಸ್ನಿಂ ಆಯ್ಕೆಗೊಂಡಿದ್ದರು. ಮೂರನೇ ಅವಧಿಯ ಮೇಯರ್ ಸ್ಥಾನವನ್ನು ಜೆಡಿಎಸ್ ಕಾಂಗ್ರೆಸ್‌ಗೆ ಬಿಟ್ಟುಕೊಡಬೇಕಾಗಿತ್ತು.

ಮೈಸೂರು ಬಿಜೆಪಿ ಭಿನ್ನಮತ ಪಕ್ಷಕ್ಕೆ ಮುಳುವಾಗುತ್ತಾ? ಮೈಸೂರು ಬಿಜೆಪಿ ಭಿನ್ನಮತ ಪಕ್ಷಕ್ಕೆ ಮುಳುವಾಗುತ್ತಾ?

ಆದರೆ, ಅಂತಿಮ ಕ್ಷಣದಲ್ಲಿ ಆದ ರಾಜಕೀಯ ಬೆಳವಣಿಗೆಯಲ್ಲಿ ಕಾಂಗ್ರೆಸ್ ಸದಸ್ಯರು ಜೆಡಿಎಸ್‌ಗೆ ಬೆಂಬಲ ಸೂಚಿಸಿದ ಹಿನ್ನೆಲೆಯಲ್ಲಿ ಜೆಡಿಎಸ್‌ನ ರುಕ್ಮಿಣಿ ಮಾದೇಗೌಡ ಮೇಯರ್ ಸ್ಥಾನ ಅಲಂಕರಿಸಿದರು. ಈ ನಡುವೆ ರುಕ್ಮಿಣಿ ಮಾದೇಗೌಡ ಚುನಾವಣೆ ಸಂದರ್ಭ ಅಫಿಡವಿಟ್‌ನಲ್ಲಿ ಆಸ್ತಿ ವಿವರವನ್ನು ಮರೆಮಾಚಿದ ಆರೋಪದ ಹಿನ್ನೆಲೆಯಲ್ಲಿ ಸದಸ್ಯತ್ವ ಕಳೆದುಕೊಂಡರು.

ನಂತರ ಜೂನ್‌ 25 ರಂದು ಮೇಯರ್ ಸ್ಥಾನಕ್ಕೆ ಚುನಾವಣೆ ನಡೆಯಿತು. ಈ ಸಂದರ್ಭ ಕಾಂಗ್ರೆಸ್-ಜೆಡಿಎಸ್‌ನ ಮೈತ್ರಿಯಲ್ಲಿ ಬಿರುಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪ್ರತ್ಯೇಕವಾಗಿ ಮೇಯರ್ ಸ್ಥಾನಕ್ಕೆ ಸ್ಪರ್ಧಿಸಿತು.

ಅತಿ ಹೆಚ್ಚು ಸದಸ್ಯರನ್ನು ಹೊಂದಿದ್ದ ಬಿಜೆಪಿ ಮೇಯರ್ ಪಟ್ಟವನ್ನು ಪಡೆಯುವಲ್ಲಿ ಯಶಸ್ವಿಯಾಯಿತು. ಈ ಎಲ್ಲ ರಾಜಕೀಯ ಬೆಳವಣಿಗೆ ಹಿನ್ನೆಲೆಯಲ್ಲಿ ಈ ಬಾರಿಯ ಮೇಯರ್ ಚುನಾವಣೆ ಎಲ್ಲರ ಕುತೂಹಲ ಕೆರಳಿಸಿದೆ.

ಮೈಸೂರು ಪಾಲಿಕೆ ಇತಿಹಾದಲ್ಲೇ ಮೊದಲ ಬಾರಿಗೆ ಬಿಜೆಪಿಗೆ ಮೇಯರ್ ಪಟ್ಟ ಸಿಕ್ಕಿತ್ತು. 1983ರಲ್ಲಿ ಮಹಾನಗರ ಪಾಲಿಕೆಯಾಗಿ ರಚನೆಯಾದರೂ ಬಿಜೆಪಿಗೆ ಅಧಿಕಾರ ಸಿಕ್ಕಿರಲಿಲ್ಲ. ಸುನಂದಾ ಪಾಲನೇತ್ರ ಮೇಯರ್ ಆಗುವ ಮೂಲಕ ಬಿಜೆಪಿಗೆ ಅಧಿಕಾರ ಸಿಕ್ಕಿತ್ತು. ಸುನಂದಾ ಪಾಲನೇತ್ರ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ದೂರದ ಸಂಬಂಧಿ.

