'ಗೌರವಧನ ಮಾತ್ರ ಪುಡಿಗಾಸು': ಮೈಸೂರಿನಲ್ಲಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ
ಮೈಸೂರು, ಡಿಸೆಂಬರ್ 31: ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಆಶಾ ಕಾರ್ಯಕರ್ತೆಯರಿಗೆ ಗೌರವಧನ ಮತ್ತು ಪ್ರೋತ್ಸಾಹಧನ ಸೇರಿಸಿ 15 ಸಾವಿರ ರೂಪಾಯಿ ಮಾಸಿಕ ಗೌರವಧನ ನಿಗದಿಯಾಗಬೇಕು. ನಗರ ಆಶಾ ಕಾರ್ಯಕರ್ತೆಯರ ಹೆಚ್ಚುವರಿ ಕೆಲಸ, ಜೀವನದ ದುಬಾರಿ ಖರ್ಚು ವೆಚ್ಚಗಳಿಗೆ ಅನುಗುಣವಾಗಿ ಕನಿಷ್ಠ 2 ಸಾವಿರ ಗೌರವಧನ ಹೆಚ್ಚಿಸಬೇಕು. ಮುಂತಾದ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಅದರ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದಿಂದ ಮೈಸೂರು ಜಿಲ್ಲಾಧಿಕಾರಿ ಕಚೇರಿ ಬಳಿ ಅನಿರ್ದಿಷ್ಟಾವಧಿ ಧರಣಿ ನಡೆಸಲಾಗುತ್ತಿದೆ.
ಆರೋಗ್ಯ ಕ್ಷೇತ್ರದಲ್ಲಿ ಸ್ಪಷ್ಟವಾಗಿ ಕಾಣುವ ಏಕೈಕ ಸಾಧನ ಆಧಾರಸ್ತಂಭ ಅಂದರೆ ಆಶಾ ಕಾರ್ಯಕರ್ತೆಯರು. ಇವರ ಸೇವೆ ಬಡಜನತೆಯ ಆರೋಗ್ಯಕ್ಕೆ ಬಹುಮುಖ್ಯವಾಗಿ ಅವಶ್ಯಕತೆ ಇದೆ. ಆಶಾಗಳ ಸೇವೆಯಿಂದ ಕಳೆದ 15 ವರ್ಷಗಳಿಂದ ತಾಯಿ ಹಾಗೂ ಶಿಶು ಮರಣ ಸಂಖ್ಯೆ ಇಳಿಕೆ, ವಿವಿಧ ರೋಗರುಜಿನಗಳ ತಡೆಗಟ್ಟುವಿಕೆ, ಜನರಲ್ಲಿ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ಕೊರೊನಾ ಸಂದರ್ಭದಲ್ಲಿ ಅಮೋಘ ಸೇವೆ ಸಲ್ಲಿಸಿದ್ದಾರೆ. ರಾಷ್ಟ್ರದಲ್ಲಿಯೇ ಅತ್ಯುತ್ತಮ ಸೇವೆ ಸಲ್ಲಿಸಿದ ಕೀರ್ತಿ ಜತೆಗೆ ಕೇಂದ್ರದ ಪ್ರಶಂಸನಾ ಪತ್ರ ಸಿಕ್ಕಿದೆ.

ಆದರೆ, ಆಶಾಗಳಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳಿಂದ ಸಿಗುವ ಪ್ರೋತ್ಸಾಹಧನ, ಗೌರವಧನ ಮಾತ್ರ ಪುಡಿಗಾಸು ಆಗಿದೆ. ಇವರ ಸೇವೆಯನ್ನು ಸರ್ಕಾರಗಳು, ಇಲಾಖೆಗಳು ಕೊಂಡಾಡುತ್ತವೆ. ಆದರೆ, ಸೇವೆಗೆ ತಕ್ಕ ಪ್ರತಿಫಲ ನೀಡದೆ, ಶೋಷಿಸುತ್ತಿರುವುದು ಅತ್ಯಂತ ಅಮಾನವೀಯ. ಕರ್ನಾಟಕದಲ್ಲಿ ವಿಶೇಷ ಪೋರ್ಟಲ್ ಆಶಾ ನಿಧಿ ಮಾಡಿ ಆ ಮೂಲಕ ಆನ್ಲೈನ್ ಎಂಟ್ರಿ ಮಾಡಿಸಿ, ಪ್ರೋತ್ಸಾಹಧನ ನೀಡುವ ಪದ್ಧತಿ ಜಾರಿಗೊಳಿಸಲಾಗಿದೆ. ಕಳೆದ 8-9 ವರ್ಷಗಳಿಂದ ಆಶಾ ಕಾರ್ಯಕರ್ತೆಯರು ಈ ವೇತನ ಪದ್ಧತಿಯಿಂದಾಗಿ ಆಗುತ್ತಿರುವ ಸಮಸ್ಯೆಗಳ ಪರಿಹಾರಕ್ಕೆ ನಿರಂತರ ಹೋರಾಟ ನಡೆಸಿದರೂ ಯಾವುದೇ ಪ್ರಯೋಜನವಾಗುತ್ತಿಲ್ಲ ಎಂದು ಪ್ರತಿಭಟನಾಕಾರರು ಕಿಡಿಕಾರಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಆಶಾ ಕಾರ್ಯಕರ್ತೆಯರಿಗೆ ಗೌರವಧನ ಮತ್ತು ಪ್ರೋತ್ಸಾಹಧನ ಸೇರಿಸಿ 15 ಸಾವಿರ ರೂಪಾಯಿ ಮಾಸಿಕ ಗೌರವಧನ ನಿಗದಿಯಾಗಬೇಕು. ನಗರ ಆಶಾ ಕಾರ್ಯಕರ್ತೆಯರ ಹೆಚ್ಚುವರಿ ಕೆಲಸ, ಜೀವನದ ದುಬಾರಿ ಖರ್ಚು ವೆಚ್ಚಗಳಿಗೆ ಅನುಗುಣವಾಗಿ ಕನಿಷ್ಠ 2 ಸಾವಿರ ಗೌರವಧನ ಹೆಚ್ಚಿಸಬೇಕು. ಸೇವಾ ನಿವೃತ್ತಿ ಪಡೆಯುವ ಕಾರ್ಯಕರ್ತೆಯರಿಗೆ ಪಶ್ಚಿಮ ಬಂಗಾಳದಂತೆ 5 ಲಕ್ಷಕ್ಕೆ ಏರಿಕೆ ಮಾಡಬೇಕು. ತೀವ್ರ ಅನಾರೋಗ್ಯ, ಚಿಕಿತ್ಸೆ ಪಡೆಯುವ ಅವಧಿಯಲ್ಲಿ ಕನಿಷ್ಠ 3 ತಿಂಗಳು ಪ್ರೋತ್ಸಾಹಧನ ನೀಡುವ ಜೊತೆಗೆ ಸೇವೆಯಲ್ಲಿದ್ದಾಗ ಆಗುವ ಅನಾಹುತಗಳಿಗೆ ಜವಾಬ್ದಾರಿ ಇಲಾಖೆ ವಹಿಸಿಕೊಳ್ಳಬೇಕು.
ಬಾಕಿ ಇರುವ 2-3 ತಿಂಗಳ ಆಶಾ ಕಾರ್ಯಕರ್ತೆಯರ ಪ್ರೋತ್ಸಾಹಧನವನ್ನು ಕೂಡಲೇ ಬಿಡುಗಡೆ ಮಾಡಬೇಕು. ಆಶಾಗಳದಲ್ಲದ ಕೆಲಸವನ್ನು ಅಧಿಕೃತವಾಗಿ ಮಾಡಲು ಹೇಳಿರುವ ಆದೇಶ ವಾಪಸ್ ಪಡೆಯಬೇಕು. ಪ್ರತಿ ವರ್ಷ ಸಂಪೂರ್ಣ ಆರೋಗ್ಯ ತಪಾಸಣೆ ಮಾಡಬೇಕು. ತೀವ್ರ ಕಾಯಿಲೆಗಳಿದ್ದಲ್ಲಿ ಕೂಡಲೇ ಉಚಿತ ಚಿಕಿತ್ಸೆ ಕೊಡಿಸಬೇಕು. ಕಾರ್ಯಕರ್ತೆಯರನ್ನು ಕಾರ್ಮಿಕರೆಂದು ಪರಿಗಣಿಸಿ, ಕನಿಷ್ಠ ವೇತನ, ಗ್ರಾಜ್ಯುಟಿ, ಪಿಎಫ್ ಸೌಲಭ್ಯ ಒದಗಿಸಬೇಕೆಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಎಐಯುಟಿಯುಸಿ ರಾಜ್ಯ ಉಪಾಧ್ಯಕ್ಷೆ ಉಮಾದೇವಿ ಸೇರಿದಂತೆ ನೂರಾರು ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications