ಮೈಸೂರಿನಲ್ಲಿ ತಮಿಳು ಚಿತ್ರ ಪ್ರದರ್ಶನಕ್ಕೆ ಅಡ್ಡಿ
ಮೈಸೂರು, ಅಕ್ಟೋಬರ್ 18: ಬೆಂಗಳೂರಿನ ಸಂಪಿಗೆ ಚಿತ್ರ ಮಂದಿರದಲ್ಲಿ ಕನ್ನಡಿಗರ ಮೇಲೆ ಹಲ್ಲೆ ನಡೆಸಿದ್ದಾರೆಂಬ ಆರೋಪದ ಹಿನ್ನೆಲೆಯಲ್ಲಿ ತಮಿಳು ಚಿತ್ರ ಪ್ರದರ್ಶನಕ್ಕೆ ಕನ್ನಡ ಪರ ಸಂಘಟನೆಗಳು ತಡೆಯೊಡ್ಡಿವೆ.
ಬುಧವಾರ ಮೈಸೂರಿನ ಪ್ರಭಾ ಸಿನಿಮಾ ಚಿತ್ರಮಂದಿರದಲ್ಲಿ ಪ್ರದರ್ಶನಗೊಳ್ಳುತ್ತಿರುವ ತಮಿಳು ಚಿತ್ರಕ್ಕೆ, ತಮಿಳಿಗರು ಕನ್ನಡಿಗರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಮೈಸೂರಿನ ಕನ್ನಡ ಪರವೇದಿಕೆಯ ಕಾರ್ಯಕರ್ತರು ಚಿತ್ರ ಪ್ರದರ್ಶನಕ್ಕೆ ತಡೆಯೊಡ್ಡಿ ಚಿತ್ರಮಂದಿರದ ಎದುರು ಪ್ರತಿಭಟನೆ ನಡೆಸುತ್ತಿವೆ.

ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಭಟನಾಕಾರರು ಕನ್ನಡಿಗರ ಮೇಲೆ ಹಲ್ಲೆ ನಡೆಸಿರುವವರನ್ನು ಬಂಧಿಸುವಂತೆ ಒತ್ತಾಯಿಸಿವೆ. ಕೊನೆಗೂ ತಮಿಳು ನಟ ವಿಜಯ್ ಚಿತ್ರ ಪ್ರದರ್ಶನ ಸ್ಥಗಿತಗೊಂಡಿದ್ದು, ಥಿಯೇಟರ್ ಮಾಲೀಕ ಕುಂಜಪ್ಪ ಚಿತ್ರ ಪ್ರದರ್ಶನವನ್ನು ಸ್ಥಗಿತಗೊಳಿಸಿದ್ದಾರೆ.












Click it and Unblock the Notifications