ಪಕ್ಷಗಳ ಬಲಾಬಲ; ಮೈಸೂರು ಮಹಾನಗರ ಪಾಲಿಕೆಯ ಸದಸ್ಯ ಬಲ 65. ಪಾಲಿಕೆಯಲ್ಲಿ ಬಿಜೆಪಿ 22, ಕಾಂಗ್ರೆಸ್ 20, ಜೆಡಿಎಸ್ 17, ಬಿಎಸ್ಪಿ 1 ಹಾಗೂ ಐವರು ಪಕ್ಷೇತರರು ಇದ್ದಾರೆ.

ಪಾಲಿಕೆಗೆ ಸಂಸದರು, ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರು ಸಹ ಸದಸ್ಯರಾಗಿರುವ ಹಿನ್ನೆಲೆಯಲ್ಲಿ ಪಾಲಿಕೆಯ ಸದಸ್ಯ ಬಲ ಒಟ್ಟು 72 ಇದೆ. ಈ ಪೈಕಿ ಬಿಜೆಪಿ 25, ಜೆಡಿಎಸ್ 20, ಕಾಂಗ್ರೆಸ್ 21, ಬಿಎಸ್ಪಿ 1 ಹಾಗೂ ಐವರು ಪಕ್ಷೇತರ ಸದಸ್ಯರು ಇದ್ದಾರೆ.

''ಮೇಯರ್ ಸ್ಥಾನದ ಮೀಸಲು ಘೋಷಣೆಯಾದ ಬಳಿಕವೇ ತಮ್ಮ ಪಕ್ಷದಿಂದ ಮೇಯರ್ ಸ್ಥಾನದ ಆಕಾಂಕ್ಷಿಗಳು ಯಾರೆಂಬುದು ಸ್ಪಷ್ಟವಾಗಲಿದೆ. ನಂತರವೇ ಅನ್ಯ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಬೇಕೋ? ಅಥವಾ ಬೇಡವೋ? ಎಂದು ನಿರ್ಧಾರ ಕೈಗೊಳ್ಳಲು ಸಾಧ್ಯ" ಎಂದು ಕಾಂಗ್ರೆಸ್ ಪಕ್ಷದ ನಗರಾಧ್ಯಕ್ಷ ಆರ್. ಮೂರ್ತಿ ತಿಳಿಸಿದರು.

ಈ ಬಾರಿ ಜೆಡಿಎಸ್ ಅಭ್ಯರ್ಥಿಯೇ ಮೇಯರ್ ಪಟ್ಟ ಅಲಂಕರಿಸುತ್ತಾರೆ ಎಂದು ಕೆ. ಆರ್. ನಗರದ ಶಾಸಕ ಸಾ. ರಾ. ಮಹೇಶ್ ಸವಾಲು ಹಾಕಿದ್ದಾರೆ. ಇತ್ತ ಬಿಜೆಪಿಯು ಈ ಬಾರಿಯೂ ಸಹ ಸರಕಾರ ನಿಗದಿ ಮಾಡಲಿರುವ ಮೀಸಲು ನೋಡಿಕೊಂಡು ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು ಎಂದು ನಗರಾಧ್ಯಕ್ಷ ಟಿ. ಎಸ್. ಶ್ರೀವತ್ಸ ತಿಳಿಸಿದ್ದಾರೆ.

Recommended Video

RCB ಆಟಗಾರರ ಕಾಂಬಿನೇಷನ್ ನೋಡಿದ್ರೆ ಗ್ಯಾರೆಂಟಿ ಕಪ್ ನಮ್ದೇ | Oneindia Kannada

English summary
Tenure of Mysore City Corporation mayor Sunanda Palanethra will end on February 23. Who will become new mayor of Mysuru city.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X