ಶ್ರೀ ಶಿವರಾತ್ರಿ ದೇಶೀಕೇಂದ್ರ ಸ್ವಾಮಿಗಳನ್ನು ಭೇಟಿ ಮಾಡಿದ ಅಮಿತ್ ಶಾ
Recommended Video

ಬೆಂಗಳೂರು, ಮಾರ್ಚ್ 30: ಎರಡು ದಿನ ಮೈಸೂರು ಚಾಮರಾಜನಗರ ಭಾಗದಲ್ಲಿ ಮಿಂಚಿನ ಸಂಚಾರ ಮಾಡಲಿರುವ ಬಿಜೆಪಿ ಚಾಣಕ್ಯ ಅಮಿತ್ ಶಾ ನಿನ್ನೆ(ಮಾ.29) ಮೈಸೂರಿಗೆ ಆಗಮಿಸಿದ್ದಾರೆ.
ಇಂದು ಬೆಳಿಗ್ಗೆ 9.30ಕ್ಕೆ ಲಿಂಗಾಯಿತ-ವೀರಶೈವ ಮಠಾಧೀಶರಾದ ಸುತ್ತೂರು ಸಂಸ್ಥಾನದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಗಳನ್ನ ಭೇಟಿ ಮಾಡಿ ಆಶೀರ್ವಾದ ಪಡೆದರು. ನಂತರ 10.30ಕ್ಕೆ ಮೈಸೂರಿನ ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್, ಯದುವೀರ್ ಒಡೆಯರ್ ಅವರನ್ನ ಮೈಸೂರಿನ ಅರಮನೆಯಲ್ಲೇ ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ ಎಂದು ಆಪ್ತ ವಲು ತಿಳಿಸಿದೆಯಾದರೂ ಈ ಕುರಿತು ಖಚಿತ ಮಾಹಿತಿ ಲಭ್ಯವಿಲ್ಲ.
ಎರಡು ವರ್ಷಗಳ ಹಿಂದೆ ಹತ್ಯೆಯಾದ ಕ್ಯಾರಮಾರನಹಳ್ಳಿಯ ಆರೆಸ್ಸೆಸ್ ಕಾರ್ಯಕರ್ತ ರಾಜು ಮನೆಗೆ ಭೇಟಿ ನೀಡಲಿದ್ದಾರೆ. ಬಳಿಕ ಮಹಾರಾಜ ಕಾಲೇಜು ಮೈದಾನದಲ್ಲಿ ಏರ್ಪಡಿಸಿರುವ ನವಶಕ್ತಿ ಸಮಾವೇಶದಲ್ಲಿ ಭಾಗಿಯಾಗುವ ಅವರು ಕಾರ್ಯಕರ್ತರ ಜೊತೆ ಸಂವಾದ ನಡೆಸಲಿದ್ದಾರೆ.

ಮಧ್ಯಾಹ್ನ 2.30ಕ್ಕೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದ ನ್ಯಾಷನಲ್ ಹೈಸ್ಕೂಲು ಮೈದಾನದಲ್ಲಿ ಏರ್ಪಡಿಸಿರುವ ನವಶಕ್ತಿ ಸಮಾವೇಶದಲ್ಲಿ ಭಾಗಿ

ಚಾಮರಾಜನಗರ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆಯಲಿರುವ ಸಮಾವೇಶ, ನಂಜನಗೂಡಿನ ನಂಜುಂಡೇಶ್ವರ ದೇವಾಲಯಕ್ಕೆ ಭೇಟಿ, ಸಂಜೆ 7 ಗಂಟೆಗೆ ಮೈಸೂರಿನ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮಕ್ಕೆ ಭೇಟಿ ಇವು ಅಮಿತ್ ಶಾ ಅವರ ಇಂದಿನ ಕಾರ್ಯಕ್ರಮಗಳು.












Click it and Unblock the Notifications