ಶ್ರೀರಂಗಪಟ್ಟಣ: ಕಾವೇರಿ ನದಿಯಲ್ಲಿ ಲೀನವಾದ ವಾಜಪೇಯಿ ಚಿತಾಭಸ್ಮ
ಮೈಸೂರು, ಆಗಸ್ಟ್ 23: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಚಿತಾಭಸ್ಮವನ್ನು ಶ್ರೀರಂಗಪಟ್ಟಣದ ಪಶ್ವಿಮವಾಹಿನಿಯಲ್ಲಿ ಕಾವೇರಿ ನದಿಗೆ ವಿಸರ್ಜಿಸಲಾಯಿತು.
ಚಿತಾಭಸ್ಮದ ಕಲಶವನ್ನು ಹೊತ್ತು ತಂದ ನಾಯಕರಿಗೆ ಪಶ್ವಿಮವಾಹಿನಿ ಬಳಿ ಕಾರ್ಯಕರ್ತರು ಅದ್ಧೂರಿ ಸ್ವಾಗತ ನೀಡಿದರು.
ವೇ.ಬ್ರ. ಡಾ. ಭಾನುಪ್ರಕಾಶ್ ನೇತೃತ್ವದಲ್ಲಿ ಕಾವೇರಿ ತೀರದಲ್ಲಿ ಪೂಜಾ ಕಾರ್ಯ ನಡೆಯಿತು. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಕೇಂದ್ರ ಸಚಿವ ಅನಂತ್ ಕುಮಾರ್, ಸಂಸದರಾದ ಪ್ರತಾಪ್ ಸಿಂಹ, ಶೋಭಾ ಕರಂದ್ಲಾಜೆ ಮುಂತಾದವರು ಪೂಜೆಯಲ್ಲಿ ಪಾಲ್ಗೊಂಡರು.

ಈ ವೇಳೆ ವಿಧಾನ ಪರಿಷತ್ ವಿರೋಧ ಪಕ್ಷ ನಾಯಕರಾದ ಕೋಟಾ ಶ್ರೀನಿವಾಸ್ ಪೂಜಾರಿ, ಆರ್.ಅಶೋಕ್, ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಇತರರು ಉಪಸ್ಥಿತರಿದ್ದರು.
ಕಣಕಣದಲ್ಲೂ ಅಟಲ್ ಜೀ ಇದ್ದಾರೆ: ಅನಂತ್ ಕುಮಾರ್
ಕರ್ನಾಟಕದ ಕಣಕಣದಲ್ಲೂ ಅಟಲ್ ಬಿಹಾರಿ ವಾಜಪೇಯಿ ಅವರಿದ್ದಾರೆ ಮತ್ತು ಅಟಲ್ ಅವರ ಕಣಕಣದಲ್ಲೂ ಕರ್ನಾಟಕವಿದೆ ಎಂದು ಕೇಂದ್ರ ರಸಗೊಬ್ಬರ ಮತ್ತು ರಾಸಾಯನಿಕ ಹಾಗೂ ಸಂಸದೀಯ ವ್ಯವಹಾರಗಳ ಸಚಿವರಾದ ಅನಂತಕುಮಾರ್ ಹೇಳಿದ್ದಾರೆ.
ಕಾವೇರಿ ನದಿಗೆ ಶ್ರೀರಂಗಪಟ್ಟಣದ ಪಶ್ಚಿಮವಾಹಿನಿಯಲ್ಲಿ ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿಯವರ ಅಸ್ಥಿಯನ್ನು ವಿಸರ್ಜಿಸಿ ಮಾತನಾಡಿದ ಅವರು ಕರ್ನಾಟಕದೊಂದಿಗಿನ ಅವರ ಅವಿನಾಭಾವ ಸಂಬಂಧವನ್ನು ಸ್ಮರಿಸಿದರು.

