ಚಾಮುಂಡೇಶ್ವರಿ ವಿದ್ಯುತ್ ನಿಗಮದಲ್ಲಿ ಕೆಲಸ ಖಾಲಿ ಇದೆ

ಮೈಸೂರು, ಮಾ.10 : ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ಸಹಾಯಕ ಲೈನ್‌ಮ್ಯಾನ್ ಹುದ್ದೆಗಳ ಭರ್ತಿಗಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. 69 ಹುದ್ದೆಗಳು ಖಾಲಿ ಇದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 30.

ಆಯ್ಕೆಯಾದ ಅಭ್ಯರ್ಥಿಗಳನ್ನು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ವ್ಯಾಪ್ತಿಯಲ್ಲಿನ ಯಾವುದೇ ಸ್ಥಳಕ್ಕೆ ನಿಯೋಜನೆ ಮಾಡಲಾಗುತ್ತದೆ. ಅಭ್ಯರ್ಥಿಗಳಿಗೆ ಕಡ್ಡಾಯವಾಗಿ ಕನ್ನಡ ಓದಲು ಮತ್ತು ಬರೆಯಲು ಬರಬೇಕು. ತೃಪ್ತಿಕರ ನೇತೃದೃಷ್ಟಿಯನ್ನು ಹೊಂದಿರಬೇಕು. [ಅರ್ಜಿ ಸಲ್ಲಿಸಲು ವಿಳಾಸ]

Jobs

ವಿದ್ಯಾರ್ಹತೆ : ಹತ್ತನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಮತ್ತು ಕವಿಮಂ/ಕವಿಪ್ರನಿನಿ ಕೈಗಾರಿಕಾ ತರಬೇತಿ ಕೇಂದ್ರದಿಂದ ಮೂರು ವರ್ಷದ 'ಲೈನ್‌ಮನ್ ವೃತ್ತಿ/ಎಲೆಕ್ಟ್ರೀಷಿಯನ್ ವೃತ್ತಿ'ಯಲ್ಲಿ ಉತ್ತೀರ್ಣರಾಗಿ ಐಟಿಸಿ ಪ್ರಮಾಣ ಪತ್ರ ಹೊಂದಿರತಕ್ಕದ್ದು. [ಕನ್ನಡದಲ್ಲಿ ನೇಮಕಾತಿ ಆದೇಶ ಓದಿ]

ವಯೋಮಿತಿ : ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದಂದು 18 ವರ್ಷ ತುಂಬಿದವರಾಗಿರಬೇಕು. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 35 ವರ್ಷ, ಪ್ರವರ್ಗ 2ಎ/3ಬಿ/3ಎ/3ಬಿಗೆ ಸೇರಿದ ಅಭ್ಯರ್ಥಿಗಳಿಗೆ 38 ವರ್ಷ. ಪ.ಜಾ./ಪ.ಪಂ ಮತ್ತು ಪ್ರವರ್ಗ 1 ರ ಅಭ್ಯರ್ಥಿಗಳಿಗೆ 40 ವರ್ಷ.

ಅರ್ಜಿ ಶುಲ್ಕ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನಿಗದಿತ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು. ಸಾಮಾನ್ಯ ವರ್ಗ, ಪ್ರವರ್ಗ 1/2ಎ/2ಬಿ/3ಎ/3ಬಿಗೆ ಸೇರಿದ ಅಭ್ಯರ್ಥಿಗಳಿಗೆ 400 ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಪ.ಜಾ/ಪ.ವಕ್ಕೆ ಸೇರಿದ ಅಭ್ಯರ್ಥಿಗಳಿಗೆ 200 ರೂ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+