ಚಿತ್ರಗಳು : ಚಾಮುಂಡಿ ಬೆಟ್ಟಕ್ಕೆ ಅಮಿತ್ ಶಾ ಭೇಟಿ

ಮೈಸೂರು, ಜನವರಿ 25 : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮೈಸೂರಿನ ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಪರಿವರ್ತನಾ ಯಾತ್ರೆ ಸಮಾವೇಶದಲ್ಲಿ ಪಾಲ್ಗೊಳ್ಳಲು ಅವರು ಮೈಸೂರಿಗೆ ಭೇಟಿ ನೀಡಿದ್ದರು.

ಗುರುವಾರ ಮಹಾರಾಜ ಕಾಲೇಜು ಆವರಣದಲ್ಲಿ ನಡೆದ ಸಮಾವೇಶ ಉದ್ದೇಶಿಸಿ ಮಾತನಾಡಿದ ಬಳಿಕ ಅಮಿತ್ ಶಾ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದರು. ಸಂಸದ ಪ್ರತಾಪ್ ಸಿಂಹ ಸೇರಿದಂತೆ ಹಲವು ನಾಯಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಚಿತ್ರಗಳು : ಮೈಸೂರಿನಲ್ಲಿ ಅಮಿತ್ ಶಾ ಮೋಡಿ

ಅಮಿತ್ ಶಾ ಭೇಟಿ ಹಿನ್ನಲೆಯಲ್ಲಿ ಮಧ್ಯಾಹ್ನ 2 ಗಂಟೆಯಿಂದ 3.45ರ ತನಕ ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕರ ಭೇಟಿಯನ್ನು ನಿಷೇಧಿಸಲಾಗಿತ್ತು. ಸಮಾವೇಶದಲ್ಲಿ ಭಾಷಣ ಮಾಡಿದ ಬಳಿಕ ಅಮಿತ್ ಶಾ ದೇವಾಲಯಕ್ಕೆ ಆಗಮಿಸಿದರು.

Amit Shah visits temple Chamundeshwari temple Mysuru

ದೇವಿಯ ದರ್ಶನ ಪಡೆದ ಅಮಿತ್ ಶಾ ವಿಶೇಷ ಪೂಜೆ ಸಲ್ಲಿಸಿದರು. ದೇವಾಲಯದ ಆಡಳಿತ ಮಂಡಳಿಯವರು ಶಾಲು ಹೊದಿಸಿ ಅಮಿತ್ ಶಾ ಅವರನ್ನು ಸನ್ಮಾನಿಸಿದರು.

Amit Shah visits temple Chamundeshwari temple Mysuru

ದೇವಿಯ ದಶರ್ನ ಪಡೆದ ಬಳಿಕ ಅಮಿತ್ ಶಾ ಅವರು ಅರ್ಚಕರ ಜೊತೆ ಗ್ರೂಪ್ ಫೋಟೋ ತೆಗೆಸಿಕೊಂಡರು. ದೇವಾಲಯದಲ್ಲಿದ್ದ ಜನರು ಮೋದಿ, ಮೋದಿ ಎಂಬ ಘೋಷಣೆಯೊಂದಿಗೆ ಅಮಿತ್ ಅವರನ್ನು ಸ್ವಾಗತಿಸಿದರು.

Amit Shah visits temple Chamundeshwari temple Mysuru

ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಬಳಿಕ ಅಮಿತ್ ಶಾ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ತೆರಳಿ, ದೆಹಲಿಗೆ ವಾಪಸ್ ಆದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+