ವಿಧಾನಸಭೆ ಚುನಾವಣೆ 2023: ವರಿಷ್ಠರು ಸೂಚಿಸಿದರೆ ವರುಣಾ ಕ್ಷೇತ್ರದಿಂದ ಸ್ಪರ್ಧೆ ಎಂದ ಸಿದ್ದರಾಮಯ್ಯ

ಮೈಸೂರು, ಡಿಸೆಂಬರ್, 10: ಮಾಜಿ ಸಿಎಂ ಸಿದ್ದರಾಮಯ್ಯ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬ ಕುತೂಹಲ ರಾಜ್ಯದ ಜನರಲ್ಲಿದೆ. ಇದಕ್ಕೆ ಉತ್ತರ ಎಂಬಂತೆ ಕಳೆದ ಎರಡು ದಿನದಿಂದ ಸಿದ್ದರಾಮಯ್ಯ ಅವರು ವರುಣಾ ಕ್ಷೇತ್ರವನ್ನು ಸುತ್ತಾಡಿ ಬಂದಿದ್ದಾರೆ. ಅಷ್ಟೇ ಅಲ್ಲದೆ, ತಮ್ಮ ಆಪ್ತರೊಂದಿಗೆ ಕೋಲಾರ ಕ್ಷೇತ್ರದಿಂದ ಸ್ಪರ್ಧಿಸುವುದೇ ಅಥವಾ ವರುಣಾ ಕ್ಷೇತ್ರದಿಂದ ಸ್ಪರ್ಧಿಸುವುದೇ ಎಂಬ ಅಭಿಪ್ರಾಯವನ್ನು ಸಂಗ್ರಹಿಸುತ್ತಿದ್ದಾರೆ.

ತಿ.ನರಸೀಪುರ ತಾಲೂಕಿನ ವರುಣ ವಿಧಾನಸಭಾ ಕ್ಷೇತ್ರದ ಇಂಡವಾಳು ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನ ಉದ್ಘಾಟಿಸಿ ಮಾತನಾಡಿದ ಸಿದ್ದರಾಮಯ್ಯ ವರುಣಾದಿಂದ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ. ''ಮುಂದಿನ ವಿಧಾನ ಸಭೆ ಚುನಾವಣೆಯಲ್ಲಿ ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂಬುದನ್ನು ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದೇನೆ. ಆದರೆ, ವರುಣ ಕ್ಷೇತ್ರದಿಂದಲೇ ಕಣಕ್ಕಿಳಿಯುವಂತೆ ಕ್ಷೇತ್ರದ ಜನರು ಒತ್ತಾಯಿಸುತ್ತಿದ್ದಾರೆ. ಈ ಬಗ್ಗೆ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಗಮನಕ್ಕೆ ತರುತ್ತೇನೆ. ವರಿಷ್ಠರು ಸೂಚಿಸಿದರೆ ವರುಣಾ ಕ್ಷೇತ್ರದಿಂದಲೇ ಸ್ಪರ್ಧಿಸುವೆ,'' ಎಂದು ತಿಳಿಸಿದರು.

assembly-election-i-will-contest-from-varuna-constituency-if-by-hycomand-suggest-siddaramaiah

ಹಳೇ ಮೈಸೂರು ಭಾಗದಲ್ಲಿ ಹೆಚ್ಚು ಕ್ಷೇತ್ರಗಳನ್ನ ಗೆಲ್ಲುತ್ತೇವೆ: ಬಸವರಾಜ ಬೊಮ್ಮಾಯಿ ಭವಿಷ್ಯ

ಹೈಕಮಾಂಡ್ ನಿರ್ಧಾರಕ್ಕೆ ಕಾಯುತ್ತಿದ್ದೇನೆ

''ಕ್ಷೇತ್ರದ ಮತದಾರರು, ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರ ಒತ್ತಾಯವನ್ನು ಪಕ್ಷದ ವರಿಷ್ಠರ ಗಮನಕ್ಕೆ ತರುತ್ತೇನೆ. ಹೈಕಮಾಂಡ್ ಯಾವ ನಿರ್ಧಾರ ತೆಗೆದುಕೊಳ್ಳಲಿದೆ ಎಂಬುದನ್ನು ಕಾದು ನೋಡುತ್ತೇನೆ. ಆಮೇಲೆ ಅವರು ಹೇಳಿದ ಕ್ಷೇತ್ರದಲ್ಲಿ ಕಣಕ್ಕಿಳಿಯುತ್ತೇನೆ,'' ಎಂದು ಹೇಳಿದರು. ಇದೇ ಸಂದರ್ಭದಲ್ಲಿ ತಾಲೂಕು ಪಂಚಾಯತಿ ಮಾಜಿ ಅಧ್ಯಕ್ಷ ಜಿ.ಎಸ್. ಪ್ರಕಾಶ್, ಎಚ್.ಸಿದ್ದಪ್ಪ, ಶ್ರೀನಿವಾಸ್ ಜೆಡಿಎಸ್ ಪಕ್ಷವನ್ನು ತೊರೆದು ಕಾಂಗ್ರೆಸ್‌ಗೆ ಸೇರ್ಪಡೆಗೊಂಡರು.

assembly-election-i-will-contest-from-varuna-constituency-if-by-hycomand-suggest-siddaramaiah

ವರುಣಾದಲ್ಲೇ ಸ್ಪರ್ಧಿಸಿ, ಜನರ ಒತ್ತಾಯ

ವೇದಿಕೆಯಲ್ಲಿ ಸಿದ್ದರಾಮಯ್ಯ ವರುಣಾದಿಂದಲೇ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸುತ್ತಿದ್ದಂತೆ ಜನರು ಅವರ ಪರ ಘೋಷಣೆ ಕೂಗಿದರು. ಅಲ್ಲದೆ, ಆಲಗೂಡು ಶಿವಕುಮಾರ್ ಮಾತನಾಡಿ, ದಲಿತ ಮುಖಂಡರ ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಅವರು ಸ್ಪರ್ಧಿಸಿ ಮತ್ತೊಮ್ಮೆ ಮುಖ್ಯಮಂತ್ರಿ ಆಗಬೇಕು ಎಂದಿದ್ದಾರೆ. ಹೀಗೆ ಕಸಬಾ ಹೋಬಳಿಯ ದಲಿತ ಮುಖಂಡರ ಒತ್ತಾಯದ ಪತ್ರವನ್ನು ಎಐಸಿಸಿ ಅಧ್ಯಕ್ಷರಿಗೆ ಬರೆಯಲಾಗಿದೆ ಎಂದರು. ಆಗ ಅಲ್ಲಿ ನೆರೆದಿದ್ದ ಜನರು ಚಪ್ಪಾಳೆಯೊಂದಿಗೆ ಸಿದ್ದರಾಮಯ್ಯನ ಪರ ಘೋಷಣೆಗಳನ್ನು ಮೊಳಗಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+