ಮೈಸೂರು : ಮತ್ತೊಂದು ಲವ್ ಜಿಹಾದ್ ಪ್ರಕರಣ ಬೆಳಕಿಗೆ?

ಮೈಸೂರು, ಜನವರಿ 22 : ಜೈನ ಧರ್ಮದ ಯುವತಿ ಮುಸ್ಲಿಂ ಯುವಕನ ಜೊತೆ ಓಡಿ ಹೋಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಇದು ಲವ್ ಜಿಹಾದ್ ಪ್ರಕರಣ ಯುವಕನ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಯುವತಿ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ.

ಮಂಡಿ ಮೊಹಲ್ಲಾದ ನಿವಾಸಿ ಅಬ್ದುಲ್ ನಾಸೀರ್ (28) ಜೊತೆ ಜೈನ ಧರ್ಮದ ಯುವತಿ ಮೂರು ದಿನಗಳ ಹಿಂದೆ ಓಡಿ ಹೋಗಿದ್ದಳು. ಮೂರು ದಿನಗಳ ಹಿಂದೆ ಎನ್.ಆರ್.ಪೊಲೀಸ್ ಠಾಣೆಗೆ ಆಗಮಿಸಿ ತಾನು ಸ್ವ ಇಚ್ಚೆಯಿಂದ ಅಬ್ದುಲ್ ಜೊತೆ ಹೋಗಿರುವುದಾಗಿ ಯುವತಿ ಹೇಳಿಕೆ ನೀಡಿದ್ದಾಳೆ.

ಆದರೆ, ಯುವತಿ ಪೋಷಕರು ಇದೊಂದು ಲವ್ ಜಿಹಾದ್ ಪ್ರಕರಣ ಎಂದು ಆರೋಪಿಸಿದ್ದಾರೆ. ಡ್ರಗ್ಸ್ ನೀಡಿ, ನೀಲಿ ಚಿತ್ರ ತೋರಿಸಿ ಪುತ್ರಿಗೆ ಬೆದರಿಕೆ ಹಾಕಿ ಬಲವಂತದಿಂದ ಕರೆದುಕೊಂಡು ಹೋಗಿದ್ದಾರೆ. ಅಬ್ದುಲ್ ನಾಸೀರ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

Another case of love jihad in Mysuru, Karnataka

ಯುವಕನ ವಿರುದ್ಧ ದೂರು ನೀಡಲು ಹೋದರೆ ಪೊಲೀಸರು ಸ್ವೀಕರಿಸುತ್ತಿಲ್ಲ. ನಿಮ್ಮ ಮಗಳು ಸ್ವ ಇಚ್ಛೆಯಿಂದ ಅಬ್ದುಲ್ ಜೊತೆ ಹೋಗಿದ್ದಾರೆ ಎಂದು ಹೇಳುತ್ತಿದ್ದಾರೆ ಎಂದು ಪೊಲೀಸರ ವಿರುದ್ಧವೇ ಆರೋಪ ಮಾಡುತ್ತಿದ್ದಾರೆ.

ಪೊಲೀಸರು ದೂರು ದಾಖಲಿಸಿಕೊಂಡು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಯುವತಿ ಪೋಷಕರು ಒತ್ತಾಯಿಸಿದ್ದಾರೆ. ಪೊಲೀಸರು ದೂರನ್ನು ದಾಖಲಿಸಿಕೊಳ್ಳುವಂತೆ ಲಕ್ಷ್ಮೀಪುರಂ ಠಾಣೆಯ ಮುಂದೆ ಪ್ರತಿಭಟನೆಯನ್ನು ನಡೆಸಿದರು.

ಡಿಸೆಂಬರ್ ತಿಂಗಳಿನಲ್ಲಿ ನಗರದಲ್ಲಿ ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದಿತ್ತು. ಶಿವಮೊಗ್ಗ ಮೂಲದ ದಂಪತಿಗಳು ತಮ್ಮ ಪುತ್ರಿಯನ್ನು ಮುಸ್ಲಿಂ ಯುವಕ ಮದುವೆಯಾಗಿದ್ದಾನೆ ಎಂದು ಪೊಲೀಸರಿಗೆ ದೂರು ನೀಡಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+