Amit Shah: ಸುತ್ತೂರು ಮಠದ ನಿಸ್ವಾರ್ಥ ಸೇವೆ ಶ್ಲಾಘಿಸಿದ ಅಮಿತ್ ಶಾ
ಮೈಸೂರು: ಸುತ್ತೂರು ಮಠವು ನಿಸ್ವಾರ್ಥ ಸೇವೆ ಮೂಲಕ ಲಕ್ಷಾಂತರ ಜನರ ಬೆಳವಣಿಗೆಗೆ ಕಾರಣವಾಗಿದೆ. ಇದು ನಿರಂತರವಾಗಿ ಪರೋಪಕಾರದ ಕೇಂದ್ರವಾಗಿ ಹೊರಹೊಮ್ಮಿದೆ. ಬಿಜೆಪಿ ಈ ಸೇವೆಯನ್ನು ಗುರುತಿಸಿ ಅವರಿಗೆ ವಂದಿಸಯತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದರು.
ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಸೇರಿದ ಜನಸ್ತೋಮವನ್ನು ಉದ್ದೇಶಿಸಿ ಮಾತನಾಡಿದ ಅವರು. ಮಠದ 24 ಮಠಾಧೀಶರು ಇಲ್ಲಿ ನಿಸ್ವಾರ್ಥ ಸೇವೆ ಮಾಡಿದ್ದಾರೆ ಎಂದರು. ಸುತ್ತೂರು ಮಠದ ಜಗದ್ಗುರುಗಳ ಆಶೀರ್ವಾದ ಕೋರಿ ಅವರು ಭಾಷಣ ಆರಂಭಿಸಿದರು. ಬಸವಣ್ಣ ಕೇವಲ ಒಂದು ವರ್ಗಕ್ಕೆ ಸೀಮಿತರಲ್ಲ; ದೇಶದ ಕೋಟ್ಯಂತರ ಜನರಿಗೆ ಪ್ರೇರಣೆ ತುಂಬಿದ ಮಹಾಪುರುಷರು ಎಂದರು.

ಮೋದಿ ಅವರು ಕಾಶಿ ಕಾರಿಡಾರ್, ಮಧ್ಯಪ್ರದೇಶದ ಮಹಾಕಾಲ ಕಾರಿಡಾರ್, ಕೇದಾರನಾಥ ಪುನರುತ್ಥಾನ, ಅಯೋಧ್ಯೆಯಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ಮೂಲಕ ದೇಶದ ಸಂಸ್ಕೃತಿಯ ಪುನರುತ್ಥಾನಕ್ಕೆ ಮಹತ್ವ ನೀಡಿದ್ದಾರೆ ಎಂದು ಶ್ಲಾಘಿಸಿದರು.
ಅಯೋಧ್ಯೆಯಲ್ಲೂ ಸುತ್ತೂರು ಶಾಖಾ ಮಠ ತೆರೆಯಲ್ಲೂ ಶ್ರಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಯವರ ನಿರ್ಧರಿಸಿರುವುದು ಸಂತಸ ತಂದಿದೆ ಎಂದರು. ದೇಶದ ಸಂಸ್ಕೃತಿ, ಪರಂಪರೆ, ಯೋಗ, ಆಯುರ್ವೇದ ಹಾಗೂ ಭಾಷೆ ಪುನರುಜ್ಜೀವನಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಆದ್ಯತೆ ಕೊಟ್ಟಿದ್ದಾರೆ ಎಂದು ಹೇಳಿದರು.
ಅಮಿತ್ ಶಾ-ಮೋದಿ ಜೋಡೆತ್ತು!
ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಜೋಡೆತ್ತುಗಳು. ಇಬ್ಬರೂ ಸೇರಿ ದೇಶವನ್ನು ಸಮೃದ್ಧಿಯಿಂದ ನಡೆಸುತ್ತಿದ್ದಾರೆ. ಒಂದು ಗಾಡಿಗೆ ಜೋಡಿ ಎತ್ತುಗಳು ಹೇಗೆ ಮುಖ್ಯವೋ , ಹಾಗೆಯೇ ದೇಶವನ್ನು ಈ ಇಬ್ಬರೂ ಮುನ್ನಡೆಸುತ್ತಿದ್ದಾರೆ ಎಂದು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಹೇಳಿದರು.
ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಮಾತನಾಡಿ, ಇಲ್ಲಿನ ಶ್ರೀಗಳು ಯಡಿಯೂರಪ್ಪ ಅವರಿಗೆ ಮಾರ್ಗದರ್ಶನ ನೀಡಿದವರು ಎಂದು ಶ್ಲಾಘಿಸಿದರು. ಶ್ರೀಗಳ ಆಶೀರ್ವಾದದಿಂದ ಉತ್ತಮ ಮಳೆ, ಬೆಳೆ ಆಗಿ ರೈತರು ನೆಮ್ಮದಿಯಿಂದ ಬಾಳಿ ಬದುಕುವಂತಾಗಲಿ ಎಂದು ಹಾರೈಸಿದರು.












Click it and Unblock the Notifications