• search
  • Live TV
ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮೈಸೂರು ಚಾಮುಂಡಿ ಬೆಟ್ಟಕ್ಕೆ ತೆರಳುವ ಭಕ್ತರ ಗಮನಕ್ಕೆ

|
Google Oneindia Kannada News

ಮೈಸೂರು, ಜುಲೈ 22; ಚಾಮುಂಡಿ ಬೆಟ್ಟ ಹಾಗೂ ಉತ್ತನಹಳ್ಳಿ ಜ್ವಾಲಾತ್ರಿಪುರ ಸುಂದರಿ ದೇವಾಲಯಗಳಿಗೆ ಆಷಾಢ ಮಾಸದ ಅಮಾವಾಸ್ಯೆಗಳು, ಶುಕ್ರವಾರಗಳು, ಚಾಮುಂಡಿ ವರ್ಧಂತಿ ಹಾಗೂ ಆಷಾಢ ಮಾಸದಲ್ಲಿ ಬರುವ ಎಲ್ಲಾ ಶನಿವಾರ, ಭಾನುವಾರ ಮತ್ತು ಸಾರ್ವತ್ರಿಕ ರಜಾ ದಿನಗಳಂದು ಭಕ್ತರ ಪ್ರವೇಶ ನಿರ್ಬಂಧಿಸಲಾಗಿದೆ.

ಗುರುವಾರ ಮೈಸೂರು ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಕೋವಿಡ್ ಹಿನ್ನೆಲೆಯಲ್ಲಿ ಸರ್ಕಾರದ ನಿರ್ದೇಶನದಂತೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಿ ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕರು ಈ ನಿರ್ಬಂಧಿತ ದಿನಗಳಂದು ಚಾಮುಂಡಿ ಬೆಟ್ಟಕ್ಕೆ ಆಗಮಿಸಬಾರದು ಎಂದು ಶ್ರೀ ಚಾಮುಂಡೇಶ್ವರಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿಗಳು ಮನವಿ ಮಾಡಿದ್ದಾರೆ.

ತಿರುಪತಿ ದೇವಾಲಯ ಇನ್ನು ಎರಡು ತಿಂಗಳುಗಳಲ್ಲಿ ಪ್ಲಾಸ್ಟಿಕ್ ಮುಕ್ತತಿರುಪತಿ ದೇವಾಲಯ ಇನ್ನು ಎರಡು ತಿಂಗಳುಗಳಲ್ಲಿ ಪ್ಲಾಸ್ಟಿಕ್ ಮುಕ್ತ

ಆದೇಶದ ಅನ್ವಯ ನಿರ್ಬಂಧಿತ ದಿನಗಳಲ್ಲಿ ಶ್ರೀ ಚಾಮುಂಡೇಶ್ವರಿ ಅಮ್ಮನವರ ದೇವಾಲಯದಲ್ಲಿ ನಡೆದು ಬಂದಿರುವ ರೂಢಿ ಸಂಪ್ರದಾಯದಂತೆ, ಜರುಗುವ ವಿವಿಧ ಧಾರ್ಮಿಕ ಕಾರ್ಯಕ್ರಮದಲ್ಲಿ ದೇವಾಲಯದ ಅಧಿಕಾರಿಗಳು, ಅರ್ಚಕರು ಸಿಬ್ಬಂದಿಗಳು, ಮಾತ್ರ ಪಾಲ್ಗೊಳ್ಳಲು ಅನುಮತಿ ಇದೆ.

ತಮಿಳುನಾಡಲ್ಲಿ 'ಕೊರೊನಾ ದೇವಿ' ದೇವಾಲಯ; ವಿಶೇಷ ಪೂಜೆ ತಮಿಳುನಾಡಲ್ಲಿ 'ಕೊರೊನಾ ದೇವಿ' ದೇವಾಲಯ; ವಿಶೇಷ ಪೂಜೆ

