• search
  • Live TV
ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಶ್ರೀರಂಗಪಟ್ಟಣದ ಪಶ್ಚಿಮವಾಹಿನಿಯಲ್ಲಿ ಅನಂತ್ ಕುಮಾರ್ ಚಿತಾಭಸ್ಮ ವಿಸರ್ಜನೆ

|

ಮೈಸೂರು, ನವೆಂಬರ್.14: ಇತ್ತೀಚೆಗೆ ವಿಧಿವಶರಾದ ಅನಂತ್ ಕುಮಾರ್ ಅವರ ಚಿತಾಭಸ್ಮವನ್ನು ಸಹೋದರ ನಂದಕುಮಾರ್ ಅವರ ನೇತೃತ್ವದಲ್ಲಿ ಶ್ರೀರಂಗಪಟ್ಟಣದ ಪಶ್ಚಿಮವಾಹಿನಿ ಕಾವೇರಿ ನದಿಯಲ್ಲಿ ವಿಸರ್ಜಿಸಲಾಯಿತು.

ತಂದೆ ತಾಯಿಯಂತೆ 'ಕ್ಯಾನ್ಸರ್' ಮಹಾಮಾರಿಗೆ ಬಲಿಯಾದ ಅನಂತ್ ಕುಮಾರ್

ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ಪ್ರಹ್ಲಾದ್ ಜೋಷಿ, ಅನಂತ್ ಕುಮಾರ್ ಅವರು ಎಲ್ಲರೊಂದಿಗೆ ಉತ್ತಮ ಒಡನಾಟ ಹೊಂದಿದ್ದರು. ಅವರ ತಾಯಿ ಸಹ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಸಂಕಷ್ಟದ ಪರಿಸ್ಥಿತಿಯಲ್ಲಿಯೂ ವಿದ್ಯಾಭ್ಯಾಸ ಮುಂದುವರೆಸಿ ಎಬಿವಿಪಿ ಕಾರ್ಯಕರ್ತನಾಗಿ ಬಿಜೆಪಿ ಪಕ್ಷವನ್ನು ಪ್ರವೇಶಿಸಿದರು.

ಕರ್ನಾಟಕದ ಜನಪ್ರಿಯ ನಾಯಕ ಅನಂತ್ ಕುಮಾರ್ (59) ವಿಧಿವಶ

ಅಂದಿನಿಂದ ಕರ್ನಾಟಕ ರಾಜ್ಯದ ಆಗುಹೋಗುಗಳ ಬಗ್ಗೆ ಹಾಗೂ ಬಿಜೆಪಿ ಕಾರ್ಯಕರ್ತರೊಂದಿಗೆ ಉತ್ತಮ ಒಡನಾಟ ಹೊಂದಿದ್ದು, ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಸೌಲಭ್ಯಗಳನ್ನು ತಲುಪುವಂತೆ ಮಾಡಿದರು ಎಂದು ತಿಳಿಸಿದರು.

'ಸಂಘಟನಾ ಚತುರ' ಅನಂತಕುಮಾರ್ ಅಮರ್ ರಹೇ : ರಾಷ್ಟ್ರೀಯ ಸ್ವಯಂಸೇವಕ ಸಂಘ

ಶಾಸಕ ರಾಮದಾಸ್ ಮಾತನಾಡಿ, ಅನಂತ್ ಕುಮಾರ್ ಮೂಲತಃ ಮೈಸೂರಿನವರಾಗಿದ್ದು, ಅವರಿಗೂ ಶ್ರೀರಂಗಪಟ್ಟಣಕ್ಕೆ ಅವಿನಾಭಾವ ಸಂಬಂಧವಿತ್ತು. ರಾಷ್ಟ್ರಮಟ್ಟದಲ್ಲಿ ಕರ್ನಾಟಕ ಹಾಗೂ ಕೇಂದ್ರ ಸರ್ಕಾರದ ನಡುವೆ ಸೇತುವೆಯಂತೆ ಕೆಲಸ ನಿರ್ವಹಿಸುತ್ತಿದ್ದರು ಎಂದು ಶ್ಲಾಘಿಸಿದರು. ಈ ಸಂದರ್ಭದಲ್ಲಿ ಅನಂತ್ ಕುಮಾರ್ ಕುಟುಂಬಸ್ಥರು ಭಾಗಿಯಾಗಿದ್ದರು.

English summary
Ananth kumar's ashes was immersed in Cauvery river near Paschima Vahini, Srirangapattana on Wednesday
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X