ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ
ಮೈಸೂರು, ಮೇ 04 : ಬಿಳಿಗೆರೆ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ 3 ಅಂಗನವಾಡಿ ಕಾರ್ಯಕರ್ತೆ, 10 ಅಂಗನವಾಡಿ ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮೇ 23, 2016.
ಗೌರವಧನದ ಆಧಾರದ ಮೇಲೆ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. 18 ರಿಂದ 35 ವರ್ಷದೊಳಗಿನ ಅರ್ಹ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಸಹಾಯಕಿಯರ ಹುದ್ದೆಗೆ 4ನೇ ತರಗತಿ ವಿದ್ಯಾರ್ಹತೆ ಹಾಗೂ ಕಾರ್ಯಕರ್ತೆ ಹುದ್ದೆಗೆ ಎಸ್‌ಎಸ್‌ಎಸ್‌ಸಿ ವಿದ್ಯಾರ್ಹತೆ ಹೊಂದಿರಬೇಕು. [72 ವಲಯ ಅರಣ್ಯಾಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ]

ಮೇ 23 ರೊಳಗೆ ಭರ್ತಿ ಮಾಡಿದ ಅರ್ಜಿಯನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ, ಹುಲ್ಲಹಳ್ಳಿ ರಸ್ತೆ, ಎಲ್.ಐ.ಸಿ. ಕಚೇರಿ ಹತ್ತಿ ನಂಜನಗೂಡು ಇಲ್ಲಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ 08221-226168, 223147 ದೂರವಾಣಿ ಸಂಖ್ಯೆಗೆ ಕರೆ ಮಾಡಬಹುದಾಗಿದೆ.
ಉದ್ಯೋಗವಕಾಶಗಳು
* ಕಲಬುರಗಿಯಲ್ಲಿ ಮೇ 6ರಂದು ಉದ್ಯೋಗ ಮೇಳ ಆಯೋಜಿಸಲಾಗಿದೆ. ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಬೆಳಗ್ಗೆ 9 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಉದ್ಯೋಗ ಮೇಳ ನಡೆಯಲಿದೆ. [ಹೆಚ್ಚಿನ ಮಾಹಿತಿ ಇಲ್ಲಿದೆ]
* ಕೇಂದ್ರ ಲೋಕಸೇವಾ ಆಯೋಗ ಭಾರತ ಅರಣ್ಯ ಸೇವೆ (ಐಎಫ್‌ಎಸ್)ಯಲ್ಲಿ 110 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಮೇ 27 ಕೊನೆಯ ದಿನವಾಗಿದೆ. [ವಿವರಗಳಿಗೆ ಕ್ಲಿಕ್ ಮಾಡಿ]
* ಬೆಂಗಳೂರು ದೂರದರ್ಶನ ಕೇಂದ್ರದ ಪ್ರಾದೇಶಿಕ ಸುದ್ದಿ ವಿಭಾಗವು ಜಿಲ್ಲಾ ಕೇಂದ್ರಗಳಲ್ಲಿ ಸ್ಟ್ರಿಂಜರ್‌ಗಳಾಗಿ ಕಾರ್ಯನಿರ್ವಹಿಸಲು ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಮೇ 13, 2016 ಅರ್ಜಿ ಸಲ್ಲಿಸಲು ಕೊನೆಯ ದಿನ. [ವಿವರಗಳು ಇಲ್ಲಿವೆ]












Click it and Unblock the Notifications