ಕಾಂಗ್ರೆಸ್‌ಗೆ ಕರ್ನಾಟಕ ಸರ್ಕಾರ ಎಟಿಎಂ ಆಗಿದೆ : ಅಮಿತ್ ಶಾ

Recommended Video

      ಬಿಜೆಪಿ ಪರಿವರ್ತನಾ ಯಾತ್ರೆ : ಸಿದ್ದಾರಾಮಯ್ಯ ಸರ್ಕಾರದ ವಿರುದ್ಧ ಅಮಿತ್ ಶಾ ವಾಗ್ದಾಳಿ | Oneindia Kannada

      ಮೈಸೂರು, ಮಾರ್ಚ್ 31 : 'ಕಾಂಗ್ರೆಸ್ ಹೈಕಮಾಂಡ್ ಪಾಲಿಗೆ ಕರ್ನಾಟಕ ಸರ್ಕಾರ ಎಟಿಎಂ ಆಗಿದೆ. ಸಿದ್ದರಾಮಯ್ಯ ಸರ್ಕಾರ ಮಿತಿಮೀರಿದ ಭ್ರಷ್ಟಾಚಾರದಲ್ಲಿ ತೊಡಗಿದೆ' ಎಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಆರೋಪಿಸಿದರು.

      ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಚುನಾವಣೆಯ ಮುಖ್ಯ ದಿನಾಂಕಗಳು

      ಮೈಸೂರಿನಲ್ಲಿ ಶನಿವಾರ ಅಮಿತ್ ಶಾ ಪತ್ರಿಕಾಗೋಷ್ಠಿ ನಡೆಸಿದರು. 'ಕರ್ನಾಟಕದ ಜನರಿಗೆ ಹಲವು ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಅಸಮಾಧಾನವಿದೆ. ರೈತರ ಆತ್ಮಹತ್ಯೆ ವಿಚಾರದಲ್ಲಿ ಸರ್ಕಾರ ಮೌನವಾಗಿದೆ' ಎಂದು ದೂರಿದರು.

      ಚುನಾವಣಾ ಪ್ರಚಾರ ಚಿತ್ರಸಂಪುಟ : ಬಿಜೆಪಿ | ಕಾಂಗ್ರೆಸ್ | ಜೆಡಿಎಸ್

      Amit Shah press conference in Mysuru highlights

      ಅಮಿತ್ ಶಾ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದೇನು?

      * ಕರ್ನಾಟಕ ಸರ್ಕಾರ ರಾಜ್ಯದ ಅಭಿವೃದ್ಧಿಯನ್ನು ಕಡೆಗಣಿಸಿದೆ. ಐಟಿ ಹಬ್ ಬೆಂಗಳೂರಿಗೂ ಸರಿಯಾದ ವಿದ್ಯುತ್‌ಅನ್ನು ಸರ್ಕಾರ ನೀಡಿಲ್ಲ.

      * ಬೆಂಗಳೂರು ನಗರದಿಂದ ರಾಜ್ಯ ಸರ್ಕಾರಕ್ಕೆ ಬರುವ ಆದಾಯವನ್ನು ಹೆಚ್ಚಿಸಲು ಕ್ರಮ ಕೈಗೊಂಡಿಲ್ಲ

      * ಜೆಡಿಎಸ್‌ ಕಾಂಗ್ರೆಸ್ ಪಕ್ಷಕ್ಕೆ ಪರ್ಯಾಯವಲ್ಲ. ಕಾಂಗ್ರೆಸ್‌ ಪಕ್ಷಕ್ಕೆ ಪರ್ಯಾಯ ಎಂದರೆ ಅದು ಬಿಜೆಪಿ ಮಾತ್ರ

      * ಜೆಡಿಎಸ್ ಪಕ್ಷಕ್ಕೆ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರುವ ಶಕ್ತಿ ಇಲ್ಲ

      * ನಾನು ಓಬಿಸಿ ಪರವಾಗಿದ್ದೇನೆ ಎಂದು ಹೇಳುವ ಕಾಂಗ್ರೆಸ್, ಮೋದಿ ಸರ್ಕಾರ ಮಸೂದೆ ಜಾರಿಗೆ ತಂದರೆ ರಾಜ್ಯಸಭೆಯಲ್ಲಿ ವಿರೋಧ ಮಾಡಿತು.

      * ಬಿಜೆಪಿ ಸಮುದಾಯದ ಆಧಾರದ ಮೇಲೆ ಮತ ಕೇಳುವುದಿಲ್ಲ. ಒಕ್ಕಲಿಗ ಸಮುದಾಯದ ನಾಯಕರು ನಮ್ಮ ಜೊತೆಯಲ್ಲಿಯೇ ಇದ್ದಾರೆ. ಎಲ್ಲಾ ಸಮುದಾಯಕ್ಕೂ ಆದ್ಯತೆ ನೀಡಿ ಮುಂದೆ ಸಾಗುತ್ತೇವೆ

      * ನಾವು ಒಕ್ಕೂಟ ವ್ಯವಸ್ಥೆಯಲ್ಲಿ ಇದ್ದೇವೆ. ಉತ್ತರ ಮತ್ತು ದಕ್ಷಿಣ ಭಾರತದ ರಾಜ್ಯಗಳು ಎಂದು ತಾರತಮ್ಯ ಮಾಡುವುದಿಲ್ಲ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+