ಪ್ರಸಾದ ವಿತರಣೆಯೂ ಇಲ್ಲ; ಮೆಟ್ಟಿಲು ಮಾರ್ಗದ ಮೂಲಕ ಚಾಮುಂಡಿ ಬೆಟ್ಟಕ್ಕೆ ಭಕ್ತರು ಮತ್ತು ಸಾರ್ವಜನಿಕರು ಬರುವುದನ್ನು ನಿಷೇಧಿಸಲಾಗಿದೆ. ಎರಡು ದೇವಾಲಯಗಳಲ್ಲಿ ದೇವಾಲಯದ ವತಿಯಿಂದಾಗಲಿ ಅಥವಾ ದಾನಿಗಳ ವತಿಯಿಂದಾಗಲಿ ದಾಸೋಹ, ಊಟದ ವ್ಯವಸ್ಥೆ ಮಾಡುವುದು ಅಥವಾ ಪ್ರಸಾದ ವಿತರಣೆಯನ್ನು ಸಹ ನಿಷೇಧಿಸಿದೆ.

ಪ್ರವಾಸಿಗರೇ ವಿಶ್ವವಿಖ್ಯಾತ ಮೈಸೂರು ಅರಮನೆಗೆ ಸ್ವಾಗತ!ಪ್ರವಾಸಿಗರೇ ವಿಶ್ವವಿಖ್ಯಾತ ಮೈಸೂರು ಅರಮನೆಗೆ ಸ್ವಾಗತ!

ವಾಹನ ಸಂಚಾರ ನಿರ್ಬಂಧ; ಜಿಲ್ಲಾಡಳಿತ ಆದೇಶದಂತೆ ಪೂರ್ತಿದಿನ ಹಾಗೂ ಇತರೆ ದಿನಗಳಂದು ಸಂಜೆ 6 ಗಂಟೆಯ ನಂತರ ಕೇಂದ್ರ ಮತ್ತು ರಾಜ್ಯ ಸರ್ಕಾರವು ಘೋಷಿಸಲ್ಪಟ್ಟ ಶಿಷ್ಟಾಚಾರ ವ್ಯವಸ್ಥೆ ಹೊಂದಿರುವ ಗಣ್ಯ ವ್ಯಕ್ತಿಗಳು, ಸರ್ಕಾರಿ ಕೆಲಸದ ನಿಮಿತ್ತ ತೆರಳುವ ಅಧಿಕಾರಿಗಳು, ಚಾಮುಂಡಿಬೆಟ್ಟದ ಗ್ರಾಮಸ್ಥರ ವಾಹನಗಳು ಮತ್ತು ತುರ್ತು ಸೇವಾ ವಾಹನಗಳನ್ನು ಹೊರತುಪಡಿಸಿ ಇತರ ಸಾರ್ವಜನಿಕ ಹಾಗೂ ಖಾಸಗಿ ವಾಹನಗಳ ಪ್ರವೇಶವನ್ನು ನಿರ್ಭಂಧಿಸಲಾಗಿದೆ.

ದೇವಾಲಯದ ಸಂಪ್ರಾದಾಯ ಮತ್ತು ಪದ್ಧತಿಯಂತೆ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸುವಾಗ ಕೇಂದ್ರ ಮತ್ತು ರಾಜ್ಯ ಸರ್ಕಾರವು ಘೋಷಿಸಲ್ಪಟ್ಟ ಶಿಷ್ಟಾಚಾರ ವ್ಯವಸ್ಥೆ ಹೊಂದಿರುವ ಗಣ್ಯ ವ್ಯಕ್ತಿಗಳು ಹಾಗೂ ಚಾಮುಂಡಿಬೆಟ್ಟದ ಗ್ರಾಮಸ್ಥರಿಗೆ ಮಾತ್ರ ದೇವಾಲಯದಲ್ಲಿ ಪೂಜಾ ಕೈಂಕರ್ಯಗಳಲ್ಲಿ ಪಾಲ್ಗೊಳ್ಳಲು ಅವಕಾಶವಿದೆ.

ಇಂತಹ ಸಂದರ್ಭದಲ್ಲಿ ಕೋವಿಡ್ ಮಾರ್ಗಸೂಚಿ ಅನ್ವಯ ಸೋಂಕು ಹರಡದಂತೆ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳಬೇಕು. ಮಹಾಮಂಗಳಾರತಿ ಮುಕ್ತಾಯಗೊಂಡ ತಕ್ಷಣ ದೇವಾಲಯವನ್ನು ಮುಚ್ಚಲಾಗುತ್ತದೆ.

English summary
Devotees entry banned all Ashada Friday and government holidays at sri Chamundeshwari temple, Chamundi hills Mysuru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X