ಕಾವೇರಿ ಸಂಗಮದಲ್ಲಿ ಸಿಂಘಾಲ್ ಅಸ್ಥಿ ವಿಸರ್ಜನೆ
ಮೈಸೂರು, ನವೆಂಬರ್ 30 : ಇತ್ತೀಚೆಗೆ ನಿಧನರಾದ ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಅಶೋಕ್ ಸಿಂಘಾಲ್ ಅವರ ಅಸ್ಥಿಯನ್ನು ಶ್ರೀರಂಗಪಟ್ಟಣದ ಕಾವೇರಿ ಸಂಗಮದಲ್ಲಿ ಭಾನುವಾರ ವಿಸರ್ಜಿಸಲಾಗಿದೆ. ಸಿಂಘಾಲ್ ಅವರ ಮರಣದಿಂದಾಗಿ ಹಿಂದೂ ರಾಷ್ಟ್ರ ಬಡವಾದಂತೆ ಕಾಣುತ್ತಿದೆ ಎಂದು ವಿಎಚ್ಪಿ ನಾಯಕರು ಈ ಸಂದರ್ಭದಲ್ಲಿ ಹೇಳಿದರು.
ವಿಎಚ್ಪಿ ರಾಜ್ಯ ಉಪಾಧ್ಯಕ್ಷ ರಾಜೇಂದ್ರ ಅವರು ತಂದಿದ್ದ ಸಿಂಘಾಲ್ ಅವರ ಅಸ್ಥಿ ಇದ್ದ ಮಡಿಕೆಗೆ ಭಾನುಪ್ರಕಾಶ್ ಶರ್ಮ ಅವರು ಪಂಚಾಮೃತ ಅಭಿಷೇಕ, ರುದ್ರಾಭಿಷೇಕ ಸೇರಿದಂತೆ ವಿವಿಧ ಪೂಜೆ ನೆರವೇರಿಸಿದರು. ನಂತರ ಕಾವೇರಿ ನದಿಯಲ್ಲಿ ಅಸ್ಥಿ ವಿಸರ್ಜನೆ ಮಾಡಲಾಯಿತು. [ಅಶೋಕ್ ಸಿಂಘಾಲ್ ಇನ್ನಿಲ್ಲ]

ಜ್ಯೋತಿಷಿ ಡಾ. ಭಾನುಪ್ರಕಾಶ್ ಶರ್ಮ ಅವರು ಅಸ್ಥಿ ವಿಸರ್ಜನೆಯ ಕಾರ್ಯವನ್ನು ಸಾಂಪ್ರದಾಯಿಕ ವಿಧಿ ವಿಧಾನಗಳೊಂದಿಗೆ ನೆರವೇರಿಸಿದರು. ವಿಶ್ವ ಹಿಂದೂ ಪರಿಷತ್ ರಾಜ್ಯ ಉಪಾಧ್ಯಕ್ಷ ರಾಜೇಂದ್ರ ಸೇರಿದಂತೆ ಹಲವಾರು ನಾಯಕರು ಈ ಸಂರ್ಭದಲ್ಲಿ ಉಪಸ್ಥಿತರಿದ್ದರು. [ಅಶೋಕ್ ಸಿಂಘಾಲ್ : ಹಿಂದೂತ್ವ ಯೋಧ ಎಂದ ಟ್ವೀಟ್ ಲೋಕ]
ಅಸ್ಥಿ ವಿಸರ್ಜನೆ ಮಾಡಿದ ಬಳಿಕ ಮಾತನಾಡಿದ ರಾಜೇಂದ್ರ ಅವರು, 'ಹಿಂದುತ್ವವನ್ನು ಕಾಪಾಡುವ ದೂರದೃಷ್ಟಿ ಸಿಂಘಾಲ್ ಅವರಲ್ಲಿ ಹೆಚ್ಚಾಗಿತ್ತು. ರಾಮಮಂದಿರ ಸಂಸ್ಥಾಪನೆ ಮಾಡಲು ಹಲವು ಹೋರಾಟ ಮಾಡಿ ಮಂದಿರ ನಿರ್ಮಾಣಕ್ಕೆ ಅಡಿಪಾಯ ಹಾಕಿದರು. ಅವರ ಮರಣದಿಂದ ಹಿಂದೂ ರಾಷ್ಟ್ರ ಬಡವಾದಂತೆ ಕಾಣುತ್ತಿದೆ' ಎಂದು ಹೇಳಿದರು.

ಅನಾರೋಗ್ಯದಿಂದಾಗಿ ಮೃತಪಟ್ಟಿದ್ದರು : ಅಶೋಕ್ ಸಿಂಘಾಲ್ (89) ಅವರು ನವೆಂಬರ್ 17ರಂದು ಗುರ್ ಗಾಂವ್ನ ಮೇಧಾಂತ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದರು. ದೀರ್ಘಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಕೆಲವು ತಿಂಗಳುಗಳಿಂದ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು.

-
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ












Click it and Unblock the Notifications