• search
  • Live TV
ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮತದಾನ ಜಾಗೃತಿಗಾಗಿ 2 ಸಾವಿರ ಜನರಿಂದ ವಿನೂತನ ಮಾನವ ಸರಪಳಿ

|

ಮೈಸೂರು, ಏಪ್ರಿಲ್ 6 : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 2 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು 'ಏಪ್ರಿಲ್ 18 ಮತದಾನ ಮಾಡಿ' ಎಂಬ ಸಂದೇಶ ಸಾರುವ ಮಾನವ ಸರಪಳಿ ರಚನೆ ನಿರ್ಮಾಣ ಮಾಡಿ ವಿನೂತನವಾಗಿ ಮೈಸೂರಿನಲ್ಲಿ ಜಾಗೃತಿ ಮೂಡಿಸಿದರು.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಮೈಸೂರು ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಮತ್ತು ಜೆಎಸ್‍ಎಸ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾನಿಲಯ ಸಹಯೋಗದಲ್ಲಿ ಎಸ್‌ಜೆಸಿಇ ಎಂಜಿನಿಯರಿಂಗ್ ಕಾಲೇಜು ಕ್ರೀಡಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ವಿನೂತನ ರೀತಿಯಲ್ಲಿ ಜಾಗೃತಿ ಮೂಡಿಸಿದರು.

ಪ್ರಜಾಪ್ರಭುತ್ವ ಬಲವರ್ಧನೆಗಾಗಿ ಮತದಾನದ ಅತ್ಯವಶ್ಯಕ'

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರನೆ ರಾಜನಾಗಿರುತ್ತಾನೆ. ನಿಮ್ಮ ಮತಕ್ಕೆ ನಿವೇ ಯಜಮಾನರು. ಪ್ರಜಾಪ್ರಭುತ್ವದ ಉಳಿವಿಗೆ ಯಾವುದೇ ಜಾತಿ, ಧರ್ಮ, ಮತ-ಪಂತಗಳಿಗೆ ಒಳಗಾಗದೇ ನಿರ್ಭೀತಿಯಿಂದ ನೈತಿಕವಾಗಿ ಮತ ಚಲಾಯಿಸಿ' ಎಂದು ಜೆಎಸ್‍ಎಸ್ ಮಹಾವಿದ್ಯಾಪೀಠದ ಕಾರ್ಯನಿರ್ವಾಹಕ ಕಾರ್ಯದರ್ಶಿಗಳಾದ ಡಾ.ಸಿ.ಜಿ.ಬೆಟಸೂರಮಠ ಚುನಾವಣಾ ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿದರು.

ಜಿ.ಪಂ.ಸಿಇಒ ಕೆ.ಜ್ಯೋತಿ ಮಾತನಾಡಿ, ಯುವ ಮತದಾರರಿಗೆ ಹೊಸ ಮತ್ತು ವಿನೂತನ ಕಾರ್ಯಕ್ರಮಗಳ ಬಗ್ಗೆ ಜಾಗೃತಿ ಇರುತ್ತದೆ. ಮತದಾನದಲ್ಲಿ ಯುವ ಸಮೂಹದ ಪಾತ್ರ ಬಹಳ ಮುಖ್ಯವಾಗಿರುತ್ತದೆ.

ಕರ್ನಾಟಕದ ಲೋಕಸಭಾ ಸದಸ್ಯರಲ್ಲಿ ಯಾರು ಎಷ್ಟು ಓದಿದ್ದಾರೆ?

ಯುವಕರು ಕಡ್ಡಾಯವಾಗಿ ಚಿಂತಿಸಿ ಜಾಗೃತರಾಗಿ ಮತ ಚಲಾವಣೆ ಮಾಡಬೇಕು. ಚುನಾವಣೆಯು ಪ್ರಜಾಪ್ರಭುತ್ವದ ಹಬ್ಬ. ಹಾಗಾಗಿ ಎಲ್ಲರೂ ಭಾಗವಹಿಸಬೇಕು. ಜೊತೆಗೆ ಯುವ ಮತದಾರರು ತಮ್ಮ ಕುಟುಂಬದವರು, ನೆಂಟರು ಹಾಗೂ ನೆರೆಹೊರೆಯವರಿಗೂ ತಪ್ಪದೇ ಮತದಾನ ಮಾಡುವಂತೆ ಪ್ರೆರೇಪಿಸಬೇಕು ಎಂದು ಕರೆ ನೀಡಿದರು.

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
In the wake of the Lok Sabha polls, more than 2,000 students have created a human chain structure to preach the message Please vote April 18th' and create awareness in Mysuru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more