ಅಟಲ್ ಬಿಹಾರಿ ವಾಜಪೇಯಿಯವರು ನೂರಾರು ಬಾರಿ ಕರ್ನಾಟಕಕ್ಕೆ ಬಂದಿದ್ದಾರೆ. ರಾಜ್ಯದ ಮೂಲೆ ಮೂಲೆಗಳಲ್ಲಿ ಪ್ರವಾಸ ಮಾಡಿದ್ದಾರೆ. ದಶಕಗಳ ಕಾಲ ಲಕ್ಷಾಂತರ ಜನರನ್ನು ತಮ್ಮ ಸ್ಫೂರ್ತಿದಾಯಕ ಮಾತುಗಳಿಂದ ಸಂಬೋಧಿಸಿ ಉದ್ದೀಪನಗೊಳಿಸಿದ್ದಾರೆ ಎಂದು ಕರ್ನಾಟಕದೊಂದಿಗಿನ ಅವರ ನಂಟನ್ನು ಮೆಲುಕುಹಾಕಿದರು.
ವಿಶ್ವಮಾನ್ಯರಾಗಿರುವ ಅವರ ಸಮಾನತೆ, ಸಾಮಾಜಿಕ ನ್ಯಾಯ ಮತ್ತು ಅವರ ಜೀವನ ವಿಚಾರ ಮುಂದಿನ ಪೀಳಿಗೆಗೆ ಪ್ರೇರಣೆಯಾಗಿರುತ್ತದೆ ಎಂದರು.

ಅಟಲ್ ಜೀಯವರ ಅಸ್ಥಿಯನ್ನು ಕಾವೇರಿ ನದಿಯ ಪಶ್ಚಿಮ ವಾಹಿನಿಯಲ್ಲಿ ವಿಸರ್ಜಿಲಾಗಿದೆ. ನಾಳೆಯೂ ವಿವಿಧ ಮುಖಂಡರು ನೇತ್ರಾವತಿ, ತುಂಗಭದ್ರ, ಮಲಪ್ರಭಾ, ಕೃಷ್ಣಾ ಸೇರಿದಂತೆ ರಾಜ್ಯದ ಎಂಟು ನದಿಗಳಲ್ಲಿ ಚಿತಾಭಸ್ಮ ವಿಸರ್ಜಿಸಲಿದ್ದಾರೆ ಎಂದರು.
ಉತ್ತರ ಮತ್ತು ದಕ್ಷಿಣದ ನದಿಗಳ ಜೋಡಣೆ ಅಟಲ್ ಜೀ ಅವರ ಕನಸಾಗಿತ್ತು. ಕಾವೇರಿ ಮತ್ತು ಗಂಗಾ ಸೇರಿದಂತೆ 36 ನದಿಗಳ ಜೋಡಿಸುವ ಕನಸನ್ನು ಹೊಂದಿದ್ದ ಅವರು ಈ ಮೂಲಕ ಇಡೀ ದೇಶದ ರೈತರಿಗೆ ಸುಜಲಾಂ ಸುಫಲಾಂ ಸಾಧಿಸುವ ಸಂಕಲ್ಪ ಹೊಂದಿದ್ದರು ಎಂದು ಹೇಳಿದರು.

ಅಸ್ಥಿ ಕಳಶ ಯಾತ್ರೆಯುದ್ದಕ್ಕೂ 'ಅಟಲ್ ಜೀ ಅಮರವಾಗಲೀ' ಮತ್ತು 'ಚಿರಾಯುವಾಗಲಿ' ಎಂಬ ಘೋಷಣೆಯ ಮೂಲಕ ಸಾವಿರಾರು ಜನರು ಶ್ರದ್ಧಾಂಜಲಿ ಮತ್ತು ಪುಷ್ಪನಮನ ಅರ್ಪಿಸಿದರು.
-
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
Shame on You: ಸೆರಗ ಸರ್ಸೆ ಡಬಲ್ ಮೀನಿಂಗ್ ಹಾಡಿಗೆ ಕನ್ನಡಿಗರ ಆಕ್ರೋಶ-ಶೋಭಾ ಮಳವಳ್ಳಿ ಬರಹ -
ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆ: ಟೆನ್ಷನ್ ಬಿಡಿ, ರಿಲಾಕ್ಸ್ ಆಗಿರಿ; ಕೊನೆಯ ಕ್ಷಣದ ಸಿದ್ಧತೆಗೆ ಇಲ್ಲಿವೆ ಟಿಪ್ಸ್ -
Bengaluru Rain: ಬೆಂಗಳೂರಿನ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ: ಯುಗಾದಿಗೆ ಮೊದಲ ಮಳೆ; ರಾಜ್ಯಕ್ಕೆ ಶುಭಸೂಚಕ












Click it and Unblock the Notifications